Home ಕ್ರೈಂ ನ್ಯೂಸ್ ಚಿತ್ರದುರ್ಗದಲ್ಲಿ ಬೆಂಕಿ ಘಟನೆಗೆ ನೋವು ವ್ಯಕ್ತಪಡಿಸಿದ ಮೋದಿ: ಮೃತರಿಗೆ 2 ಲಕ್ಷ, ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಚಿತ್ರದುರ್ಗದಲ್ಲಿ ಬೆಂಕಿ ಘಟನೆಗೆ ನೋವು ವ್ಯಕ್ತಪಡಿಸಿದ ಮೋದಿ: ಮೃತರಿಗೆ 2 ಲಕ್ಷ, ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ

Share
Share

ಚಿತ್ರದುರ್ಗ: ಚಿತ್ರದುರ್ಗ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಬೆಂಕಿಯಲ್ಲಿ ಸಾವನ್ನಪ್ಪಿದ ಪ್ರಯಾಣಿಕರ ಕುಟುಂಬಗಳಿಗೆ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಆರ್ಥಿಕ ನೆರವು ಘೋಷಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಖಾಸಗಿ ಸ್ಲೀಪರ್ ಬಸ್ಸೊಂದು ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ನವೆಂಬರ್ ಆರಂಭದಲ್ಲಿ ತೆಲಂಗಾಣದಲ್ಲಿಯೂ ಇದೇ ರೀತಿಯ ಅಪಘಾತ ವರದಿಯಾಗಿತ್ತು, ಇದರಲ್ಲಿ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಪ್ರಯಾಣಿಕರ ಬಸ್ ಜಲ್ಲಿ ತುಂಬಿದ ಟ್ರಕ್‌ಗೆ ಡಿಕ್ಕಿ ಹೊಡೆದು 20 ಜನರು ಸಾವನ್ನಪ್ಪಿದ್ದರು. ಹೈದರಾಬಾದ್‌ನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.

ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಈ ಬಸ್‌ನಲ್ಲಿ 70 ಪ್ರಯಾಣಿಕರಿದ್ದರು ಎಂದು ವರದಿಯಾಗಿತ್ತು. ವಿಕಾರಾಬಾದ್ ಜಿಲ್ಲೆಯ ತಂದೂರ್‌ನಿಂದ ಹೈದರಾಬಾದ್‌ಗೆ ಪ್ರಯಾಣಿಸುತ್ತಿದ್ದಾಗ ನಿರ್ಮಾಣ ಸಾಮಗ್ರಿಗಳನ್ನು ತುಂಬಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಟ್ರಕ್‌ನಲ್ಲಿ ತುಂಬಿದ್ದ ಜಲ್ಲಿಕಲ್ಲು ಬಸ್‌ಗೆ ಬಿದ್ದು ಹಲವಾರು ಪ್ರಯಾಣಿಕರು ಸತ್ತು ಹೋಗಿದ್ದರು.

Share

Recent Posts

Recent Comments

No comments to show.
Related Articles