SUDDIKSHANA KANNADA NEWS/ DAVANAGERE/ DATE:05-06-2023
ದಾವಣಗೆರೆ: ಸಿಎಂ ಸಿದ್ದರಾಮಯ್ಯ (CM SIDDARAMAI) ಅವರು ಅದು ಆಗದಿರಲೆಂದು ಪ್ರಾರ್ಥನೆ ಮಾಡುತ್ತೇನೆ ಎಂದಿದ್ಯಾಕೆ? ಈ ಮಾತು ಸಾಕಷ್ಟು ಕುತೂಹಲಕ್ಕೂ ಕಾರಣವಾಗಿದೆ.
ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ದಾವಣಗೆರೆ(DAVANAGERE)ಗೆ ಆಗಮಿಸಿದ ಸಿದ್ದರಾಮಯ್ಯ ಅವರು, ಮಾಧ್ಯಮದವರ ಜೊತೆ ಮಾತನಾಡುತ್ತಾ, ನಾನು ಪ್ರಾರ್ಥನೆ (PRAYAR) ಮಾಡಿಕೊಳ್ಳುತ್ತೇನೆ. ಯಾವುದೇ ಕಾರಣಕ್ಕೂ ಈ ಬಾರಿಯ ಪ್ರವಾಹ ಬರಬಾರದು ಎಂದು ಹೇಳಿದರು.
ಮುಖ್ಯಮಂತ್ರಿಯಾದ ಬಳಿಕ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು (DC), ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ (CEO) ಜೊತೆ ವಿಡಿಯೋ (VEDEO) ಕಾನ್ಫರೆನ್ಸ್ ನಡೆಸಿದ್ದೇನೆ. ಗೊಬ್ಬರ, ಬಿತ್ತನೆ ಬೀಜ, ಕೀಟನಾಶಕ ಸೇರಿದಂತೆ ರೈತರಿಗೆ ಅಗತ್ಯವಿರುವ ವಸ್ತುಗಳಿಗೆ ವ್ಯತ್ಯಯ ಉಂಟಾಗದಂತೆ ಎಚ್ಚರ ವಹಿಸುವಂತೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಮಳೆಗಾಲ ಪ್ರಾರಂಭವಾಗುತ್ತಿದೆ. ಪ್ರವಾಹ ಬಾರದಿರಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ಒಂದು ವೇಳೆ ಪ್ರವಾಹ ಬಂದರೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹೇಳಿದ್ದೇನೆ. ಯಾವುದೇ ತೊಂದರೆ ಆಗಬಾರದು. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.