SUDDIKSHANA KANNADA NEWS/ DAVANAGERE/ DATE:01-09-2023
ದಾವಣಗೆರೆ (Davanagere): ದಾವಣಗೆರೆ (Davanagere) ಖರೀದಿ ಕೇಂದ್ರದಲ್ಲಿ ರಾಗಿ ಮಾರಾಟ ಮಾಡಿದ ರೈತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಹಣವನ್ನು ಬಿಡುಗಡೆ ಮಾಡುವಂತೆ ಸಂಬಂಧಪಟ್ಟ ರಾಗಿ ಖರೀದಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ನಡೆದ ಜನತಾ ದರ್ಶನದಲ್ಲಿ ಮಾಯಕೊಂಡ ಶಾಸಕ ಕೆ. ಎಸ್. ಬಸವಂತಪ್ಪ ನೇತೃತ್ವದಲ್ಲಿ ತೆರಳಿದ್ದ ದಾವಣಗೆರೆ ಮತ್ತು ಜಗಳೂರಿನ ತಾಲೂಕಿನ ರೈತ ಮುಖಂಡರು, ರಾಗಿ ಖರೀದಿ ಕೇಂದ್ರದಲ್ಲಿ ಮಾರಾಟ ಮಾಡಿದ್ದ ರಾಗಿಯ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಈ ಸುದ್ದಿಯನ್ನೂ ಓದಿ:
DEVARABELAKERE DAM: ಸೌಂದರ್ಯದ ಖನಿ ಹರಿಹರದ ದೇವರಬೆಳಕೆರೆ ಪಿಕಪ್ ಡ್ಯಾಂ ಕಾಲುವೆಗಳ ಹೂಳು ನೋಡಬನ್ನಿ…! ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ ನಂದಿಗಾವಿ ಶ್ರೀನಿವಾಸ್
ಈ ಸಂದರ್ಭದಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ, ಮೊದಲೇ ಈ ಬಾರಿ ಮುಂಗಾರು ಮಳೆ ಇಲ್ಲದೆ ಬೆಳೆಗಳು ಒಣಗಿ ರೈತರು ತತ್ತರಿಸಿ ಹೋಗಿದ್ದಾರೆ. ಅಲ್ಲದೇ, ಕಳೆದ ವರ್ಷ ಬೆಳೆದ ರಾಗಿಯನ್ನು ಖರೀದಿ ಕೇಂದ್ರಕ್ಕೆ ಮಾರಾಟ ಮಾಡಿದ ರೈತರಿಗೆ ಬಾಕಿ ಹಣ ಬಿಡುಗಡೆ ಮಾಡಿಲ್ಲ. ಹೀಗಾಗಿ ಇತ್ತ ರಾಗಿ ಮಾರಾಟ ಮಾಡಿದ ಹಣ ಇಲ್ಲದೆ, ಅತ್ತ ಈ ವರ್ಷ ಮಳೆ ಇಲ್ಲದೆ ಬಿತ್ತನೆ ಮಾಡಿದ ಬೆಳೆ ಹಾನಿಯಾಗಿ ಸಾಲಗಾರರಾಗಿರುವ ರೈತರು ದಿಕ್ಕು ತೋಚದಂತಾಗಿದೆ. ಕೂಡಲೇ ಬಾಕಿ ಹಣ ಬಿಡುಗಡೆ ಮಾಡುವಂತೆ ಶಾಸಕರು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದರು.
ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣವೇ ಸಂಬಂಧಪಟ್ಟ ರಾಗಿ ಖರೀದಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕರಿಗೆ ದೂರವಾಣಿ ಸಂಪರ್ಕ ಪಡೆದು ರಾಗಿ ಮಾರಾಟ ಮಾಡಿದ ದಾವಣಗೆರೆ ಜಿಲ್ಲೆಯ ರೈತರ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆದೇಶ ನೀಡಿದ್ದಾರೆ. ಈ ಸಂದರ್ಭದಲ್ಲಿ ಖರೀದಿ ಕೇಂದ್ರಕ್ಕೆರಾಗಿ ಮಾರಾಟ ಮಾಡಿದ ರೈತ ಫಲಾನುಭವಿಗಳು ಹಾಜರಿದ್ದರು.