ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಶಾ, ಗಡ್ಕರಿ ಭೇಟಿ ಮಾಡಿದ ಸಿಎಂ: ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಸಿದ್ದರಾಮಯ್ಯ ಒತ್ತಾಯ

On: June 28, 2024 9:59 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:28-06-2024

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು.

ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ರಾಜ್ಯ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕುರಿತಂತೆಯೂ ಸಿಎಂ ಸಮಾಲೋಚನೆ ನಡೆಸಿ ಮನವಿ ಸಲ್ಲಿಸಿದರು. 

ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.

ಭಾರತ ಸರ್ಕಾರವು 80 ಕೋಟಿ ರೂ. ವೆಚ್ಚದಲ್ಲಿ India Reserve Battalion ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್‌ ಸ್ಥಾಪನೆಗೆ ಅನುಮೋದನೆ ನೀಡುವಂತೆ ಕೋರಿದರು.

ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್‌ ಸಿಟಿ ಯೋಜನೆಯನ್ನು ತಲಾ 200 ಕೋಟಿ ರೂ. ಗಳಂತೆ ಒಟ್ಟು 1000 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡುವುದು.

ಹೈಕೋರ್ಟಿನ ಆದೇಶದಂತೆ ಬಂಧಿಸುವ ಅಧಿಕಾರ ಹೊಂದಿರುವ ಸಿಬ್ಬಂದಿಗೆ Body worn camera  ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ ಇನ್ನೂ 175 ಕೋಟಿ ರೂ. ವೆಚ್ಚದಲ್ಲಿ 58,546 Body worn camera ಖರೀದಿಸುವ ಅಗತ್ಯವಿದ್ದು, 100 ಕೋಟಿ ರೂ. ನೆರವು ನೀಡುವಂತೆ ಮನವಿ ಸಲ್ಲಿಸಲಾಯಿತು.

ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟದಲ್ಲಿರುವ/ ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್‌ ಷಾ ಅವರನ್ನು ಕೋರಲಾಯಿತು.

ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ ಮಾದರಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗೂ ಕ್ಯಾಂಟೀನ್‌ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಒದಗಿಸುವುದು, ಪೊಲೀಸ್‌ ವಸತಿ ಗೃಹಗಳ ನಿರ್ಮಾಣಕ್ಕೆ ನೆರವು, ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ನೆರವು ಮತ್ತಿತರ ವಿಷಯಗಳ ಕುರಿತು ಸಹ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮೊದಲಾದವರು ಉಪಸ್ಥಿತರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

D. K. Shivakumar

ಸೋನಿಯಾ ಗಾಂಧಿಯರದ್ದು ಸಾಟಿಯಿಲ್ಲದ ರಾಜಕೀಯ ತ್ಯಾಗ: ಡಿ. ಕೆ. ಶಿವಕುಮಾರ್ ಸ್ಫೋಟಕ ಮಾತು… ಮುಖ್ಯಮಂತ್ರಿ ಪಟ್ಟದ ಮೇಲಿನ ಕಣ್ಣು!

H. C. Mahadevappa

ಪುಣ್ಯತಿಥಿಯ ಸಂಸ್ಮರಣಾ ಕಾರ್ಯಕ್ರಮದಲ್ಲೇ ಅಪಮಾನ: ಇತಿಹಾಸ ತಿರುಚುವ ಕೆಲಸ ನಿಲ್ಲಿಸಿ ಹೆಚ್. ಸಿ. ಮಹಾದೇವಪ್ಪ!

Pahalgam

ವೋಟರ್ ಐಡಿ, ಕ್ಯಾಂಡಿಲ್ಯಾಂಡ್ ಚಾಕೊಲೇಟ್‌ಗಳು, ಜಿಪಿಎಸ್: ಪಹಲ್ಗಾಮ್ ದಾಳಿ ಉಗ್ರರು ಪಾಕಿಸ್ತಾನದವರೆಂದು ಸಾಬೀತು!

RAHUL GANDHI

ಭಾರತ – ಚೀನಾ ಗಡಿ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ತಡೆ!

ಕನ್ನಂಬಾಡಿ

ಕನ್ನಂಬಾಡಿ ಕಟ್ಟೆಗೆ ಅಡಿಪಾಯ ಹಾಕಿದ್ದು ಟಿಪ್ಪು: “ಹೆಚ್. ಸಿ. ಮಹಾದೇವಪ್ಪನವರೇ ರಾಜಮನೆತನದ ಕೊಡುಗೆ ಗೌರವಿಸಿ, ಇಲ್ಲದಿದ್ದರೆ ತೆಪ್ಪಗಿರಿ!”

DONALD TRUMP

“ಆ ತುಟಿಗಳು, ಆ ಮುಖ…”: ಕ್ಯಾರೋಲಿನ್ ಲೀವಿಟ್ ಬಗ್ಗೆ ಡೊನಾಲ್ಡ್ ಟ್ರಂಪ್ “ಅಸಭ್ಯ ಹೊಗಳಿಕೆ”ಗೆ ಆಕ್ರೋಶ!

Leave a Comment