ಬೆಂಗಳೂರು: “ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರಿರುವ ವರೆಗೆ ಹೋರಾಡುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಮುಗಿಸಲು ದೊಡ್ಡ ದೊಡ್ಡ ನಾಯಕರ ಕುಟಿಲ:
ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ ಹೂವಿನ ಹಾಸಿಗೆ ಆಗಿರಲಿಲ್ಲ, ಅದು ಕಲ್ಲು – ಮುಳ್ಳುಗಳ ಹಾದಿಯಾಗಿತ್ತು. ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ಅವುಗಳನ್ನೆಲ್ಲವನ್ನೂ ಜನತೆಯ ಆಶೀರ್ವಾದದಿಂದ ಗೆದ್ದು ಬಂದಿದ್ದೇನೆ ಎಂದು ತಿಳಿಸಿದ್ದಾರೆ.
ನಿಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ:
ಇದು ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳಲ್ಲ, ಇದು ನನ್ನನ್ನು ನಂಬಿರುವ, ಪ್ರೀತಿಸುತ್ತಿರುವ, ನನಗೆ ನಿರಂತರವಾಗಿ ಆಶೀರ್ವಾದ ನೀಡಿ ಬೆಂಬಲಿಸುತ್ತಿರುವ ನಿಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಎನ್ನುವುದು ನನಗೆ ಚೆನ್ನಾಗಿ ಗೊತ್ತು. ಆದ್ದರಿಂದ ನನ್ನ ಉಸಿರು ಇರುವ ವರೆಗೆ ಈ ರಾಜಕೀಯ ಷಡ್ಯಂತ್ರ, ದ್ವೇಷ-ಅಸೂಯೆಯ ರಾಜಕಾರಣದ ವಿರುದ್ಧ ಹೋರಾಡುತ್ತೇನೆ. ಇದು ಸತ್ಯ, ನ್ಯಾಯ ಮತ್ತು ಧರ್ಮಕ್ಕಾಗಿ ನಡೆಯುತ್ತಿರುವ ಹೋರಾಟ. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಹೋರಾಟವನ್ನು ನನ್ನ ಉಸಿರು ಇರುವ ವರೆಗೆ ನಡೆಸುತ್ತೇನೆ, ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ ಎಂದು ಹೇಳಿದ್ದಾರೆ.
- AHINDA Leader
- Bengaluru Politics
- CM Siddaramaiah News
- CM Siddaramaiah Speech
- Karnataka Politics
- MUDA Scam Row Updates
- Political Conspiracy
- Siddaramaiah
- Siddaramaiah Vs Opposition.
- Social Justice
- ಅಹಿಂದ ನಾಯಕ
- ಕರ್ನಾಟಕ ಮುಖ್ಯಮಂತ್ರಿ.
- ಕರ್ನಾಟಕ ರಾಜಕಾರಣ
- ಬೆಂಗಳೂರು ಸುದ್ದಿ
- ರಾಜಕೀಯ ಷಡ್ಯಂತ್ರ
- ಸತ್ಯ ಮತ್ತು ಧರ್ಮದ ಹೋರಾಟ
- ಸಾಮಾಜಿಕ ನ್ಯಾಯ
- ಸಿಎಂ ಸಿದ್ದರಾಮಯ್ಯ ಹೇಳಿಕೆ
- ಸಿದ್ದರಾಮಯ್ಯ





Leave a comment