ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಾಮಗೊಂಡನಹಳ್ಳಿಯಲ್ಲಿ ಬಾಲ್ಯ ವಿವಾಹ ನಿಲ್ಲಿಸಿದ 112 ಪೊಲೀಸರು!

On: November 12, 2025 9:30 PM
Follow Us:
ಬಾಲ್ಯ ವಿವಾಹ
---Advertisement---

SUDDIKSHANA KANNADA NEWS/DAVANAGERE/DATE:12_11_2025

ದಾವಣಗೆರೆ: ತಾಲೂಕಿನ ರಾಮಗೊಂಡನಹಳ್ಳಿ ಗ್ರಾಮದಲ್ಲಿ ಅಪ್ರಾಪ್ತಳಿಗೆ ವಿವಾಹ ಮಾಡುತ್ತಿದ್ದಾರೆ ಎಂದು 112 ಹೊಯ್ಸಳಕ್ಕೆ ಕರೆ ಬಂದಿದ್ದು, ಕೂಡಲೇ ಘಟನಾ ಸ್ಥಳಕ್ಕೆ 112 ಕರ್ತವ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ವೇಳೆ ಬಾಲ್ಯ ವಿವಾಹ  ನಿಲ್ಲಿಸಿದ ಘಟನೆ ನಡೆದಿದೆ.

ಈ ಸುದ್ದಿಯನ್ನೂ ಓದಿ: ಐಟಿ ಬಿಟಿ ಹಬ್ ಆಗಲಿದೆ ದಾವಣಗೆರೆ: 60 ದಿನಗಳಲ್ಲಿ10ಕ್ಕಿಂತ ಹೆಚ್ಚು ಐಟಿ ಕಂಪನಿಗಳ ಆಗಮನದ ನಿರೀಕ್ಷೆ!

ಅಪ್ರಾಪ್ತ ಸಂತ್ರಸ್ತೆಗೆ ವಿವಾಹ ಮಾಡಲು ಸಿದ್ದತೆ ನಡೆಸಿರುವುದು ಕಂಡುಬಂದಿದ್ದು, ಅಪ್ರಾಪ್ತ ಸಂತ್ರಸ್ತೆಯ ಪೋಷಕರಿಗೆ ಬಾಲ್ಯ ವಿವಾಹ ಮಾಡುವುದು ಕಾನೂನು ಬಾಹಿರ. ಅಪ್ರಾಪ್ತರಿಗೆ ವಿವಾಹ ಮಾಡಬಾರದೆಂದು ಸೂಕ್ತ ತಿಳುವಳಿಕೆ ನೀಡಿದ್ದು, ನಂತರ ದಾವಣಗೆರೆ ಜಿಲ್ಲೆಯ ಎಸಿಡಿಪಿಒ ಅಧಿಕಾರಿಗಳಿಗೆ ಮಾಹಿತಿ ನೀಡಿ ಘಟನಾ ಸ್ಥಳಕ್ಕೆ ಕರೆಸಿದ್ದಾರೆ.

ಮುಂದಿನ ಕ್ರಮಕ್ಕೆ ಅಪ್ರಾಪ್ತ ಸಂತ್ರಸ್ತೆಯನ್ನು ಅವರ ವಶಕ್ಕೆ ನೀಡಲಾಗಿದೆ. ಬಾಲ್ಯ ವಿವಾಹ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಬಾಲ್ಯ ವಿವಾಹವನ್ನು ತಡೆಗಟ್ಟುವಲ್ಲಿ \ಯಶಸ್ವಿಯಾದ 112 ಕರ್ತವ್ಯದಲ್ಲಿದ್ದ ಮಹಿಳಾ ಹೆಡ್ ಕಾನ್ ಸ್ಟೇಬಲ್ ಸವಿತಾ ಹಾಗೂ ಚಾಲಕ ಸಿದ್ದೇಶ್ ಪುಟಗನಾಳ್ ಅವರನ್ನು ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಅವರು ಪ್ರಶಂಸಿಸಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment