ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಗಲಾಟೆ ಜೋರಾಗಿದೆ. ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಸಿಎಂ ಖುರ್ಚಿ ಮೇಲೆ ಕಣ್ಣಿಟ್ಟಿದ್ದಾರೆ. ಈ ನಡುವೆ ಕಲಬುರಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಪಿಸು ಪಿಸು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಸ್ಥಳೀಯ ಸಮಸ್ಯೆಗಳನ್ನು ಸ್ಥಳೀಯವಾಗಿ ಪರಿಹರಿಸಿಕೊಳ್ಳಿ ಎಂದು ಮಲ್ಲಿಕಾರ್ಜುನ್ ಖರ್ಗೆ ಈ ಹಿಂದೆ ಹೇಳಿದ್ದರು. ಈಗ ಇಬ್ಬರು ನಾಯಕರ ನಡುವಿನ ಮಾತುಕತೆ ಸಾಕಷ್ಟು ಕುತೂಹಲ ಕೆರಳಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಆಗಿಸಲು ನೀವು ಆಶೀರ್ವದಿಸಬೇಕು ಎಂದು ಭಿನ್ನವಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಕಲಬುರಗಿ ಜಿಲ್ಲೆಯ ಯಡ್ರಾಮಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ನೂತನ ಪ್ರಜಾಸೌಧ & ಕೆ.ಪಿ.ಎಸ್ ಶಾಲೆಗಳಿಗೆ ಅಡಿಗಲ್ಲು ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದರು.
ಜೇವರ್ಗಿ ವಿಧಾನಸಭಾ ಕ್ಷೇತ್ರ ಒಂದರಲ್ಲೇ ಇಂದು ಸುಮಾರು ₹906 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಅನುದಾನ ನೀಡುವ ಜೊತೆಗೆ ಅಭಿವೃದ್ಧಿ ಯೋಜನೆಗಳನ್ನು ಕೂಡ ಆದ್ಯತೆ ಮೇರೆಗೆ ಅನುಷ್ಠಾನ ಮಾಡಲಾಗುತ್ತಿದೆ. ಇದು ನಮ್ಮ ರಾಜಕೀಯ ಬದ್ಧತೆ ಎಂದು ಸಿದ್ದರಾಮಯ್ಯ ಹೇಳಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ಕೃಷ್ಣಬೈರೇಗೌಡ, ಮಧು ಬಂಗಾರಪ್ಪ, ಕೆಕೆಆರ್‌ಡಿಬಿ ಅಧ್ಯಕ್ಷರು, ಶಾಸಕರೂ ಆದ ಅಜಯ್ ಸಿಂಗ್, ಶಾಸಕರಾದ ಅಲ್ಲಮ ಪ್ರಭು ಪಾಟೀಲ್, ಎಂ.ವೈ.ಪಾಟೀಲ್, ಚಂದ್ರಕಾಂತ ಪಾಟೀಲ್ ಸೇರಿ ಹಲವು ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.





Leave a comment