SUDDIKSHANA KANNADA NEWS/ DAVANAGERE/ DATE:09-06-2023
ಬೆಂಗಳೂರು: ಕನ್ನಡ ನಾಡಿನ ಅರ್ಧದಷ್ಟಿರುವ ಮಹಿಳಾ ಸಮೂಹದ ಪಾಲಿನ ‘ಶಕ್ತಿ’ ಯೋಜನೆಗೆ ರಾಜ್ಯಾದ್ಯಂತ ಏಕಕಾಲಕ್ಕೆ ಚಾಲನೆ ನೀಡಲು ನಿರ್ಧರಿಸಿದ್ದು, ಈ ಕುರಿತು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ Cm Siddaramaiah ಅವರು ಸಚಿವರು ಮತ್ತು ಶಾಸಕರಿಗೆ ಕೆಲವು ಸೂಚನೆಗಳನ್ನು ನೀಡಿದರು.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ ಜೂನ್ 11 ರಂದು ಸಮಸ್ತ ಕನ್ನಡಿಗರಿಗೆ ಸಮರ್ಪಣೆ ಆಗಲಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ, ಹಣದುಬ್ಬರದ ಕಾರಣಕ್ಕೆ ಸಂಕಷ್ಟಕ್ಕೆ ತುತ್ತಾಗಿರುವ ಕನ್ನಡ ನಾಡಿನ ಮಹಿಳಾ ಸಮೂಹಕ್ಕೆ ಕೊಂಚ ನಿರಾಳ ನೀಡುವ ಶಕ್ತಿ ಯೋಜನೆಯ ಚಾಲನೆ ಅತ್ಯಂತ ಅರ್ಥ ಪೂರ್ಣವಾಗಿರಲಿದೆ ಎಂದಿದ್ದಾರೆ.
ನಮ್ಮ ಸರ್ಕಾರವು ತನ್ನ ಮೇಲೆ ಬೀಳುವ ಆರ್ಥಿಕ ಹೊರೆಯ ಹೊರತಾಗಿಯೂ ಜನ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಅಸ್ತಿತ್ವಕ್ಕೆ ಬಂದ ತಿಂಗಳ ಒಳಗೇ ಜಾರಿಗೆ ತರುತ್ತಿದೆ. ಯಾವುದೇ ಜಾತಿ, ಧರ್ಮದ ಮಿತಿಗೆ ಒಳಪಡದ ಶಕ್ತಿ ಯೋಜನೆಯ ಅನುಕೂಲ ಅರ್ಹರಿಗೆಲ್ಲಾ ತಲುಪುವಂತೆ ಸಚಿವರು ಮತ್ತು ಶಾಸಕರು ನೋಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು ನೇಮಕವಾದ ತಕ್ಷಣ ಎಲ್ಲಾ ಸಚಿವರೂ ಕಾರ್ಯೋನ್ಮುಖರಾಗಿ ಯೋಜನೆಗೆ ಅರ್ಥಪೂರ್ಣ ಚಾಲನೆ ನೀಡಬೇಕು. ಬೆಂಗಳೂರಿನಲ್ಲಿ ನಾನು ಯೋಜನೆಗೆ ಚಾಲನೆ ನೀಡುತ್ತೇನೆ. ಅದೇ ಹೊತ್ತಲ್ಲಿ ಶಾಸಕರು ಮತ್ತು ಜಿಲ್ಲಾ ಸಚಿವರುಗಳು ತಮ್ಮ ತಮ್ಮ ಜಿಲ್ಲೆ ಮತ್ತು ಕ್ಷೇತ್ರಗಳಲ್ಲಿ ಯೋಜನೆಗೆ ಚಾಲನೆ ನೀಡಬೇಕು ಎಂದು ಮುಖ್ಯಮಂತ್ರಿ (Cm Siddaramaiah) ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಯಾವಾಗ..?
ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ. ಎಲ್ಲ ಗ್ಯಾರಂಟಿ ಯೋಜನೆಗಳಿಗೆ
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು. ಕುಂಟು ನೆಪ ನೀಡಿ ತಿರಸ್ಕರಿಸುವಂತಿಲ್ಲ ಎಂದು ಎಚ್ಚರಿಕೆಯನ್ನು ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ( Cm Siddaramaiah) ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ:
Requirement:ಭರ್ಜರಿ ನೇಮಕಾತಿ, ಶಿಕ್ಷಕರೂ ಸೇರಿದಂತೆ 38,480 ಉದ್ಯೋಗಾವಕಾಶ: ಇಎಂಆರ್ ಎಸ್ ಅಧಿಸೂಚನೆ ಪ್ರಕಟ, ಸಂಪೂರ್ಣ ಮಾಹಿತಿ ಇಲ್ಲಿದೆ
ಇ-ಆಡಳಿತ ಅಧಿಕಾರಿಗಳಿಗೆ ನೀಡಿರುವ ಸೂಚನೆ ಏನು..?
ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್ ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ( Cm Siddaramaiah) ಮಾಹಿತಿ ನೀಡಿದ್ದಾರೆ.
ಆ.1ಕ್ಕೆ ಗೃಹ ಜ್ಯೋತಿ ಯೋಜನೆಗೆ ಚಾಲನೆ:
ಗೃಹ ಜ್ಯೋತಿ ಯೋಜನೆಗೆ ಆಗಸ್ಟ್ 1 ರಂದು ಕಲಬುರಗಿಯಲ್ಲಿ ಚಾಲನೆ ನೀಡುವ ಕುರಿತು ಯೋಚಿಸುತ್ತಿದ್ದೇವೆ. ಈ ಯೋಜನೆಯ ಮಾರ್ಗಸೂಚಿಗಳ ಕುರಿತು ಇರುವ ಎಲ್ಲ ಗೊಂದಲಗಳನ್ನು ನಿವಾರಿಸಿ, ನಾಗರಿಕರಿಗೆ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಗೃಹ ಜ್ಯೋತಿ ಯೋಜನೆಗೆ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಾಯಿಸಲು ಅವಕಾಶವಿದೆ. ಇದಲ್ಲದೆ, ಎಸ್ಕಾಂಗಳ ಎಲ್ಲ ಕಚೇರಿಗಳಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪಿಸಲಾಗುವುದು. ಜೂನ್ 15 ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳ ಮೂಲಕ ಹಾಗೂ ಮನೆಯಲ್ಲಿಯೇ ಕಂಪ್ಯೂಟರ್ ಮೂಲಕ ಅಥವಾ ಮೊಬೈಲ್ ಆಪ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಹೊಸ ಮನೆ, ಹೊಸ ಬಾಡಿಗೆದಾರರಿಗೆ ವಿದ್ಯುತ್ ಫ್ರೀ ಕೊಡಲಾಗುವುದು ಎಂದಿದ್ದಾರೆ.
ಹೊಸ ಮನೆ, ಹೊಸ ಬಾಡಿಗೆದಾರರಿಗೆ ರಾಜ್ಯದ ವಿದ್ಯುತ್ ಬಳಕೆಯ ಸರಾಸರಿ ಆಧಾರದಲ್ಲಿ ಉಚಿತ ವಿದ್ಯುತ್ ಸೌಲಭ್ಯ ನೀಡಲಾಗುವುದು. ಒಂದು ವರ್ಷದ ಸರಾಸರಿ ಲಭ್ಯವಾದ ನಂತರ, ಈ ದತ್ತಾಂಶವನ್ನು ಆಧರಿಸಿ, ಉಚಿತ ವಿದ್ಯುತ್ ಸೌಲಭ್ಯ ನೀಡಲಾಗುವುದು. ಹಳೆ ವಿದ್ಯುತ್ ಬಿಲ್ ಬಾಕಿ ಪಾವತಿಗೆ ಸೆಪ್ಟೆಂಬರ್ 30 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಗೃಹಜ್ಯೋತಿ ಯೋಜನೆಗೆ ಆಧಾರ್, ಆರ್. ಆರ್. ಸಂಖ್ಯೆ, ಬಾಡಿಗೆದಾರರು ಕರಾರು ಪತ್ರ ಹಾಗೂ ಅದೇ ವಿಳಾಸದ ಮತದಾರರ ಗುರುತು ಚೀಟಿ ಮಾಹಿತಿ ಸಲ್ಲಿಸಿ, ಸೌಲಭ್ಯ ಪಡೆಯಬಹುದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ( Cm Siddaramaiah) ವಿವರಿಸಿದ್ದಾರೆ.
ಆ.17ಕ್ಕೆ ಗೃಹಲಕ್ಷ್ಮಿ ಯೋಜನೆ:
ಗೃಹ ಲಕ್ಷ್ಮಿ ಯೋಜನೆಯನ್ನು ಆಗಸ್ಟ್ 17 ಅಥವಾ 18 ರಂದು ಬೆಳಗಾವಿಯಲ್ಲಿ ಚಾಲನೆ ನೀಡುವ ಕುರಿತು ಚರ್ಚಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್ 15 ರಿಂದ ಪ್ರಾರಂಭವಾಗಲಿದೆ. ಈ ಯೋಜನೆಗೆ ಆನ್‌ಲೈನ್ ನಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಅಂತೆಯೇ ನಾಡಕಚೇರಿಗಳಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಪ್ರತ್ಯೇಕ ಕೌಂಟರುಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.
ನೇರವಾಗಿ ಬ್ಯಾಕ್ ಖಾತೆಗೆ ಬರುತ್ತೆ ಹಣ:
ಅರ್ಜಿದಾರರು ರೇಷನ್ ಕಾರ್ಡ್ ಸಂಖ್ಯೆ, ಯಜಮಾನಿಯ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ, ಆಧಾರ್ ಸಂಯೋಜನೆಯಾಗಿರುವ ಬ್ಯಾಂಕ್ ಖಾತೆಯ ವಿವರವನ್ನು ಒದಗಿಸಬೇಕು. ಈ ದಾಖಲೆಗಳ ಪ್ರತಿಗಳನ್ನು ಆಫ್‌ಲೈನ್ ಅರ್ಜಿಗಳೊಂದಿಗೂ ಸಲ್ಲಿಸಬಹುದು. ಅರ್ಹ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ ಬ್ಯಾಂಕ್ ಖಾತೆಗೆ ನೆರವಿನ ಮೊತ್ತ ಜಮೆ ಆಗಲಿದೆ. ಈ ಯೋಜನೆಯು ರಾಜ್ಯದ ಶೇ. 85 ಕ್ಕೂ ಹೆಚ್ಚು ಕುಟುಂಬಗಳನ್ನು ತಲುಪಲಿದೆ ಎಂದು ಅಂದಾಜಿಸಲಾಗಿದೆ. ತೆರಿಗೆ ಪಾವತಿದಾರರಲ್ಲದ ಎಪಿಎಲ್ ಕಾರ್ಡುದಾರರಿಗೂ ಈ ಸೌಲಭ್ಯ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ತಿಳಿಸಿದ್ದಾರೆ.
New house, new tenants will be given free electricity facility based on the average electricity consumption of the state. After a year’s average is available, based on this data, free power will be provided. Payment of old electricity bill arrears has been allowed till September 30. Aadhaar for Griha Jyothi Yojana, R. R. No., tenants can get the facility by submitting the contract letter and voter identity card information of the same address.
Cm Siddaramaiah, ‘Gruha Lakshmi’ scheme on Aug 17 or 18, Karnataka govt to launch ‘Gruha Jyothi’ scheme on Aug 1, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಆ.17ಕ್ಕೆ ಗೃಹಲಕ್ಷ್ಮಿ ಯೋಜನೆ, ಆ.1ಕ್ಕೆ ಗೃಹ ಜ್ಯೋತಿ ಯೋಜನೆಗೆ ಚಾಲನೆ, ಗೃಹಲಕ್ಷ್ಮಿ ಯೋಜನೆ ಯಾವಾಗ..?
Comments 1