ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Mayakonda:ಮಾಯಕೊಂಡದಲ್ಲಿ ಅಸ್ವಸ್ಥಗೊಂಡಿದ್ದ ಮಕ್ಕಳು ಗುಣಮುಖ: ಆಸ್ಪತ್ರೆಗೆ ದಾಖಲಾಗಿದ್ದ ಎಲ್ಲಾ ಮಕ್ಕಳು ಬಿಡುಗಡೆ

On: September 7, 2023 3:45 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE: 07-09-2023

ದಾವಣಗೆರೆ: ತಾಲೂಕಿನ ಮಾಯಕೊಂಡ (Mayakonda) ಎಸ್ಸಿ ಮತ್ತು ಎಸ್ಟಿ ಪ್ರತಿಭಾನ್ವಿತ ಬಾಲಕಿಯರ ವಸತಿ ಪ್ರೌಢಶಾಲೆಯಲ್ಲಿ ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಕ್ಕಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಈ ಸುದ್ದಿಯನ್ನೂ ಓದಿ: 

Davanagere: ಡಿವೈಡರ್ ಗೆ ಬೈಕ್ ಡಿಕ್ಕಿ, ಬ್ರಿಡ್ಜ್ ಮೇಲಿಂದ ಕೆಳಕ್ಕೆ ಬಿದ್ದ ಇಬ್ಬರ ಸ್ಥಿತಿ ಏನಾಯಿತು…? ಸ್ಥಳಕ್ಕೆ ಬಂದ ಎಸ್ಪಿ ಹೇಳಿದ್ದೇನು…?

ಮಂಗಳವಾರ ರಾತ್ರಿ ಮತ್ತು ಬುಧವಾರ ಬೆಳಗ್ಗೆ ವಿಷಪೂರಿತ ಆಹಾರ ಸೇವಿಸಿ 38ಮಕ್ಕಳು ಅಸ್ವಸ್ಥಗೊಂಡಿದ್ದರು. ಕೂಡಲೇ ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಆ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿತ್ತು. ಅದರಲ್ಲಿ 16 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸಂಜೆ ವೇಳೆಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಆರೋಗ್ಯವಾಗಿದ್ದ ಕೆಲವು ಮಕ್ಕಳನ್ನು ಪೋಷಕರೊಂದಿಗೆ ಮನೆಗೆ ಕಳುಹಿಸಲಾಯಿತು. ಗುರುವಾರ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಎಲ್ಲಾ ಮಕ್ಕಳು
ಆರೋಗ್ಯವಾಗಿ ಸ್ಥಿರವಾಗಿದ್ದಾರೆ ಎಂದು ವೈದ್ಯರು ಹೇಳಿದ ಹಿನ್ನೆಲೆಯಲ್ಲಿ ಆ ಮಕ್ಕಳನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ
ಡಾ.ಗೋವಿಂದರಾಜು ತಿಳಿಸಿದ್ದಾರೆ.

ನೀರಿನ ಮಾದರಿ, ಆಹಾರ ಪರೀಕ್ಷೆ:

ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿಯ ಸಾಂಕ್ರಾಮಿಕ ರೋಗಶಾಸ್ತಜ್ಞರು ಹಾಗೂ ಕಚೇರಿ ಸಿಬ್ಬಂದಿ ಬುಧವಾರ ಭೇಟಿ ನೀಡಿ ಆಹಾರ ಮತ್ತು ಆಹಾರ ಪದಾರ್ಥಗಳನ್ನು ಪರಿಶೀಲಿಸಿದರು. ಬಳಿಕ ಆಹಾರ ಮತ್ತು ಸುರಕ್ಷಿತ ಪ್ರಭಾರ ಅಧಿಕಾರಿ ಡಾ.ನಾಗರಾಜ್ ಹಾಗೂ ಸಿಬ್ಬಂದಿಗಳು ಆಹಾರ ಮತ್ತು ಆಹಾರ ಪದಾರ್ಥಗಳನ್ನು ಹೆಚ್ಷಿನ ಪರೀಕ್ಷೆಗಾಗಿ ದಾವಣಗೆರೆ ಡಿಪಿಎಚ್ ಎಲ್ ಬೆಂಗಳೂರಿನ ಡಿಪಿಎಚ್ಎಲ್ ಪ್ರಾಯೋಗಾಲಯಕ್ಕೆ ಕಳುಹಿಸಿದ್ದು, ಫಲಿತಾಂಶದ ನಿರೀಕ್ಷೆಯಲಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಯೋಗಾಲಯ ಶಾಲಾ ತಂತ್ರಜ್ಞರು ಕುಡಿಯುವ ನೀರಿನ ಮೂಲಗಳನ್ನು ತಕ್ಷಣವೇ ಒಳಪಡಿಸಿದ್ದು, ವರದಿಯು ಕುಡಿಯಲು ಯೋಗ್ಯವಿದೆ ಎಂದು ಬಂದಿದೆ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ವಿನಾಯಕ ತಿಳಿಸಿದ್ದಾರೆ.

ತುರ್ತು ಚಿಕಿತ್ಸೆ ಗಾಗಿ ಸ್ಥಳೀಯ ವೈದ್ಯಾಧಿಕಾರಿಗಳನ್ನು ವಸತಿ ನಿಲಯಕ್ಕೆ ನೇಮಿಸಿದ್ದಾರೆ. ವಸತಿ ಶಾಲೆಗೆ ಭೇಟಿ: ಗುರುವಾರ ಸ್ಥಳೀಯ ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ವಿನಾಯಕ, ಸಿಬ್ಬಂದಿ ಹಾಗೂ ಪ್ರಾ.ಆ.ಕೇಂದ್ರ ಹುಚ್ಚವ್ವನಹಳ್ಳಿಯ ಆಡಳಿತ ವೈದ್ಯಾಧಿಕಾರಿ ಡಾ.ಧೀರಜ್, ಆರೋಗ್ಯ ನಿರೀಕ್ಷಣಾಧಿಕಾರಿ ಎ. ಪಿ. ಪ್ರಸನ್ನಕುಮಾರ್ ವಸತಿ ಶಾಲೆಗೆ ಭೇಟಿ ನೀಡಿ, ವಸತಿ ಶಾಲೆಯಲ್ಲಿ ತಯಾರಿಸಿದ್ದ ಆಹಾರ, ಸ್ವಚ್ಛತೆ, ಕುಡಿಯುವ ನೀರು ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಪರೀಕ್ಷೆ ಮಾಡಿದ್ದಾರೆ. ಮುಂದೆ ಇಂತಹ ಘಟನೆಗಳು ಮರು ಕಳುಹಿಸದಂತೆ ಶಾಲೆಯ ಪ್ರಾಂಶುಪಾಲರು, ಅಡುಗೆ ಸಿಬ್ಬಂದಿಗೆ ಸೂಚಿಸಿದ್ದಾರೆ. ಹಾಗೂ ಮಾಯಕೊಂಡಕ್ಕೆ ಸಂಬಂಧಿಸಿದ ಎಲ್ಲಾ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment