Site icon Kannada News-suddikshana

ವಿಶ್ವ ವಿಖ್ಯಾತ ಹಂಪಿ ಉತ್ಸವಕ್ಕೆ ಸಿಎಂ ಅಸ್ತು…!

ಹೊಸಪೇಟೆ: ಈ ಬಾರಿಯ ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆ.28ರಿಂದ ಮೂರು ದಿನಗಳ‌ ಕಾಲ ನಡೆಸಲು ಇಂದು ಬೆಳಗ್ಗೆ ಬೆಂಗಳೂರಿನಲ್ಲಿ‌ ಸಿಎಂ ಅಸ್ತು ಎಂದಿದ್ದಾರೆ.

ವಿಜಯನಗರದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಬೆಳಗ್ಗೆ ಈ ಸಂಬಂಧ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಒಪ್ಪಿಗೆ ಪಡೆದಿದ್ದಾರೆ, ಫೆ.28ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿ ಉತ್ಸವವನ್ನು ಉದ್ಘಾಟಿಸಲಿದ್ದಾರೆ.

ಮಾರ್ಚ್ 01 ಮತ್ತು 02ರಂದು ಕಾರ್ಯಕ್ರಮ ನಡೆಯಲಿದೆ, ಹಂಪಿ ಉತ್ಸವಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲು ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ಅವರಿಗೆ ಉಸ್ತುವಾರಿ ಸಚಿವರು ಸೂಚಿಸಿದ್ದಾರೆ.

Exit mobile version