Site icon Kannada News-suddikshana

ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ಸಲ್ಲಿಸಿದ ಮನವಿಯಲ್ಲಿ ಯಾವೆಲ್ಲಾ ಬೇಡಿಕೆಗಳಿವೆ ಗೊತ್ತಾ…?

SUDDIKSHANA KANNADA NEWS/ DAVANAGERE/ DATE:02-04-2025

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು.

ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ ನೀಡುತ್ತಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿಯವರನ್ನು ಕರ್ನಾಟಕ ರಾಜ್ಯದ ಪರವಾಗಿ ಅಭಿನಂದಿಸುತ್ತೇನೆ. ಕೇಂದ್ರದಿಂದ ರಾಜ್ಯಕ್ಕೆ ಮಂಜೂರಾಗಿರುವ ಕೆಳಕಂಡ ಪ್ರಮುಖ ಯೋಜನೆಗಳ ವಿವರ ಇಂತಿದೆ.

1. ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಮಣಿಪಾಲ್ ಆಸ್ಪತ್ರೆ ಜಂಕ್ಷನ್ (ಮೈಸೂರು ನಗರ)ದಲ್ಲಿ ಫ್ಲೈಓವರ್ ನಿರ್ಮಾಣ.

2 .30.35 ಕಿ.ಮೀ. ಉದ್ದದ ಹುಬ್ಬಳ್ಳಿ ಧಾರವಾಡ ಷ್ಟಪಥ ಬೈಪಾಸ್ ನಿರ್ಮಾಣ

3. ರಾ.ಹೆ 369 ಇ( ಸಿಗಂದೂರು ಸೇತುವೆ) ರಲ್ಲಿ ಶರಾವತಿ ಹಿನ್ನೀರಿನ ಮೇಲೆ ಪ್ರಮುಖ ಸೇತುವೆ ನಿರ್ಮಾಣ.

4. ರಾ.ಹೆ.167 ಹಗರಿ-ಜೆಡ್ಚೆರ್ಲಾ ಸೆಕ್ಷನ್ ನಲ್ಲಿ ಕೃಷ್ಣಾ ನದಿ ಮೇಲೆ 180.865 ಕಿ.ಮೀ.ನಲ್ಲಿ ಪ್ರಮುಖ ಸೇತುವೆ ನಿರ್ಮಾಣ.

5. ಹೊಸಪೇಟೆ ಯಿಂದ ಬಳ್ಳಾರಿ ಸೆಕ್ಷನ್ ನ ಹಳೆಯ ರಾ.ಹೆ-63(ಹೊಸ ರಾ.ಹೆ-67) ನ ಕಿ.ಮಿ.340+640 (ಬಳ್ಳಾರಿ ನಗರ ಮಿತಿಯಲ್ಲಿನ ಸುಧಾ ಕ್ರಾಸ್) ನಲ್ಲಿ LC-110E ಬದಲಿಗೆ 2-ಲೇನ್ ROB ನಿರ್ಮಾಣ.

6. ರಾ.ಹೆ.150ಎ ರಲ್ಲಿನ ಸಿಂದಿಗೆರಿ-ಬಳ್ಳಾರಿ ಸೆಕ್ಷನ್ನ ಕಿ.ಮೀ.235.00 ರಿಂದ 254.800ವರೆಗೆ Two Lane with Paved Shoulders ಗೆ ಅಗಲೀಕರಣ ಯೋಜನೆ.

ಕರ್ನಾಟಕ ಸರ್ಕಾರವು ರಾಜ್ಯದ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಜಾಲದ ಅಭಿವೃದ್ಧಿಯನ್ನು ಬೆಂಬಲಿಸುತ್ತಿದ್ದು, ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಚುರುಕುಗೊಳಿಸಲು ಕಂದಾಯ
ಇಲಾಖೆಯೊಂದಿಗೆ ಹಾಗೂ ಅರಣ್ಯ ತೀರುವಳಿ ಪ್ರಕ್ರಿಯೆ ತ್ವರಿತಗೊಳಿಸಲು ಅರಣ್ಯ ಇಲಾಖೆಯೊಂದಿಗೆ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸುತ್ತಿದೆ. ನೀರು ಹಾಗೂ ವಿದ್ಯುತ್ ಸಂಪರ್ಕ ಸೇರಿದಂತೆ Utility Shifting ಕಾರ್ಯವನ್ನು
ಚುರುಕುಗೊಳಿಸಲು ಸಂಬಂಧಪಟ್ಟ ಇಲಾಖೆಗೊಂದಿಗೆ ಸಭೆ ನಡೆಸುವ ಮೂಲಕ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಆದ್ಯತೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ವೇಳೆ ಸಚಿವರಾದ ಹೆಚ್. ಸಿ. ಮಹಾದೇವಪ್ಪ, ಸತೀಶ್ ಜಾರಕಿಹೊಳಿ, ಬಸವರಾಜ ರಾಯರೆಡ್ಡಿ ಮತ್ತಿತತರು ಹಾಜರಿದ್ದರು.

 

Exit mobile version