SUDDIKSHANA KANNADA NEWS/DAVANAGERE/DATE:28_10_2025
ದಾವಣಗೆರೆ: ಜಿಲ್ಲೆಯಲ್ಲಿ ಪ್ರಸ್ತುತ ಮಳೆ, ಮೋಡ ಕವಿದ ವಾತಾವರಣ ಹಾಗೂ ತಾಪಮಾನ ಏರುಪೇರುನಿಂದ ಮೆಣಸಿನಕಾಯಿ ಬೆಳೆಗೆ ಹೊಸ ಥ್ರಿಪ್ಸ್ ನುಸಿ (ಥ್ರಿಪ್ಸ್ ಪಾರ್ವಿಸ್ಪಿನಸ್) ಕೀಟ ಸೇರಿದಂತೆ ಎಲೆ ಮುಟುರು ರೋಗ, ಬೂದಿ ರೋಗ, ಹಣ್ಣು ಕೊಳೆ ರೋಗದ ನಿರ್ವಹಣೆಗೆ ರೈತರು ಸೂಕ್ತ ಕ್ರಮ ಅನುಸರಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: ಮಂಗಳೂರು ಗಲಭೆ ಹತೋಟಿಗೆ ಬಂದಿದ್ದೇ ನಮ್ಮ ಪ್ರಾಮಾಣಿಕ ಅಧಿಕಾರಿಗಳಿಂದಲೇ: ಸಿಎಂ ಸಿದ್ದರಾಮಯ್ಯ
ಪ್ರಸಕ್ತ ಸಾಲಿನಲ್ಲಿ ಸಿರುಗುಪ್ಪ ತಾಲ್ಲೂಕಿನಲ್ಲಿ 3920 ಹೆಕ್ಟೇರ್ ಗಿಂತ ಹೆಚ್ಚು ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆಯಲಾಗಿದೆ. ಕಳೆದ ವರ್ಷಗಳಲ್ಲಿ ಮೆಣಸಿನಕಾಯಿ ಬೆಳೆಗೆ ಭಾದಿಸಿದ್ದ ಹಲವು ರೋಗಗಳು ಪ್ರಸ್ತುತದಲ್ಲಿಯೂ ಭಾದಿಸುತ್ತಿವೆ. ಇದರಿಂದ ಮೆಣಸಿನಕಾಯಿ ಬೆಳೆಯ ಇಳುವರಿ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದ್ದು, ರೈತರು ಅಗತ್ಯ ಮುಂಜಾಗ್ರತಾ ಕ್ರಮವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಥ್ರಿಪ್ಸ್ ನುಸಿ:
ಈ ರೋಗದಲ್ಲಿ ಪ್ರೌಢ ಕೀಟಗಳು ಗುಂಪು ಗುಂಪಾಗಿ ಎಲೆಗಳ ಕೆಳಭಾಗದಲ್ಲಿ, ಹೂಗಳ ಒಳಗೆ ಮತ್ತು ಹೊರಗೆ ಕಂಡುಬರುತ್ತವೆ. ಮರಿ ಹಂತದ ನುಸಿಗಳು ಎಲೆಗಳ ಕೆಳಭಾಗದಲ್ಲಿ ಕೇಂದ್ರೀಕೃತಗೊಂಡಿರುತ್ತವೆ.
ಕೀಟಗಳು ಸಸ್ಯದ ಬಹುಭಾಗಗಳಿಂದ ರಸ ಹೀರುವುದರಿಂದ ಸಸ್ಯದ ಬೆಳವಣಿಗೆ ಕುಂಠಿತಗೊಳ್ಳುತ್ತದೆ. ಎಲೆಗಳ ಅಂಚುಗಳು ಮೇಲ್ಮುಖವಾಗಿ ಮುದುಡುವುದು, ಹೂಗಳು ಉದುರುವುದು ಮತ್ತು ಬೆಳವಣಿಗೆ ಹಂತದಲ್ಲಿರುವ ಚಿಗುರುಗಳು ಗುಂಪಾಗಿ ಹೂಬಿಡದೇ ಒಣಗುವುದು ಸಾಮಾನ್ಯವಾಗಿ ಕಂಡುಬರುವ ಹಾನಿಯ ಲಕ್ಷಣಗಳಾಗಿವೆ. ಕಾಲ ಕ್ರಮೇಣ, ಕಾಯಿಗಳ ಸಂಖ್ಯೆ ಕಡಿಮೆಯಾಗಿ ಇಳುವರಿಯು ಗಣನೀಯ ಪ್ರಮಾಣದಲ್ಲಿ ಕುಂಠಿತಗೊಳ್ಳುತ್ತದೆ.
ನಿರ್ವಹಣಾ ಕ್ರಮ:
ರೈತರು ತಮ್ಮ ಮೆಣಸಿನಕಾಯಿ ಬೆಳೆಯ ಹೊಲದ ಸುತ್ತಲೂ 2-3 ಸಾಲು ಜೋಳ, ಮೆಕ್ಕೆಜೋಳ, ಸಜ್ಜೆಯನ್ನು ಬೇಲಿ ಬೆಳೆಯಾಗಿ ದಟ್ಟವಾಗಿ ಬಿತ್ತುವುದರಿಂದ ಕೀಟಗಳ ಪ್ರಸಾರ ನಿಯಂತ್ರಿಸಬಹುದು. ಹೊಲ ಮತ್ತು ಬದುಗಳ ಸ್ವಚ್ಛತೆಯಿಂದ ಥ್ರೀಪ್ಸ್ ನುಸಿಗಳಿಗೆ ಆಸರೆ ನೀಡುವ ಕಳೆಗಳ ನಿರ್ಮೂಲನೆ ಮಾಡಬಹುದು. ಸೂಕ್ತ ಅಂತರ (90*30 ಸೆಂ.ಮೀ/60*45 ಸೆಂ.ಮೀ) ಕಾಪಾಡಬೇಕು.
ಚೆನ್ನಾಗಿ ಕೊಳೆತ ಕೊಟ್ಟಿಗೆ ಗೊಬ್ಬರದೊಡನೆ ಮೆಟಾರೈಜಿಯಮ್ ಅನಿಸೋಪ್ಲಿಯೆ ಎಂಬ ಶಿಲೀಂಧ್ರ ಕೀಟನಾಶಕದಿಂದ (2-3 ಕೆ.ಜಿ/ಟನ್) ಮೌಲ್ಯವರ್ಧನೆಗೊಳಿಸಿ ಹೊಲಗಳಿಗೆ ಹಾಕಬೇಕು. ಬೇವಿನ ಹಿಂಡಿ (200 ಕೆ.ಜಿ/ಎಕರೆಗೆ) ಮತ್ತು ಎರೆಹುಳು ಗೊಬ್ಬರವನ್ನು (500 ಕೆ.ಜಿ/ಎಕರೆಗೆ) ಮಣ್ಣಿನಲ್ಲಿ ಬೆರೆಸುವುದರಿಂದ ನಿರೋಧಕ ಶಕ್ತಿ ವೃದ್ಧಿಗೊಳ್ಳುತ್ತದೆ.
ಶಿಫಾರಸ್ಸು ಪ್ರಮಾಣದ ರಸಗೊಬ್ಬರದೊಂದಿಗೆ ಪೊಟ್ಯಾಶ್‌ನ ಬಳಕೆ ವೃದ್ಧಿಸುವುದರಿಂದ ಕೀಟ ನಿರೋಧಕ ಶಕ್ತಿ ಹೆಚ್ಚುತ್ತದೆ. ನೀಲಿ ಅಂಟಿನ ಬಲೆಗಳನ್ನು @ 25-30/ಎಕರೆಗೆ ಬೆಳೆಯ ಎತ್ತರಕ್ಕೆ ಅಳವಡಿಸಬೇಕು. ಆಗಾಗ ಕುಂಟೆಯೊಡೆಯುವುದರಿAದ ಕೋಶಾವಸ್ಥೆಯಲ್ಲಿರುವ ಥ್ರಿಪ್ಸ್ ನುಸಿಯನ್ನು ನಾಶಪಡಿಸಬಹುದು.
ಸಾಧ್ಯವಾದಲ್ಲಿ ಕಾಲುವೆ ಮುಖಾಂತರ ನೀರುಣಿಸುವ ಬದಲು ತುಂತುರು ನೀರಾವರಿ ಅಥವಾ ಹನಿ ನೀರಾವರಿ ಪದ್ಧತಿ ಅಳವಡಿಸಬೇಕು. ಸಿಲ್ವರ್ ಬಣ್ಣದ ಪ್ಲಾಸ್ಟಿಕ್ ಶೀಟ್ (25-30 ಮೈಕ್ರಾನ್) ನಿಂದ ಮಲ್ಚಿಂಗ್ ಮಾಡುವುದರಿಂದ ಮಣ್ಣಿನಲ್ಲಿ ಕೋಶಾವಸ್ಥೆಗೆ ಹೋಗುವುದನ್ನು ತಡೆಯಬಹುದು. ತೀವ್ರ ಭಾದೆಗೊಳಗಾದ ಗಿಡಗಳನ್ನು ಕಿತ್ತುಗುಂಡಿಯಲ್ಲಿ ಮುಚ್ಚಬೇಕು ಅಥವಾ ಸುಡಬೇಕು.
ಪರಭಕ್ಷಕ/ಮಿತ್ರ ಕೀಟಗಳ ವೃದ್ಧಿಗಾಗಿ ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕ ಕೀಟನಾಶಕಗಳ ಬದಲು ಪರಿಸರ ಸ್ನೇಹಿ ಕೀಟನಾಶಕಗಳಾದ ಶೇ.5 ರ ಬೇವಿನ ಬೀಜದ ಕಷಾಯ, ಬೇವಿನ ಎಣ್ಣೆ (3000 ಪಿ.ಪಿ.ಎಂ) @ 2 ಮಿ.ಲೀ/ಲೀ, ಹೊಂಗೆ ಎಣ್ಣೆ @ 3 ಮಿ.ಲೀ/ಲೀ ನೀರಿಗೆ ಬೆರೆಸಿ ಸಿಂಪಡಿಸಬೇಕು.
ಶಿಲೀಂಧ್ರ ಕೀಟನಾಶಕಗಳಾದ ಬಿವೇರಿಯಾ ಬಸ್ಸಿಯಾನ ಅಥವಾ ಲೆಕ್ಯಾನಿಸಿಲಿಯಂ ಲೆಕ್ಯಾನಿ ಅಥವಾ ಮೆಟಾರೈಜಿಯಮ್ ಅನಿಸೋಪ್ಲಿಯೇಯನ್ನು @ 4 ಗ್ರಾಂ/ಲೀ ನೀರಿಗೆ ಬೆರೆಸಿ ಸಿಂಪಡಿಸಬೇಕು. ಅವಶ್ಯಕತೆಗನುಸಾರವಾಗಿ ಶಿಫಾರಸ್ಸು ಮಾಡಿರುವ ರಾಸಾಯನಿಕ ಕೀಟನಾಶಕಗಳದ 0.3 ಮಿ.ಲೀ ಇಮಿಡಾಕ್ಲೋಪ್ರಿಡ್ 17.8 ಎಸ್.ಎಲ್ ಅಥವಾ 0.2 ಗ್ರಾಂ. ಥಯೋಮೆಥಾಕ್ಸಾಮ್ 25 ಡಬ್ಲೂö್ಯ.ಜಿ ಅಥವಾ 1.0 ಮಿ.ಲೀ ಫಿಪ್ರೋನಿಲ್ 5 ಎಸ್.ಸಿ ಅಥವಾ 1.0 ಗ್ರಾಂ. ಡಯಾಫೆನ್ ಥಯೂರಾನ್ 50 ಡಬ್ಲೂö್ಯ.ಪಿ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು ಎಂದು ಅವರು ತಿಳಿದ್ದಾರೆ.
ಎಲೆ ಮುಟುರು ರೋಗ:
ಈ ರೋಗವನ್ನು ಹಳದಿ ಮಿಶ್ರಿತ ಹಸಿರು ಭಾಗವನ್ನು ಎಲೆಯಲ್ಲಿ ಕಾಣಬಹುದು. ಎಲೆಗಳು ವಕ್ರಾಕಾರದ ಅಥವಾ ಮುಟುರು ಎಲೆಗಳನ್ನು ಕಾಣಬಹುದು. ಆ ಮೇಲೆ ಗಿಡಗಳ ಬೆಳವಣಿಗೆ ಕುಂಠಿತಗೊಳ್ಳುತ್ತದೆ. ಮುಟುರು ರೋಗದ ಬಾಧೆ ತಡೆಗಟ್ಟಲು ಶೇ.0.5 ರ ಬೆಳ್ಳೊಳ್ಳಿ, ಹಸಿಮೆಣಸಿನಕಾಯಿ, ಸೀಮೆ ಎಣ್ಣೆ ಕಷಾಯವನ್ನು ಬೇವು ಜನ್ಯ ಕೀಟನಾಶಕದೊಂದಿಗೆ (2.5 ಮಿ. ಲೀ ಪ್ರತಿ ಲೀಟರ್ ನೀರಿಗೆ) ಬೆರಸಿ ಅವಶ್ಯವಿದ್ದಾಗ ಸಿಂಪರಣೆ ಮಾಡಬೇಕು.
ಪ್ರಮುಖವಾಗಿ ಮೆಣಸಿನಕಾಯಿಯಲ್ಲಿ ಬೆಳೆಯಲ್ಲಿ ಬರುವ ಥಿಪ್ಸ್, ಮೈಟ್ಸ್, ಬಿಳಿ ನೋಣ ಹಾಗೂ ರಸಹಿರುವ ಕೀಟಗಳ ನಿರ್ವಹಣೆ ಮಾಡುವುದು ಎಲೆ ಮುಟುರು ರೋಗದ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸಿತ್ತದೆ. ಕೀಟನಾಶಕಗಳದ 0.3 ಮಿ.ಲೀ ಇಮಿಡಾಕ್ಲೋಪ್ರಿಡ್ 17.8 ಎಸ್.ಎಲ್ ಅಥವಾ 0.2 ಗ್ರಾಂ. ಥಯೋಮೆಥಾಕ್ಸಾಮ್ 25 ಡಬ್ಲೂö್ಯ.ಜಿ ಅಥವಾ 1.0 ಮಿ.ಲೀ ಫಿಪ್ರೋನಿಲ್ 5 ಎಸ್.ಸಿ ಅಥವಾ 1.0 ಗ್ರಾಂ. ಡಯಾಫೆನ್ ಥಯೂರಾನ್ 50 ಡಬ್ಲೂö್ಯ.ಪಿ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು.
ಬೂದಿ ರೋಗ:
ಈ ರೋಗದಲ್ಲಿ ಬೂದು ಬಣ್ಣದ ಮಚ್ಚೆಗಳನ್ನು ಎಲೆಯಲ್ಲಿ ಕಾಣಬಹುದು. ಈ ರೋಗ ಕಂಡು ಬಂದಲ್ಲಿ 1 ಗ್ರಾಂ ಕಾರ್ಬಂಡೈಜಿಮ್ ಅಥವಾ 3 ಗ್ರಾಂ ನೀರಿನಲ್ಲಿ ಕರಗುವ ಗಂಧಕ ಒಂದು ಲೀಟರ್ ನೀರಿನಲ್ಲಿ ಬೆರಸಿ ಸಿಂಪಡಿಸಬೇಕು. ರೋಗ ಲಕ್ಷಣಗಳು ಕಡಿಮೆಯಾಗದ್ದಿದಲ್ಲಿ ಇದೇ ಸಿಂಪರಣೆಯನ್ನು 15 ದಿನಗಳ ಅಂತರದಲ್ಲಿ ಇನ್ನೂ ಎರಡು ಬಾರಿ ಕೈಗೊಳ್ಳಬಹುದು.
ಇಲ್ಲವೇ 1 ಗ್ರಾಂ ಅಜೋಕ್ಸಿಸ್ಟೊಬಿನ್ 23% ಎಸ್‌ಟಿ ರೋಗ ನಾಷಕವನ್ನು ಪ್ರತಿ ಲೀಟರ್ ನೀರಿಗೆ ಬೇರಸಿ ಸಿಂಪಡಿಸಬಹುದು ಅಥವಾ ಹೆಕ್ಸಾಕೋನಜೋಲ್ 2 % ಎಸ್‌ಸಿ ರೋಗ ನಾಷಕವನ್ನು ಪ್ರತಿ ಲೀಟರ್ ನೀರಿಗೆ ಬೇರಸಿ ಸಿಂಪಡಿಸಬಹುದು.
ಹಣ್ಣು ಕೊಳೆ ರೋಗ:
ಈ ರೋಗದಲ್ಲಿ ಹಣ್ಣುಗಳ ಮೇಲೆ ವೃತ್ತಾಕಾರದ ತಗ್ಗಾದ ಕಪ್ಪನೆಯ ಚುಕ್ಕೆಗಳು ಕಾಣಿಸಿಕೊಳ್ಳುತ್ತವೆ. ಒಳಗಿನ ಬಣ್ಣವು ಗುಲಾಬಿ ವರ್ಣದಿಂದ ಕೂಡಿರುತ್ತದೆ. ಆ ಮೇಲೆ ಕಪ್ಪಾಗುತ್ತವೆ. ಮೆಣಸಿನಕಾಯಿ ಬೆಳೆಗೆ ತುದಿ ಸಾಯುವ ರೋಗ, ಹಣ್ಣು ಕೊಳೆಯುವ ರೋಗ ಹಾಗೂ ಬೂದಿ ರೋಗಗಳು ಕಂಡು ಬಂದಾಗ 1 ಗ್ರಾಂ ಕಾರ್ಬಂಡೈಜಿಮ್ ಪ್ರತಿ ಲೀಟರ್ ನೀರಿನಲ್ಲಿ ಬೆರಸಿ 15 ದಿನಗಳ ಅಂತರದಲ್ಲಿ ನಾಲ್ಕು ಸಾರಿ ಸಿಂಪಡಿಸಬೇಕು.
ಇಲ್ಲವೇ 1 ಗ್ರಾಂ ಅಜೋಕ್ಸಿಸ್ಟೊಬಿನ್ 23% ಎಸ್‌ಟಿ ರೋಗ ನಾಷಕವನ್ನು ಪ್ರತಿ ಲೀಟರ್ ನೀರಿಗೆ ಬೇರಸಿ ಸಿಂಪಡಿಸಬಹುದು ಅಥವಾ ಹೆಕ್ಸಾಕೋನಜೋಲ್ 2 % ಎಸ್‌ಸಿ ರೋಗ ನಾಷಕವನ್ನು ಪ್ರತಿ ಲೀಟರ್ ನೀರಿಗೆ ಬೇರಸಿ ಸಿಂಪಡಿಸಬಹುದು.
ಈ ಮೇಲ್ಕಂಡ ಎಲ್ಲಾ ಅಗತ್ಯವಿರುವ ನಿರ್ವಹಣಾ ಕ್ರಮಗಳನ್ನು ಪಾಲಿಸಿಕೊಂಡು ರೈತರು ಸಕಾಲದಲ್ಲಿ ಮೆಣಸಿನಕಾಯಿ ಬೆಳೆಗೆ ಔಷಧಿಗಳನ್ನು ಸೂಕ್ತ ರೀತಿಯಲ್ಲಿ ಸಿಂಪಡಿಸಿ ಉತ್ತಮ ಗುಣಮಟ್ಟದ ಇಳುವರಿ ಪಡೆಯಬಹುದು ಎಂದು ಸಿರುಗುಪ್ಪದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






