ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬೆಂಗಳೂರು ಸುರಕ್ಷಿತ ನಗರವಾಗಬೇಕು, ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಿ: ಸಿಎಂ ಸೂಚನೆ

On: November 24, 2023 9:09 AM
Follow Us:
---Advertisement---

SUDDIKSHANA KANNADA NEWS\ DAVANAGERE\ DATE:24-11-2023

ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಿ: ಸಿಎಂ ಸೂಚನೆ

ಬೆಂಗಳೂರು: ಬೆಂಗಳೂರಿನಲ್ಲಿ ಸರಗಳ್ಳತನ ಹಾಗೂ ಮಹಿಳೆಯರ ಮೇಲೆನ ದೌರ್ಜನ್ಯ ಹೆಚ್ಚಾಗಿದೆ ಹಾಗೂ ಕೊಲೆಗಳೂ ಕೂಡ ನಡೆಯುತ್ತಿವೆ. ಕಾನೂನುಬಾಹಿರ ಚಟುವಟಿಕಗೆಗಳಿಗೆ ಕಡಿವಾಣ ಹಾಕಲು ನಿರ್ಭಯಾ ನಿಧಿಯಡಿ ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡ ನಿರ್ಮಾಣವಾಗಿದೆ. ಇದರ ಸದುಪಯೋಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಇಂಥ ಸೌಲಭ್ಯಗಳು ಜನರಿಗೆ ತಲುಪಿದಾಗ, ಅದು ಉಪಯೋಗಕ್ಕೆ ಬಂದಾಗ ಮಾತ್ರ ಸಾರ್ಥಕವಾಗುತ್ತದೆ. 668 ಕೋಟಿ ವೆಚ್ಚದಲ್ಲಿ ಕಮಂಡ್ ಸೆಂಟರ್ ನಿರ್ಮಾಣವಾಗಿದೆ. ನಿರೀಕ್ಷಿತ ಫಲ ಸಿಕ್ಕದೇ ಹೋದರೆ ಕಷ್ಟ. ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ, ಮಹಿಳೆಯರ ಮೇಲೆ ದೌರ್ಜನ್ಯ, ಒಂಟಿ ಮನೆಗಳಿರುವಲ್ಲಿ, ವೃದ್ಧರು ಒಂಟಿಯಾಗಿರುವಲ್ಲಿ ಹೆಚ್ಚಿನ ಗಮನ ನೀಡಬೇಕು ಎಂದರು.

ಅಪರಾಧಗಳು ನಡೆಯದ ರೀತಿ ತಡೆಯಬೇಕು:

ಅಪರಾಧವಾದ ನಂತರ ಶಿಕ್ಷೆ ಕೊಡುವುದು ಒಂದು ಭಾಗ. ಆದರೆ ಅಪರಾಧಗಳು ನಡೆಯದ ರೀತಿ ತಡೆಯಬೇಕು. ಬೆಂಗಳೂನಲ್ಲಿ ಕೊಲೆಯಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿಗಳ ಕೊಲೆ ಪ್ರಕರಣವನ್ನು ಉದಾಹರಿಸಿದ ಮುಖ್ಯಮಂತ್ರಿಗಳು ಇಂಥವು ನಡೆಯದಂತೆ ನೋಡಿಕೊಳ್ಳಬೇಕು ಎಂದರು. ಅದಕ್ಕೆ ಮಹಿಳೆಯರಿಗೆ ರಕ್ಷಣೆ ನೀಡುವ ಕೆಲಸ ಮಾಡಬೇಕು. ಪೋಲಿಸರು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಬೇಕೆಂದರು.

ಬೆಂಗಳೂರು ಸುರಕ್ಷಿತ ನಗರವಾಗಬೇಕು:

ನಗರದಲ್ಲಿ ಮೊದಲ ಬಾರಿ ಕಮಾಂಡ್ ಸೆಂಟರ್ ಸ್ತಾಪನೆಯಾಗಿದ್ದು ಇದರ ಅವಶ್ಯಕತೆ ಇರುವವರಿಗೆ ಇದರ ಪ್ರಯೋಜನ ದೊರಕಲಿ ಎಂದರು. ಅತ್ಯಾಧುನಿಕ ಉಪಕರಣಗಳನ್ನು ಕೇಂದ್ರದಲ್ಲಿ ಅಳವಡಿಸಲಾಗಿದ್ದು ಇವೆಲ್ಲವೂ ಉಪಯೋಗವಾಗಬೇಕು . ಹಾಗಾದಾರೆ ಕಮಾಂಡ್ ಸೆಂಟರ್ ನಿಂದ ಬೆಂಗಳೂರು ನಿಜವಾಗಿಯೂ ಸುರಕ್ಷಿತ ನಗರವೆನಿಸುತ್ತದೆ. ಪೋಲಿಸಿನವರಿಗೂ ಉತ್ತಮ ಹೆಸರು ಬರಲಿದೆ ಎಂದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment