ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮುಡಾಪ್ರಕರಣ ರಾಜಕೀಯ ಪ್ರೇರಿತ, ವರ್ಚಸ್ಸು ಕುಂದಿಸುವ ಷಡ್ಯಂತ್ರ: ಸಿಎಂ ಸಿದ್ದರಾಮಯ್ಯ

On: January 31, 2025 2:16 PM
Follow Us:
---Advertisement---

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವರದಿ ನೀಡಿರುವುದು ರಾಜಕೀಯ ಪ್ರೇರಿತ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜಾರಿ ನಿರ್ದೇಶನಾಲಯದ ವರದಿ ರಾಜಕೀಯಪ್ರೇರಿತವಾಗಿದೆ. ಮನಿಲ್ಯಾಂಡ್ರಿಂಗ್ ಆಗಿರುವ ಬಗ್ಗೆ ಯಾವುದೇ ಸಾಕ್ಷಿಯಿಲ್ಲ. ಮುಡಾದ ಮಾಜಿ ಆಯುಕ್ತ ನಟೇಶ್ ಅವರ ಮೇಲೆ ಇಡಿಯವರ ಕ್ರಮ ಕಾನೂನು ಬಾಹಿರ ಮತ್ತು ಮನಿಲ್ಯಾಂಡ್ರಿಂಗ್ ಅಗಿಲ್ಲ ಎಂದು ಹೈಕೋರ್ಟ್ ಹೇಳಿದೆ. ಇಡಿಯ ಸಂಪೂರ್ಣ ವರದಿಯನ್ನು ಮಾಧ್ಯಮದಲ್ಲಿ ಬಿಡುಗಡೆ ಮಾಡುವ ಮೂಲಕ ಸಂಪೂರ್ಣ ಪ್ರಕರಣವನ್ನು ಉದ್ದೇಶಪೂರ್ವಕವಾಗಿ ರಾಜಕೀಯ ಪ್ರೇರಿತವಾಗಿದೆ. ಸರ್ಕಾರ ಹಾಗೂ ಮುಖ್ಯಮಂತ್ರಿಗಳ ವರ್ಚಸ್ಸಿಗೆ ಕುಂದು ತರುವಂತಹ ಪ್ರಯತ್ನ ನಡೆಯುತ್ತಿದೆ ಎಂದರು.

ವರ್ಚಸ್ಸು ಕುಂದಿಸುವ ಪ್ರಯತ್ನ:

ಮುಡಾಪ್ರಕರಣದ ಮೂಲಕ ಸಿದ್ದರಾಮಯ್ಯನವರ ತೇಜೋವಧೆ ಮಾಡಲಾಗುತ್ತಿದೆಯೇ ಎಂಬ ಬಗ್ಗೆ ಉತ್ತರಿಸಿ, ಕರ್ನಾಟಕ ಮುಖ್ಯಮಂತ್ರಿಯಾಗಿರುವ ಕಾರಣದಿಂದ ನನ್ನ ತೇಜೋವಧೆ ಮಾಡಲಾಗುತ್ತಿದೆ. ನನ್ನ ಶ್ರೀಮತಿಯವರಿಗೆ ಇಡಿಯವರ ನೋಟೀಸ್ ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆಯನ್ನು ತರಲಾಗಿದೆ. ನನ್ನ ವರ್ಚಸ್ಸಿಗೆ ಭಂಗ ತರಬೇಕೆಂಬ ದುರುದ್ದೇಶದಿಂದ, ಇಂತಹ ಕುಕೃತ್ಯಗಳನ್ನು ಮಾಡಲಾಗುತ್ತಿದೆ. ಆದರೆ ಅವರ ಪ್ರಯತ್ನಗಳು ಸಫಲವಾಗಲು ಸಾಧ್ಯವಿಲ್ಲ ಎಂದು ಹೇಳಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment