
SUDDIKSHANA KANNADA NEWS/ DAVANAGERE/ DATE:10-04-2025
ಬೆಂಗಳೂರು: ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ. ಪೋಡಿಮುಕ್ತ ಗ್ರಾಮಗಳಾಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ADLR ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.


ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆ ರೀತಿ ಇದೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ. ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ ಎಂದು ಮೆಚ್ಚುಗೆ ಸೂಚಿಸಿದರು.