SUDDIKSHANA KANNADA NEWS/ DAVANAGERE/ DATE:10-06-2023
ಮೈಸೂರು: ಭ್ರಷ್ಟಚಾರ, ದುರಾಡಳಿತ, ಅಭಿವೃದ್ಧಿಹೀನ ಮತ್ತು ಸಮಾಜವನ್ನು ಒಡೆಯುವ ದುಷ್ಟ ರಾಜಕಾರಣವನ್ನು ರಾಜ್ಯದ ಜನತೆ ಸೋಲಿಸಿ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಕಾರಣಕ್ಕಾಗಿ ನಾಡಿನ ಜನತೆಗೆ ನಾನು ಕೃತಜ್ಞ. ಇದು ನನ್ನ ಕೊನೆ ಚುನಾವಣೆ. ಆದರೆ ನಾನು ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿದ್ದು ಜನರ ಸೇವೆಯನ್ನು ಮುಂದುವರೆಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಹೇಳಿದರು.
ಈ ಸುದ್ದಿಯನ್ನೂ ಓದಿ:
ದಾವಣಗೆರೆಯ ಹಳೇಬಿಸ್ಲೇರಿಯಲ್ಲಿ ನಿಗೂಢವಾಗಿ ವಿವಾಹಿತ ಮರಣ: ಸಾವಿನ ಹಿಂದಿದೆಯಾ “ಹೆಣ್ಣಿನ” ನೆರಳು…?
ನುಡಿದಂತೆ ನಡೆಯುತ್ತೇವೆ:
ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದ ಸುತ್ತೂರಿನಲ್ಲಿ ನಡೆದ ಕೃತಜ್ಞತಾ ಸಮರ್ಪಣಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಸವಾದಿ ಶರಣರು ನುಡಿದಂತೆ ನಡೆದಿದ್ದರು. ಅದನ್ನೇ ಮಾದರಿಯನ್ನಾಗಿ ಇಟ್ಟುಕೊಂಡು, ನಾನು ಮೊದಲ ಬಾರಿ ಬಸವ ಜಯಂತಿ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ನುಡಿದಂತೆ ನಡೆದಿದ್ದೆ. ಮುಖ್ಯಮಂತ್ರಿ ಕುರ್ಚಿ ಎಂದರೆ ಸುಖದ ಸುಪ್ಪತ್ತಿಗೆ ಅಲ್ಲ, ಜನರ ಬದುಕನ್ನು ಸುಧಾರಿಸಲು ಸಿಗುವ ಅವಕಾಶ ಎಂಬುದು ನನ್ನ ಭಾವನೆ ಎಂದರು.
ಇನ್ನಷ್ಟು ಪರಿಣಾಮಕಾರಿ ಕಲ್ಯಾಣ ಕಾರ್ಯಕ್ರಮ:
2013 ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನುಡಿದಂತೆ ನಡೆದು ಸಮಾಜದ ಎಲ್ಲಾ ಜಾತಿ, ಧರ್ಮ ಮತ್ತು ಎಲ್ಲಾ ವರ್ಗಗಳ ಪರವಾಗಿ ಕಲ್ಯಾಣ ಕಾರ್ಯಕ್ರಮ ರೂಪಿಸಿದ್ದೆ. ಈ ಬಾರಿ ಇನ್ನಷ್ಟು ಪರಿಣಾಮಕಾರಿಯಾದ ಕಲ್ಯಾಣ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ನಾಡಿಗೆ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ತಿಳಿಸಿದರು.
ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ (Cm Siddaramaiah) ಕಿಡಿ:
ಪ್ರಧಾನಿ ನರೇಂದ್ರ ಮೋದಿಯವರು ಕಾಂಗ್ರೆಸ್ ಗ್ಯಾರಂಟಿಗಳು ಜಾರಿ ಆಗುವುದಿಲ್ಲ, ರಾಜ್ಯ ದಿವಾಳಿ ಆಗುತ್ತದೆ ಎಂದಿದ್ದರು. ನಾವು ಈಗ ಐದೂ ಗ್ಯಾರೆಂಟಿಗಳನ್ನು ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷ ಬಡವರ-ಮಧ್ಯಮ ವರ್ಗದವರ ಪರವಾದ ಯೋಜನೆ ಘೋಷಿಸಿದಾಗ ಪ್ರಧಾನ ಮಂತ್ರಿ ಮೋದಿಯವರು ಜನರಿಗೆ ಅನುಕೂಲ ಮಾಡುವ ನಮ್ಮ ಯೋಜನೆಗೆ ತಮ್ಮ ಸಹಕಾರ ನೀಡಬೇಕಿತ್ತು. ಆದರೆ ಮೋದಿ ಅವರಿಗೆ ಬಡವರ-ಮಧ್ಯಮ ವರ್ಗದವರ ಪ್ರಗತಿ, ಅಭಿವೃದ್ಧಿ ಬೇಕಾಗಿಲ್ಲ. ಅದಕ್ಕೇ ಬಿಜೆಪಿಯವರು ಜನರಲ್ಲಿ ತಮ್ಮ ಸಂಪ್ರದಾಯದಂತೆ ಸುಳ್ಳುಗಳನ್ನು ಎರಚಾಡುತ್ತಾ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು (Cm Siddaramaiah) ಕಿಡಿಕಾರಿದರು.
Brief:
Prime Minister Narendra Modi said that the Congress guarantees will not be implemented and the state will go bankrupt. We have now implemented five guarantees. When the Congress Party announced a pro-poor-middle class scheme, Prime Minister Modi should have given his support to our scheme to benefit the people. But Modi does not want the progress and development of the poor and the middle class. That is why BJP is creating confusion among the people by spreading lies as per their tradition (Cm Siddaramaiah).
Cm Siddaramaiah Speach, Cm Siddaramaiah@ Varuna, Cm Siddaramaiah visit Varuna, Cm Siddaramaiah Road Show in Varuna, ಸಿದ್ದರಾಮಯ್ಯ ರೋಡ್ ಶೋ, ಸಿದ್ದರಾಮಯ್ಯ ಕಂಡು ಜನರು ಖುಷ್, ಸಿದ್ದರಾಮಯ್ಯರಿಗೆ ಸಾವಿರಾರು ಕಾರ್ಯಕರ್ತರಿಂದ ಸ್ವಾಗತ