ಬೆಂಗಳೂರು: ಸಿಎಂ ಬದಲಾವಣೆಗಾಗಿ ಕಾಂಗ್ರೆಸ್ಸಿನ ಒಕ್ಕಲಿಗ ಶಾಸಕರು ಸಭೆ ಸೇರಿದ್ದಾರೆ ಎನ್ನುವುದು ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.
ಈ ರೀತಿಯ ಯಾವುದೇ ಬೆಳವಣಿಗೆ ನಡೆದಿಲ್ಲ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳ ಬದಲಾವಣೆಗಾಗಿ ಕಾಂಗ್ರೆಸ್ಸಿನ ಕೆಲವು ಒಕ್ಕಲಿಗ ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದಾರೆ ಎಂದು ಮಾಧ್ಯಮಗಳಲ್ಲಿ ಬಿತ್ತರವಾಗಿರುವುದು ಸತ್ಯಕ್ಕೆ ದೂರವಾದದ್ದು ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು ಊಟಕ್ಕೆ ಸೇರಿದರೆ ಸಭೆ ನಡೆಸಿದ್ದಾರೆ ಎಂದು ಮಾಧ್ಯಮದವರು ಭಾವಿಸಿದ್ದಾರೆ ಎಂದರು.