SUDDIKSHANA KANNADA NEWS/ DAVANAGERE/ DATE:19-08-2023
ಚಿಕ್ಕಮಗಳೂರು (Chikmagalur): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪದ ಧರ್ಮಸ್ಥಳದ ಸಮೀಪದಲ್ಲಿ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಎಲ್ಲೆಡೆ ಒತ್ತಾಯ ಕೇಳಿ ಬರುತ್ತಿದೆ. ಚಿಕ್ಕಮಗಳೂರಿ(Chikmagalur)ನಲ್ಲಿಯೂ ಈ ಕೂಗು ಎದ್ದಿದೆ.
ಈ ಸುದ್ದಿಯನ್ನೂ ಓದಿ:
Davanagere: ಸೌಜನ್ಯಳ ಹತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗುವವರೆಗೆ ಹೋರಾಟ, ಹಿಂದೂ ಧರ್ಮ ನಾಶಕ್ಕೆ ಮುಂದಾದರೆ ಬಾಂಬರ್ ಗಳಾಗ್ತೇವೆ: ಮಹೇಶ್ ಶೆಟ್ಟಿ ತಿಮ್ಮರೋಡಿ
ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷೆ ಬಿ. ಎಂ. ಮಂಜುಳಾ ಅವರು ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ತಂಡದ ವತಿಯಿಂದ ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸಬೇಕು. ಯಾರೇ ತಪ್ಪು ಮಾಡಿದ್ರೂ ಶಿಕ್ಷೆಯಾಗಬೇಕು. ಸೌಜನ್ಯಳ ಸಾವಿಗೆ ನ್ಯಾಯ ಸಿಗಬೇಕು ಎಂದು ಮಂಜುಳಾ ಅವರು ಒತ್ತಾಯಿಸಿದ್ದಾರೆ.
ಸೌಜನ್ಯಳ ಸಾವಿನ ಸುದ್ದಿ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿಯೂ ಸದ್ದು ಮಾಡಿತ್ತು. ಸಿಬಿಐ ಕೂಡ ತನಿಖೆ ನಡೆಸಿತ್ತು. ರಾಷ್ಟ್ರ ಘಟಕ ಹಾಗೂ ರಾಜ್ಯ ಘಟಕದ ಆದೇಶದ ಮೇರೆಗೆ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಮಂಜುಳಾ ಬಿ. ಎಂ. ಅವರು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಸೌಜನ್ಯ ಪ್ರಕರಣವನ್ನು ಮರುತನಿಗೆ ಮಾಡಬೇಕೆಂದು ಸಂಸ್ಥೆ ವತಿಯಿಂದ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ಜಿಲ್ಲಾಧ್ಯಕ್ಷ ಅಮರ್, ಮನು, ಗಿರೀಶ್, ಭಾಗೀರಥಿ, ಪ್ರೇಕ್ಷಾ, ಅಶೋಕ್, ದುರ್ಗ ಮತ್ತಿತರರು ಹಾಜರಿದ್ದರು.