Home ದಾವಣಗೆರೆ ಬೇರೆ ರಾಜ್ಯಗಳಲ್ಲಿ ಗ್ಯಾರಂಟಿಗಳು ಪೂರ್ಣ ಪ್ರಮಾಣದಲ್ಲಿ ಜಾರಿಯಾಗಿಲ್ಲ, ನಾವಷ್ಟೇ ಸಂಪೂರ್ಣ ಜಾರಿಗೆ ತಂದಿರುವುದು: ಸಿಎಂ ಡಿ. ಕೆ. ಶಿವಕುಮಾರ್
ದಾವಣಗೆರೆನವದೆಹಲಿಬೆಂಗಳೂರುವಾಣಿಜ್ಯ

ಬೇರೆ ರಾಜ್ಯಗಳಲ್ಲಿ ಗ್ಯಾರಂಟಿಗಳು ಪೂರ್ಣ ಪ್ರಮಾಣದಲ್ಲಿ ಜಾರಿಯಾಗಿಲ್ಲ, ನಾವಷ್ಟೇ ಸಂಪೂರ್ಣ ಜಾರಿಗೆ ತಂದಿರುವುದು: ಸಿಎಂ ಡಿ. ಕೆ. ಶಿವಕುಮಾರ್

Share
ಗ್ಯಾರಂಟಿ
Share

ಬೆಂಗಳೂರು: “ನಮ್ಮ ರಾಜ್ಯದಲ್ಲಿ ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಪರಿಪೂರ್ಣವಾಗಿ ಜಾರಿಗೆ ತಂದಿದ್ದೇವೆ. ಇದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಇಂದಿರಾ ಗಾಂಧಿಯವರು ವೃದ್ಧಾಪ್ಯ ವೇತನ ಯೋಜನೆ ಜಾರಿಗೆ ತಂದರು. ಅದನ್ನು ನಿಲ್ಲಿಸಲು ಸಾಧ್ಯವಾಯಿತೇ? ಬೇರೆ ರಾಜ್ಯಗಳನ್ನು ನಮ್ಮ ಗ್ಯಾರಂಟಿ ಯೋಜನೆಯನ್ನು ಕಾಪಿ ಮಾಡಿದ್ದಾರೆ. ಆದರೆ ಪೂರ್ಣ ಪ್ರಮಾಣದಲ್ಲಿ ಯಾರೂ ಜಾರಿಗೆ ತಂದಿಲ್ಲ” ಎಂದು ಸಿಎಂ ಡಿ. ಕೆ. ಶಿವಕುಮಾರ್ ತಿಳಿಸಿದರು.

“ಇತ್ತೀಚೆಗೆ ಗೃಹಜ್ಯೋತಿ ಯೋಜನೆಯ ಕುರಿತು ಸಮೀಕ್ಷೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬಹಳ ಜನ ಯೋಜನೆಯ ಸೌಲಭ್ಯ ಬೇಡ ಎಂದರು. ಕೆಲವರು ದಾಖಲೆ ನೀಡಲು ಹಿಂಜರಿದರು” ಎಂದರು.

“ಗೃಹಲಕ್ಷ್ಮಿ ಯೋಜನೆಯಲ್ಲೂ ದುರುಪಯೋಗ ಆಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಒಂದು ಲಕ್ಷಕ್ಕೂ ಹೆಚ್ಚು ಮೃತರ ಖಾತೆಗೆ ಹಣ ಹೋಗುತ್ತಿರುವುದು, ಇತರ ರಾಜ್ಯದ ಮಹಿಳೆಯರು ಈ ಸೌಲಭ್ಯದ ದುರುಪಯೋಗ ಪಡೆದಿರುವುದು, ಬಾಗಲಕೋಟೆಯ ಫಲಾನುಭವಿಯ ವಿವರ ಪರಿಶೀಲಿಸಿದಾಗ ಫೋನ್ ನಂಬರ್ ಒಂದು ಊರಿನದ್ದು, ಹಣ ಬೇರೆಯವರಿಗೆ ತಲುಪುತ್ತಿರುವುದು ಇಂತಹ ವ್ಯತ್ಯಾಸಗಳು ಗಮನಕ್ಕೆ ಬಂದಿವೆ. ಗೃಹಲಕ್ಷ್ಮಿ ಮೊತ್ತ ಸಾಲಕ್ಕೆ ವಜಾ ಆಗುತ್ತಿರುವ ಘಟನೆಗಳೂ ನಡೆದಿವೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಫಾರಂ ಸಿದ್ಧಪಡಿಸಲಾಗಿದೆ. ಮಹಿಳೆಯರು ತಮ್ಮದೇ ದೂರವಾಣಿ ಸಂಖ್ಯೆ ನಮೂದಿಸಬೇಕು” ಎಂದು ಮನವಿ ಮಾಡಿದರು.

“ಗುರುವಾರದಂದು ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷಗಳಾದವು. ಆರ್ಥಿಕವಾಗಿ ಹೆಣ್ಣು ಕುಟುಂಬದ ಕಣ್ಣು ಎನ್ನುತ್ತಾರೆ. ಬಹುತೇಕ ಮಹಿಳೆಯರು ಗೃಹಲಕ್ಷ್ಮಿ ಮೊತ್ತವನ್ನು ತಮ್ಮ ಕುಟುಂಬಕ್ಕಾಗಿ, ಸಾಲ ತೀರಿಸಲು ಬಳಕೆ ಮಾಡಿಕೊಂಡಿದ್ದಾರೆ. ಕೆಲವರು ತಮಗಾಗಿ ಬಳಸಿಕೊಂಡಿದ್ದಾರೆ. ಈ ಯೋಜನೆಯ ಸದ್ಬಳಕೆಯಾಗಬೇಕು. ನೀವು ಈ ಮೊತ್ತವನ್ನು ಯಾಕೆ ಬಳಸುತ್ತಿದ್ದೀರಿ ಎಂಬ ಮಾಹಿತಿಬೇಕು ಎಂಬ ಕಾರಣಕ್ಕಾಗಿ ಈ ಸಂವಾದ ಏರ್ಪಡಿಸಲಾಗಿದೆ. ಪಂಚಾಯಿತಿ ಮಟ್ಟದಲ್ಲಿಯೂ ಗ್ಯಾರಂಟಿ ಸಮಿತಿ ರಚಿಸಲಾಗುತ್ತಿದ್ದು, ಅವರು ನಿಮ್ಮ ಸಂಪರ್ಕದಲ್ಲಿರುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಲು ಈ ಕ್ರಮ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles