ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಜಾತಿಗಣತಿ ವರದಿ ಸ್ವೀಕರಿಸುವಂತೆ ಹಿಂದುಳಿದ ವರ್ಗಗಳ ಶ್ರೀಗಳ ಮನವಿ: ಸಿಎಂ ಸಿದ್ದರಾಮಯ್ಯ ಏನಂದ್ರು…?

On: January 6, 2024 1:05 PM
Follow Us:
---Advertisement---

SUDDIKSHANA KANNADA\ DAVANAGERE\ DATE:06-01-2024

ಜಾತಿಗಣತಿ ವರದಿ ಸ್ವೀಕರಿಸುವಂತೆ ಹಿಂದುಳಿದ ವರ್ಗಗಳ ಶ್ರೀಗಳ ಮನವಿ: ಸಿಎಂ ಸಿದ್ದರಾಮಯ್ಯ ಏನಂದ್ರು…?

ಬೆಂಗಳೂರು: ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಅವರನ್ನು ಭೇಟಿಮಾಡಿ ಈ ಮನವಿ ಸಲ್ಲಿಸಿದರು.

ಶ್ರಮಿಕ ವರ್ಗದವರಿಗೆ ಗ್ಯಾರಂಟಿಗಳು ಹೆಚ್ಚು ಉಪಯುಕ್ತ ವಾಗಿವೆ ಎಂದು ಸ್ವಾಮೀಜಿಗಳು ಅಭಿಪ್ರಾಯಪಟ್ಟರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು ವರದಿ ನೀಡಲು ಎರಡು ತಿಂಗಳ ಕಾಲ ಅವಧಿ ವಿಸ್ತರಣೆ ಯಾಗಿದೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಅವರ ವರದಿಯನ್ನೇ ಕೊಡಲು ಸಾಧ್ಯವಿಲ್ಲ ಎಂದಿದ್ದು, ಈ ಬಗ್ಗೆ ಕಾನೂನು ಸಲಹೆ ಪಡೆದು ಮುಂದುವರೆಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಮಠಗಳಿಗೆ ಜಮೀನು ಕೊಡುವ ಬಗ್ಗೆ ಸ್ವಾಮೀಜಿಗಳು ಪ್ರಸ್ತಾಪಿಸಿದರು. ತಹಸೀಲ್ದಾರ್ ಅವರು ಈ ಬಗ್ಗೆ ವರದಿ ನೀಡಲು ಸೂಚಿಸಿದ್ದು, ವರದಿಯನ್ನು ಶೀಘ್ರವಾಗಿ ನೀಡುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ಸೂಚಿಸಿದರು.

ಭೋವಿ ಸಮುದಾಯ ಚಿತ್ರದುರ್ಗದ ಸಿದ್ದರಾಮೇಶ್ವರ ಸ್ವಾಮೀಜಿ , ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಶ್ರೀಗಳು ಹಾಗೂ ಹಿಂದುಳಿದ ಜಾತಿಗಳ ಮಠಗಳ ಸ್ವಾಮೀಜಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ.ಎ. ದಯಾನಂದ ಉಪಸ್ಥಿತರಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment