Home ದಾವಣಗೆರೆ ಗ್ಯಾರಂಟಿ ಸ್ಕೀಮ್ ನಿಲ್ಲಲ್ಲ, ಆದ್ರೆ ವೆರಿಫಿಕೇಷನ್ ಪಕ್ಕಾ: ಫಲಾನುಭವಿಗಳಿಗೆ ಹೊಸ ಗುರುತಿನ ಚೀಟಿ ನೀಡಲು ಸಜ್ಜಾದ ಸರ್ಕಾರ!
ದಾವಣಗೆರೆಬೆಂಗಳೂರುವಾಣಿಜ್ಯ

ಗ್ಯಾರಂಟಿ ಸ್ಕೀಮ್ ನಿಲ್ಲಲ್ಲ, ಆದ್ರೆ ವೆರಿಫಿಕೇಷನ್ ಪಕ್ಕಾ: ಫಲಾನುಭವಿಗಳಿಗೆ ಹೊಸ ಗುರುತಿನ ಚೀಟಿ ನೀಡಲು ಸಜ್ಜಾದ ಸರ್ಕಾರ!

Share
ಸರ್ಕಾರ
Share

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಮರು ಅರ್ಜಿ ಸಲ್ಲಿಸಬೇಕು. ಮಾತ್ರವಲ್ಲ, ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆ ಬಗ್ಗೆ ಸಿಎಂ ಡಿ. ಕೆ. ಶಿವಕುಮಾರ್ ಅವರು ಬಿಗ್ ಶಾಕ್ ಕೊಟ್ಟಿದ್ದಾರೆ.

ಗ್ಯಾರಂಟಿ ಸ್ಕೀಮ್ ನಿಲ್ಲಲ್ಲ, ಆದ್ರೆ ವೆರಿಫಿಕೇಷನ್ ಪಕ್ಕ. ಫಲಾನುಭವಿಗಳಿಗೆ ಹೊಸ ಗುರುತಿನ ಚೀಟಿ ನೀಡಲು ರಾಜ್ಯ ಸರ್ಕಾರ ಸಜ್ಜಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಸರ್ಕಾರಿ ಹಿರಿಯ ಅಧಿಕಾರಿಗಳೊಂದಿಗೆ 7 ಗಂಟೆಗಳ ಕಾಲ ಸುದೀರ್ಘ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿದರು.

ಮರು ಅರ್ಜಿ ಸಲ್ಲಿಕೆಗೆ ಕಾರಣವೇನು?

ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಗೃಹಲಕ್ಷ್ಮಿ ಯೋಜನೆಯ ಕೆಲವು ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಹೆಸರಿನಲ್ಲಿ ಬೇರೆಯವರು ಸುಮಾರು 100 ಕೋಟಿ ರೂಪಾಯಿಗೂ ಅಧಿಕ ಹಣವನ್ನು ಅಕ್ರಮವಾಗಿ ಪಡೆದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅದೇ ರೀತಿ, ಗೃಹಜ್ಯೋತಿ ಯೋಜನೆಯಡಿ ಒಬ್ಬರೇ ವ್ಯಕ್ತಿಯ ಹೆಸರಿನಲ್ಲಿ ಐದಾರು ವಿದ್ಯುತ್ ಮೀಟರ್‌ಗಳಿರುವುದು ಪತ್ತೆಯಾಗಿದೆ. ಆ ಮನೆಗಳಲ್ಲಿ ಅವರೇ ವಾಸವಿದ್ದಾರಾ ಅಥವಾ ಬಾಡಿಗೆದಾರರಿದ್ದಾರಾ? ಈ ಯೋಜನೆಯ ಲಾಭ ನಮ್ಮ ರಾಜ್ಯದವರಿಗೆ ಸಿಗುತ್ತಿದೆಯೇ ಅಥವಾ ಹೊರರಾಜ್ಯದವರು ಪಡೆಯುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕಾಗಿದೆ,” ಎಂದರು.

“ಈಗಾಗಲೇ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಪ್ರಕ್ರಿಯೆ ಆರಂಭವಾಗಿದೆ. ಇದರ ಜೊತೆಗೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಲ್ಲಿ ಕೆಲವರು ನಿಧನರಾಗಿದ್ದು, ಅವರ ಹೆಸರಲ್ಲಿ ಬೇರೆಯವರು 100 ಕೋಟಿಗೂ ಹೆಚ್ಚು ಹಣ ಪಡೆದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪುತ್ತಿದೆಯೇ ಇಲ್ಲವೇ ಎಂದು ಪರಿಷ್ಕರಣೆ ಮಾಡಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

ಹೀಗಾಗಿ ಎಲ್ಲಾ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸಬೇಕಾಗಿದೆ. ನಾವು ಈ ಯೋಜನೆಯನ್ನು ನಿಲ್ಲಿಸುವುದಿಲ್ಲ. ಯಾರನ್ನೂ ತೆಗೆದುಹಾಕುವ ಉದ್ದೇಶ ಸರ್ಕಾರಕ್ಕಿಲ್ಲ. ಸರಿಯಾದ ಮಾಹಿತಿ ನೀಡುವ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಬೇಕು ಎಂಬುದು ಸರ್ಕಾರದ ಉದ್ದೇಶ. ಗೃಹಲಕ್ಷ್ಮಿ ಯೋಜನೆಯಲ್ಲೂ 1.64 ಲಕ್ಷ ಫಲಾನುಭವಿಗಳಿದ್ದು, ಅವರು ಮತ್ತೆ ಅರ್ಜಿ ಹಾಕಬೇಕಿದೆ. ಒಬ್ಬರ ಹೆಸರಿನಲ್ಲಿ ಐದಾರು ಮೀಟರ್ ಗಳಿದ್ದು, ಆ ಮನೆಯಲ್ಲಿ ಅವರೇ ವಾಸವಿದ್ದಾರಾ? ಬೇರೆಯವರು ಇದ್ದಾರ? ಈ ಯೋಜನೆ ನಮ್ಮ ರಾಜ್ಯದವರಿಗೆ ಸಿಗುತ್ತಿದೆಯೇ, ಬೇರೆ ರಾಜ್ಯದವರಿಗೆ ಸಿಗುತ್ತಿದೆಯೇ ಎಂದು ಪರಿಶೀಲನೆ ಮಾಡಬೇಕಿದೆ. ಫಲಾನುಭವಿಗಳಿಗೆ ನಾವು ಗುರುತಿನ ಚೀಟಿ ನೀಡಬೇಕಾಗಿದೆ. ಕೆಲವೇ ದಿನಗಳಲ್ಲಿ ಅರ್ಜಿ ನೀಡಲಾಗುವುದು” ಎಂದು ಮಾಹಿತಿ ನೀಡಿದರು.

Share

Leave a comment

Leave a Reply

Your email address will not be published. Required fields are marked *