ಹೊಸಪೇಟೆ: ಈ ಬಾರಿಯ ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆ.28ರಿಂದ ಮೂರು ದಿನಗಳ ಕಾಲ ನಡೆಸಲು ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಸಿಎಂ ಅಸ್ತು ಎಂದಿದ್ದಾರೆ.
ವಿಜಯನಗರದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಬೆಳಗ್ಗೆ ಈ ಸಂಬಂಧ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಒಪ್ಪಿಗೆ ಪಡೆದಿದ್ದಾರೆ, ಫೆ.28ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿ ಉತ್ಸವವನ್ನು ಉದ್ಘಾಟಿಸಲಿದ್ದಾರೆ.
ಮಾರ್ಚ್ 01 ಮತ್ತು 02ರಂದು ಕಾರ್ಯಕ್ರಮ ನಡೆಯಲಿದೆ, ಹಂಪಿ ಉತ್ಸವಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲು ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ಅವರಿಗೆ ಉಸ್ತುವಾರಿ ಸಚಿವರು ಸೂಚಿಸಿದ್ದಾರೆ.