Home ಕ್ರೈಂ ನ್ಯೂಸ್ ಚಿತ್ರದುರ್ಗದ ಭೀಕರ ಅಪಘಾತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ, ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ ಸರ್ಕಾರ
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಚಿತ್ರದುರ್ಗದ ಭೀಕರ ಅಪಘಾತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ, ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ ಸರ್ಕಾರ

Share
Share

SUDDIKSHANA KANNADA NEWS/DAVANAGERE/DATE:25_12_2025

ಬೆಂಗಳೂರು: ಚಿತ್ರದುರ್ಗದಲ್ಲಿ‌ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಿದೆ.

ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ‌ ಲಭಿಸಲಿ‌ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

Share

Leave a comment

Leave a Reply

Your email address will not be published. Required fields are marked *