• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Friday, May 9, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಕೆಪಿಎಸ್ ಸಿ ಭ್ರಷ್ಟಾಚಾರ ಮುಕ್ತವಾಗ್ಬೇಕು: ಸದನದಲ್ಲಿ ವಿಪಕ್ಷಗಳ ಆರೋಪಕ್ಕೆ ಸಿದ್ದರಾಮಯ್ಯ ಕೊಟ್ಟ ಉತ್ತರದ ಕಂಪ್ಲೀಟ್ ಡೀಟೈಲ್ಸ್!

Editor by Editor
March 12, 2025
in ದಾವಣಗೆರೆ, ಬೆಂಗಳೂರು
0
ಕೆಪಿಎಸ್ ಸಿ ಭ್ರಷ್ಟಾಚಾರ ಮುಕ್ತವಾಗ್ಬೇಕು: ಸದನದಲ್ಲಿ ವಿಪಕ್ಷಗಳ ಆರೋಪಕ್ಕೆ ಸಿದ್ದರಾಮಯ್ಯ ಕೊಟ್ಟ ಉತ್ತರದ ಕಂಪ್ಲೀಟ್ ಡೀಟೈಲ್ಸ್!

SUDDIKSHANA KANNADA NEWS/ DAVANAGERE/ DATE:12-03-2025

ಬೆಂಗಳೂರು: ಕೆಪಿಎಸ್ ಸಿ ಭ್ರಷ್ಟಾಚಾರದಿಂದ ಮುಕ್ತವಾಗಬೇಕು. ಇದರಿಂದ ತೊಲಗಬೇಕು ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ವಿಪಕ್ಷಗಳ ಆರೋಪಕ್ಕೆ ಸುದೀರ್ಘವಾಗಿ ಉತ್ತರ ಕೊಟ್ಟಿದ್ದಾರೆ.

ದಿನಾಂಕ 4/3/2025 ರಂದು ವಿರೋಧ ಪಕ್ಷದ ಸದಸ್ಯರು ನಿಲುವಳಿ ಸೂಚನೆಯನ್ನು ಮಂಡಿಸಿದ್ದಾರೆ. ನಿಲುವಳಿ ಸೂಚನೆಯನ್ನು ನಿಯಮ 69 ಕ್ಕೆ ಪರಿವರ್ತಿಸಿ ಚರ್ಚೆಗೆ ಅವಕಾಶ ಮಾಡಿಕೊಡಲಾಗಿದೆ. ಈ ಕುರಿತು ವಿರೋಧ ಪಕ್ಷದ ನಾಯಕರಾದಿಯಾಗಿ ಹಲವರು ಮಾತನಾಡಿದ್ದಾರೆ. ನಿಲುವಳಿ ಸೂಚನೆಯು ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆಯಲ್ಲಿ ಕನ್ನಡ ಭಾಷಾಂತರದಲ್ಲಿ ಉಂಟಾಗಿರುವ ಲೋಪಗಳ ಕುರಿತು ಹಾಗೂ ಪರೀಕ್ಷೆಗಳು ನಡೆದು ಸಂದರ್ಶನಗಳನ್ನು ಮಾಡದೆ ಲೋಪ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ರವರು ಕೆ.ಪಿ.ಎಸ್.ಸಿ.ಯನ್ನು ರೋಗಗ್ರಸ್ತ ಸಂಸ್ಥೆಯೆಂದು ಹಾಗೂ ಹುದ್ದೆಗಳಿಗೆ ರೇಟ್ ಫಿಕ್ಸ್ ಮಾಡುವ ಬಗ್ಗೆ ಮಾತನಾಡಿದ್ದಾರೆ.

ಆರ್.ಅಶೋಕ್ ಮತ್ತು ವಿರೋಧ ಪಕ್ಷದ ಸದಸ್ಯರುಗಳು ಕೆಪಿಎಸ್ಸಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಪ್ರಸ್ತುತ ನಡೆಯುತ್ತಿರುವ ಗೆಜೆಟೆಡ್ ಪ್ರೊಬೇಷರ‍್ಸ್ ಪರೀಕ್ಷೆಯಲ್ಲಿ ಕನ್ನಡ ಅನುವಾದಗಳನ್ನು ತಪ್ಪು ಮಾಡಲಾಗಿದೆ. ತಪ್ಪು ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ತಪ್ಪು ಮಾಡಿದ ಕಾರಣದಿಂದ ಉಂಟಾಗಿರುವ 30 ಕೋಟಿ ರೂ ನಷ್ಟವನ್ನು ತಪ್ಪಿತಸ್ಥರಿಂದ ವಸೂಲು ಮಾಡಬೇಕು. ಪರೀಕ್ಷೆ ನಡೆಸಲು ಈ ಹಿಂದೆ ಮಾಡಿರುವ ಅಧಿಸೂಚನೆಯನ್ನು ರದ್ದು ಮಾಡಿ ಹೊಸ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಜೊತೆಗೆ ಕೆಪಿಎಸ್‌ಸಿಯ ಸಮಗ್ರ ಬದಲಾವಣೆಯಾಗಬೇಕು ಎಂದೂ ಸಹ ಸಲಹೆ ನೀಡಿದ್ದಾರೆ.

ಕೆಪಿಎಸ್‌ಸಿ ಸರಿಯಾಗಬೇಕು ಎಂಬ ಈ ಸದನದ ಕಳಕಳಿ ಸರಿಯಾಗಿದೆ. ನಮ್ಮ ಸರ್ಕಾರದ ಕಳಕಳಿ ಕೂಡ ಅದೇ ಆಗಿದೆ. ಅಧಿಕಾರಿಗಳ ಆಯ್ಕೆ ಪ್ರಕ್ರಿಯೆಗಳು ಕಳಂಕರಹಿತವಾಗಿರಬೇಕು, ದಕ್ಷರೂ, ಪ್ರಾಮಾಣಿಕರೂ ಆದ ಅಧಿಕಾರಿಗಳು ರಾಜ್ಯದ ಆಡಳಿತ ಸೇವೆಗೆ ಬರಬೇಕು ಎಂಬ ಉದ್ದೇಶ, ಕಳಕಳಿ ನಮ್ಮದೂ ಆಗಿದೆ.

ಮೈಸೂರು ಅರಸರ ಅವಧಿಯಲ್ಲಿ ಮೈಸೂರು ಸಿವಿಲ್ ಸರ್ವಿಸ್ ಎಂಬುದು ದೇಶದಲ್ಲಿಯೆ ಪ್ರತಿಷ್ಠಿತ ಸೇವೆಯಾಗಿತ್ತು. ನಾಲ್ವಡಿ ಕೃಷ್ಣರಾಜ ಒಡೆಯರ್ ಮುಂತಾದವರು ಈ ಕುರಿತು ಗಮನಾರ್ಹ ಕೆಲಸ ಮಾಡಿದ್ದಾರೆ. ಆಯೋಗವು ತನ್ನ ಹಿಂದಿನ ಮರ್ಯಾದೆ ಹಾಗೂ ವೈಭವವನ್ನು ಮರಳಿ ತರುವ ಕೆಲಸ ಮಾಡಬೇಕು. ದೊಡ್ಡ ಪರಂಪರೆಯುಳ್ಳ ಕರ್ನಾಟಕ ಆಡಳಿತ ಸೇವೆಗೆ ಸೇರಬಯಸುವ ಅಧಿಕಾರಿಗಳ ಆಯ್ಕೆ ಮಾಡಿಕೊಡುವುದರಲ್ಲಿ ಆಯೋಗವು ಮತ್ತೆ ಮತ್ತೆ ತಪ್ಪುಗಳನ್ನು ಮಾಡುತ್ತಿದೆ.

ಕೆಪಿಎಸ್‌ಸಿಯನ್ನು ಸರಿಪಡಿಸಬೇಕು. ಆಯೋಗವು ಮುಕ್ತ ಮತ್ತು ನ್ಯಾಯಸಮ್ಮತವಾದ ರೀತಿಯಲ್ಲಿ ಪರೀಕ್ಷೆಗಳನ್ನು ನಡೆಸಿ ಅಧಿಕಾರಿಗಳನ್ನು ಆಯ್ಕೆ ಮಾಡಿಕೊಡಬೇಕು ಎಂಬ ಉದ್ದೇಶದಿಂದ 2013 ರ ಜುಲೈನಲ್ಲಿ ನಮ್ಮ ಸರ್ಕಾರವೇ ಪಿ.ಸಿ ಹೋಟಾ ಅವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿದ್ದೆವು. ಸಮಿತಿಯಲ್ಲಿ ಹಿರಿಯ ಐಎಎಸ್ ಅಧಿಕಾರಿಗಳಾಗಿದ್ದ ಕೌಶಿಕ್ ಮುಖರ್ಜಿ ಮತ್ತು ಸಂಜೀವ್ ಕುಮಾರ್ ಅವರು ಸದಸ್ಯರಾಗಿದ್ದರು. ಈ ಸಮಿತಿಯು ನೀಡಿದ್ದ ಬಹುಪಾಲು ಶಿಫಾರಸ್ಸುಗಳನ್ನು ನಾವು ಅನುಷ್ಠಾನಕ್ಕೆ ತಂದಿದ್ದೆವು.

1997 ರಿಂದ 2011 ರವರೆಗಿನ ಹಲವು ಪರೀಕ್ಷೆಗಳಲ್ಲಿ ನಡೆದಿದ್ದ ಅವ್ಯವಸ್ಥೆಗಳ ಕಾರಣದಿಂದಲೇ ಈ ಸಮತಿಯನ್ನು ರಚಿಸಿದ್ದೆವು. ಹೋಟಾ ಸಮಿತಿಯ ಶಿಫಾರಸ್ಸುಗಳಲ್ಲಿ ಕಂಟ್ರೋಲರ್ ಆಫ್ ಎಕ್ಸಾಮಿನೇಶನ್ ಹೊರ ರಾಜ್ಯದವರಾಗಿರಬೇಕು ಎಂಬ ಅಂಶವೂ ಇತ್ತು. ಅದನ್ನೂ ಅನುಷ್ಠಾನ ಮಾಡಲಾಗಿದೆ. ಈ ಅಧಿಕಾರಿಗಳಿಗೆ ಕನ್ನಡದ ಜ್ಞಾನದ ಕೊರತೆಯೂ ಇರುತ್ತದೆ. ಜನರ ಸಂಪರ್ಕ ಹೆಚ್ಚು ಇರದ, ನೆಂಟರು, ಇಷ್ಟರು ಮುಂತಾದ ಬಾಧ್ಯತೆಗಳಿಲ್ಲದವರು ಈ ಕಂಟ್ರೋಲರ್ ಆಫ್ ಎಕ್ಸಾಮಿನೇಶನ್ ಆಗಬೇಕೆಂಬುದು ಪಿ.ಸಿಹೋಟಾ ಸಮಿತಿಯ ಶಿಫಾರಸ್ಸು. ಸದುದ್ದೇಶದ ಕಾರಣದಿಂದ ಇದನ್ನು ಮಾಡಲಾಗಿದೆ. ಹಾಗಿದ್ದರೆ ಸಮಸ್ಯೆಗಳೆಲ್ಲಿ ಆಗಿವೆ ಎಂದು ಅಧಿಕಾರಿಗಳಲ್ಲಿ ಕೇಳಿದೆ. ಪ್ರಶ್ನೆಗಳನ್ನು ತಯಾರಿಸುವ ಕರ್ನಾಟಕದ ಅಧ್ಯಾಪಕರುಗಳಿಗೆ ಕನ್ನಡ ಅನುವಾದ ಮಾಡಲಾಗದ ದುಸ್ಥಿತಿ ಇದೆ ಎಂದರು. ಇಂಗ್ಲೀಷಿನಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿ ನಂತರ ಕನ್ನಡಕ್ಕೆ ಅನುವಾದ ಮಾಡಲಾಗುತ್ತಿದೆ ಎಂದರು.

ಇದನ್ನೆಲ್ಲ ಆಯೋಗವು ಸೂಕ್ಷ್ಮವಾಗಿ ನಿಭಾಯಿಸಬೇಕು. ಈ ಕಾರಣಕ್ಕೆ ಆಯೋಗವನ್ನು ನೇಮಿಸಲಾಗಿರುತ್ತದೆ. ಸಿದ್ಧಪಡಿಸುವ ಪ್ರಶ್ನೆಗಳು ಪರೀಕ್ಷೆಗೆ ಮೊದಲು ಯಾರಿಗೂ ಗೊತ್ತಾಗಬಾರದು ಜೊತೆಗೆ ಪ್ರಶ್ನೆ ಪತ್ರಿಕೆ ಗುಣ ಮಟ್ಟದ್ದಾಗಿರಬೇಕು. ಈ ಷರತ್ತಿನೊಡನೆ ಆಯೋಗವು ಪರೀಕ್ಷೆ ನಡೆಸಬೇಕು. ಆದರೆ ಪದೇ ಪದೇ ಎಡಹುತ್ತಿದೆ.

ಲೋಕಸೇವಾ ಆಯೋಗಗಳ ಕುರಿತು ಸರ್ಕಾರಗಳು ನೇರವಾಗಿ ಯಾವುದೇ ಕ್ರಮಗಳನ್ನು ಕೈಗೊಳ್ಳುವಂತಿಲ್ಲ. ಇದು ಸಂವಿಧಾನಬದ್ಧವಾದ ಸಂಸ್ಥೆಯಾಗಿದೆ. ಲೋಕ ಸೇವಾ ಆಯೋಗಗಳು ಆರ್ಟಿಕಲ್ 315 ರಂತೆ ರಚನೆಯಾಗಿವೆ. ಲೋಕ ಸೇವಾ ಆಯೋಗಗಳ ಸದಸ್ಯರನ್ನು ತೆಗೆದು ಹಾಕಲು ಸುಪ್ರೀಂಕೋರ್ಟಿನ ಒಪ್ಪಿಗೆಯೊಂದಿಗೆ ರಾಷ್ಟçಪತಿಗಳು ಆರ್ಟಿಕಲ್ 317 ರಂತೆ ತೆಗೆದು ಹಾಕಬೇಕು.

ಹಾಗೆಂದು ಹೇಳಿ ನಾವು ಕೈಕಟ್ಟಿ ಕೂತುಕೊಳ್ಳುವಂತೆ ಇಲ್ಲ. ಏನಾದರೂ ಮಾಡಲೇಬೇಕು. ಸದನದ ಸದಸ್ಯರು ಮಾತನಾಡಸುವಾಗ ಸಲಹೆಗಳನ್ನು ನೀಡಿದ್ದರೆ ಉತ್ತಮವಿತ್ತು. ಆದರೂ ಸಹ ನಮ್ಮ ಸರ್ಕಾರ ಲೋಕ ಸೇವಾ ಆಯೋಗವನ್ನು ಸರಿದಾರಿಗೆ ತರಲು ಎಲ್ಲ ಪ್ರಯತ್ನಗಳನ್ನೂ ಮಾಡುತ್ತದೆ.

ಆರ್. ಅಶೋಕ ರವರು ಉತ್ತರ ಪ್ರದೇಶದಲ್ಲಿ 25 ಕೋಟಿ ಜನಸಂಖ್ಯೆ ಇರಬಹುದು, ಅಲ್ಲಿ ಕೇವಲ 8 ಜನ ಸದಸ್ಯರಿದ್ದಾರೆ. ಆದರೆ, ರಾಜ್ಯದಲ್ಲಿ 6.5 ಕೋಟಿ ಜನಸಂಖ್ಯೆಯಲ್ಲಿ 16 ಜನ ಸದಸ್ಯರಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಕೆ.ಪಿ.ಎಸ್.ಸಿ.ಯ ಸದಸ್ಯರ ಸಂಖ್ಯೆ ಅಧ್ಯಕ್ಷರೂ ಸೇರಿದಂತೆ 14 ರಿಂದ 16 ಕ್ಕೆ ಏರಿಸಿದ್ದು ಬೊಮ್ಮಾಯಿಯವರ ಸರ್ಕಾರ. ಇರಲಿ ಈ ಕುರಿತೂ ಕೂಡ ನಾವು ಏನಾದರೂ ಕ್ರಮಗಳನ್ನು ತೆಗೆದುಕೊಳ್ಳಲೇಬೇಕು.

ನಾವು ಕೆಪಿಎಸ್‌ಸಿ ಸಿಬ್ಬಂದಿಗಳ ನೇಮಕ, ವರ್ಗಾವಣೆ ಇತ್ಯಾದಿಗಳ ಕುರಿತಂತೆ ನಿಯಮಗಳಿಗೆ ಹಲವಾರು ತಿದ್ದುಪಡಿ ತರಲು ಉದ್ದೇಶಿಸಿದ್ದೇವೆ. ಪ್ರಯತ್ನಗಳನ್ನು ಪ್ರಾರಂಭಿಸಲಾಗಿದೆ.

ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆಯ ವಿಷಯ:-

384 ಹುದ್ದೆಗಳ ಗೆಜೆಟೆಡ್ ಪ್ರೊಬೆಷನರ್ ಪೂರ್ವಭಾವಿ ಪರೀಕ್ಷೆಯನ್ನು ಆಯೋಗವು ಮೊದಲಿಗೆ ದಿನಾಂಕ:27-08-2024 ರಂದು ನಡೆಸಿದ್ದು, ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳ ಕನ್ನಡ ಭಾಷಾಂತರದಲ್ಲಿನ ಲೋಪದೋಷಗಳು ಉಂಟಾಗಿರುವ ಬಗ್ಗೆ ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಲು, ಆಯೋಗವು ವಿಷಯ ತಜ್ಞರುಗಳ ಸಮಿತಿಗಳನ್ನು ರಚಿಸಿದೆ. ಸದರಿ ಸಮಿತಿಯು ಭಾಷಾಂತರದ ಲೋಪದಿಂದಾಗಿ ಎರಡೂ ಪತ್ರಿಕೆಗಳಿಂದ ಒಟ್ಟು 10 ಪ್ರಶ್ನೆಗಳ ಕೀ-ಉತ್ತರಗಳು ಪರಿಷ್ಕೃತಗೊಳ್ಳಲಿವೆ ಎಂಬ ಅಭಿಪ್ರಾಯವನ್ನು ನೀಡಿದ್ದರು.

ಆದಾಗ್ಯೂ, ಆಯೋಗವು ಮರು ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿ, ದಿನಾಂಕ:29-12-2024ರಂದು ಮರುಪರೀಕ್ಷೆಯನ್ನು ನಡೆಸಲಾಗಿರುತ್ತದೆ. ಸದರಿ ಮರು ಪರೀಕ್ಷೆಯಲ್ಲಿಯೂ ಸಹ ಕನ್ನಡ ಪ್ರಶ್ನೆಪತ್ರಿಕೆಯಲ್ಲಿನ ಬಾಷಾಂತರದಲ್ಲಿ ಲೋಪವಿರುವುದಾಗಿ ದೂರುಗಳು ಸ್ವೀಕೃತವಾದ ಹಿನ್ನೆಲೆಯಲ್ಲಿ ಆಯೋಗವು ವಿಷಯ ತಜ್ಞರುಗಳ ಸಮಿತಿಗಳನ್ನು ಮತ್ತೊಮ್ಮೆ ರಚಿಸಿದ್ದು, ಸದರಿ ಸಮಿತಿಯು ಎರಡೂ ಪತ್ರಿಕೆಗಳನ್ನು ಪರಿಶೀಲಿಸಿ, ಒಟ್ಟು 6 ಪ್ರಶ್ನೆಗಳು ತಪ್ಪಾಗಿದ್ದು, ಕೃಪಾಂಕ ನೀಡಬಹುದೆಂದು ಅಭಿಪ್ರಾಯಿಸಿರುತ್ತಾರೆ.

ಇಂತಹ ಪ್ರಕರಣಗಳಲ್ಲಿ ವಿಷಯ ತಜ್ಞರ ಸಮಿತಿಯು ನೀಡುವ ಅಭಿಪ್ರಾಯಗಳನ್ನು ಪರಿಗಣಿಸುವುದನ್ನು ಉತ್ತರ ಪ್ರದೇಶ ಸರ್ವಿಸ್ ಕಮಿಷನ್ V/s ರಾಹುಲ್ ಸಿಂಗ್ ಪ್ರಕರಣ ಸಂಖ್ಯೆ:C.A.No.5838/2018, ದಿನಾಂಕ:14-06-2018 ರಲ್ಲಿ ಮಾನ್ಯ ಸರ್ವೋಚ್ಛ ನ್ಯಾಯಾಲಯವು ಎತ್ತಿ ಹಿಡಿದಿದೆ.

ಈ ಹಿಂದಿನ ಪರೀಕ್ಷೆಗಳ ತುಲನಾತ್ಮಕ ದತ್ತಾಂಶ ವಿಶ್ಲೇಷಣೆಯನ್ವಯ 2023-24ನೇ ಸಾಲಿನಲ್ಲಿ ಕನ್ನಡ ಮಾಧ್ಯಮ ಪರೀಕ್ಷೆಯನ್ನು ತೆಗೆದುಕೊಂಡು ಮುಖ್ಯ ಪರೀಕ್ಷೆಗೆ ಅರ್ಹರಾದ ಕನ್ನಡ ಮಾಧ್ಯಮ ಅಭ್ಯರ್ಥಿಗಳ ಸಂಖ್ಯೆಯು ಕಳೆದ ಸಾಲಿನ ನೇಮಕಾತಿಗೆ ಹೋಲಿಸಿದಲ್ಲಿ ಶೇ.6.50 ರಷ್ಟು ಹೆಚ್ಚಳವಾಗಿರುತ್ತದೆಂದು ಆಯೋಗವು ಮಾಧ್ಯಮಗಳಿಗೆ ಪ್ರಕಟ ಮಾಡಿದೆ.

ಈಗಾಗಲೇ ಮುಖ್ಯ ಪರೀಕ್ಷೆಗೆ ಅರ್ಜಿಗಳನ್ನು ಆಹ್ವಾನಿಸಿ, ಆಯೋಗವು ಅಧಿಸೂಚನೆಯನ್ನು ಹೊರಡಿಸಿದ್ದು, ಇದನ್ನು ಪ್ರಶ್ನಿಸಿ ಕೆಲವು ಅಭ್ಯರ್ಥಿಗಳು ನ್ಯಾಯಾಲಯದಲ್ಲಿ ಪ್ರಕರಣ ಸಂಖ್ಯೆ: A.No.285-308/2025 ದಾಖಲಿಸಿದ್ದು, ಮಾನ್ಯ ಕರ್ನಾಟಕ ಆಡಳಿತ ನ್ಯಾಯ ಮಂಡಳಿಯಲ್ಲಿ ಪ್ರಕರಣ ಬಾಕಿ ಇರುತ್ತದೆ.

ಪ್ರಸ್ತುತ ಪ್ರಕರಣವು ನ್ಯಾಯಾಲಯದಲ್ಲಿ ಬಾಕಿ ಇರುವುದರಿಂದ ಈ ಹಂತದಲ್ಲಿ ಸರ್ಕಾರವು ಯಾವುದೇ ನಿರ್ಣಯವನ್ನು ಕೈಗೊಳ್ಳುವುದು ನ್ಯಾಯೋಚಿತವಾಗಿರುವುದಿಲ್ಲ. ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾದ ನಂತರ ಆಯೋಗವು ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಸರ್ಕಾರವು ಆಯೋಗಕ್ಕೆ ಸೂಚನೆ ನೀಡುತ್ತದೆ. ಈ ಹಂತದಲ್ಲಿ ಸರ್ಕಾರವು ಯಾವುದೇ ಕ್ರಮಗಳನ್ನು ಕೈಗೊಳ್ಳಲು ಬರುವುದಿಲ್ಲ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಸಹಾಯಕ ಕಾರ್ಯಪಾಲಕ ಅಭಿಯಂತರರ ನೇಮಕಾತಿ ಪ್ರಕರಣದ ಬಗ್ಗೆಯೂ ಸಿಎಂ ಮಾತನಾಡಿದರು.

ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಸಹಾಯಕ ಕಾರ್ಯಪಾಲಕ ಅಭಿಯಂತರರು 25 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆಯನ್ನು ನಡೆಸಿ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ:31-01-2024 ರಂದು ಪ್ರಕಟಿಸಿರುತ್ತದೆ. ತಾತ್ಕಾಲಿಕ ಆಯ್ಕೆಪಟ್ಟಿಗೆ ಶ್ರೀ ಆನಂದ್ ಎಸ್.ಸಿದ್ಧಾರೆಡ್ಡಿ ಇವರು ದಿನಾಂಕ:25-09-2023 ರಂದು ಸಲ್ಲಿಸಿರುವ ಆಕ್ಷೇಪಣೆಯನ್ನು ಪರಿಶೀಲಿಸುವ ಸಲುವಾಗಿ ಆಯೋಗದಲ್ಲಿರುವ ಸದಸ್ಯರುಗಳನ್ನೊಳಗೊಂಡ ಸದಸ್ಯರ ಸಮಿತಿಯನ್ನು ಆಯೋಗವು ರಚಿಸಿ ಅಂತಿಮ ವರದಿಯನ್ನು ಈ ಕೆಳಕಂಡ ಪ್ರಮುಖ ಶಿಫಾರಸ್ಸುಗಳೊಂದಿಗೆ ಸರ್ಕಾರಕ್ಕೆ ಸಲ್ಲಿಸಿರುತ್ತದೆ.

ಅಭ್ಯರ್ಥಿಗಳ ಅಭ್ಯರ್ಥಿತ್ವವನ್ನು ರದ್ದುಪಡಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದು. ಇನ್ನುಳಿದ ಕಳಂಕರಹಿತ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಜಾರಿ ಮಾಡುವುದು. ಸದರಿ ಸಮಿತಿಯ ವರದಿಯನ್ನು ಸರ್ಕಾರಕ್ಕೆ ಕಳುಹಿಸಿ ಪ್ರಕರಣದ ಸತ್ಯಾಸತ್ಯತೆಯನ್ನು ತಿಳಿಯುವ ಸಲುವಾಗಿ ಹೆಚ್ಚಿನ ತನಿಖೆಯನ್ನು ಪೊಲೀಸ್/ ಸಿಐಡಿ ಮುಖಾಂತರ ಮಾಡಿಸುವುದು.

ಆಯ್ಕೆಯಾದ ಅಭ್ಯರ್ಥಿ ಶ್ರೀ ವಿಶ್ವಾಸ್.ಎಸ್ ಇವರು ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ಪ್ರಕರಣ ಸಂಖ್ಯೆ:W.P.NO.5310/2025 ಅನ್ನು ದಾಖಲಿಸಿದ್ದು, ಈ ಸಂಬಂಧ ನ್ಯಾಯಾಲಯವು “ಈ ಪ್ರಕರಣದಲ್ಲಿ ಮುಂದಿನ ವಿಚಾರಣೆವರೆಗೆ ಯಾವುದೇ ಕ್ರಮಕೈಗೊಳ್ಳದಂತೆ ” ನಿರ್ದೇಶನ ನೀಡಿದೆ. ಪ್ರಕರಣ ಇತ್ಯರ್ಥ ಆದ ಕೂಡಲೇ ಈ ಕುರಿತು ಕ್ರಮವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸುದೀರ್ಘವಾಗಿ ಉತ್ತರ ನೀಡಿದರು.

Next Post
ಕೆಪಿಎಸ್ ಸಿ ನೇಮಕಾತಿ ಅಕ್ರಮ ತಡೆಗೆ ಸರ್ಕಾರದ ಸುಧಾರಣಾ ಕ್ರಮಗಳೇನು? ಸಿಎಂ ಕೊಟ್ಟ ಮಾಹಿತಿ ಏನು…?

ಕೆಪಿಎಸ್ ಸಿ ನೇಮಕಾತಿ ಅಕ್ರಮ ತಡೆಗೆ ಸರ್ಕಾರದ ಸುಧಾರಣಾ ಕ್ರಮಗಳೇನು? ಸಿಎಂ ಕೊಟ್ಟ ಮಾಹಿತಿ ಏನು...?

Leave a Reply Cancel reply

Your email address will not be published. Required fields are marked *

Recent Posts

  • ಎಲ್ಲಾ ಟಿ-20 ಐಪಿಎಲ್ ಪಂದ್ಯಗಳ ರದ್ದುಗೊಳಿಸಿದ ಬಿಸಿಸಿಐ
  • ಐಪಿಎಲ್ ಟಿ-20 ಟೂರ್ನಮೆಂಟ್ ರದ್ದಾಗುತ್ತಾ? ಐಪಿಎಲ್ ಅಧ್ಯಕ್ಷರು ಹೇಳಿದ್ದೇನು…?
  • ಬಾಂಬ್ ಇಟ್ಕೊಂಡು ಹೋಗೋ ಬದ್ಲು ಭಾರತದೊಳಗಿರುವ ಪಾಕಿಗಳನ್ನ ಜಮೀರ್ ಅಹ್ಮದ್ ಹೊಡೆದಾಕಲಿ: ಎಂ. ಪಿ. ರೇಣುಕಾಚಾರ್ಯ ಟಾಂಗ್!
  • ಜಾಗತಿಕ ಭಿಕ್ಷೆ ಬೇಡಿದ್ದ ಪಾಕ್ ಎಕ್ಸ್ ಖಾತೆಯೇ ಹ್ಯಾಕ್: ಪಾಕ್ ಆರ್ಥಿಕ ವ್ಯವಹಾರಗಳ ಸಚಿವಾಲಯಕ್ಕೆ ಶಾಕ್!
  • ಐಸಿ-814 ವಿಮಾನ ಅಪಹರಣದ ಮಾಸ್ಟರ್‌ಮೈಂಡ್ ಅಬ್ದುಲ್ ರೌಫ್ ಅಜರ್ ಆಪ್ ಖತಂ: ಯಾರು ಈ ಉಗ್ರ?

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In