Site icon Kannada News-suddikshana

Siddaramaiah: ಕಾನೂನಿನ ಕೈಗೆ ಮತ್ತಷ್ಟು ಬಲ: ಸಿಎಂ ಸಿದ್ದರಾಮಯ್ಯರ ಈ ಮಾತು ಕಾರ್ಯರೂಪಕ್ಕೆ ಬರುತ್ತಾ…?

Siddaramaiah

Siddaramaiah

SUDDIKSHANA KANNADA NEWS/ DAVANAGERE/ DATE:13-07-2023

ಬೆಂಗಳೂರು: ರಾಜ್ಯದಲ್ಲಿ ನಡೆದ ಕೊಲೆ ಪ್ರಕರಣಗಳ ಆರೋಪಿಗಳ ಬಂಧಿಸಲು ಪೊಲೀಸ್ ಇಲಾಖೆ ಸಮರ್ಥವಾಗಿ ಕೆಲಸ ಮಾಡಿದೆ. ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಿ, ಅಪರಾಧಿಗಳಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮ ವಹಿಸಲು ರಾಜ್ಯದ ಪೊಲೀಸ್ ಇಲಾಖೆ ಸಮರ್ಥವಾಗಿದೆ. ಈ ಬಗ್ಗೆ ಯಾವ ಸಂದೇಹವೂ ಬೇಡ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ದುಡ್ಡಿನ ವ್ಯವಹಾರದ ಕಾರಣಕ್ಕಾಗಿ ನಡೆದಿದೆ ಎನ್ನಲಾದ ಜೈನಮುನಿ ಕಾಮಕುಮಾರ ನಂದಿ ಮಹರಾಜರ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 6 ಗಂಟೆಗಳ ಒಳಗೆ ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸುದ್ದಿಯನ್ನೂ ಓದಿ: 

Davanagere: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮೇಲೆ ರೇಣುಕಾಚಾರ್ಯ ಕಣ್ಣು: ಸಿದ್ದೇಶ್ವರ್ ಗೆ ಸೆಡ್ಡು ಹೊಡೆದ್ರಾ ಮಾಜಿ ಸಚಿವರು…?

ವೈಯಕ್ತಿಕ ದ್ವೇಷದ ಕಾರಣಕ್ಕಾಗಿ ಟಿ. ನರಸೀಪುರದ ವೇಣುಗೋಪಾಲ್ ಅವರನ್ನು ಹತ್ಯೆಗೈದ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಯೊಳಗೆ ಬಂಧಿಸಲಾಗಿದೆ. ಬೆಂಗಳೂರಿನ ಏರೋನಿಕ್ಸ್ ಸಂಸ್ಥೆಯ ಎಂ.ಡಿ ಹಾಗೂ ಸಿ.ಇ.ಒ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಗಳೊಳಗೆ ಬಂಧಿಸಲಾಗಿದೆ ಎಂದು ಸಿದ್ದರಾಮಯ್ಯ (Siddaramaiah)ತಿಳಿಸಿದರು.

ಹತ್ಯೆ, ಅಪಹರಣ ಮುಂತಾದ ಅಪರಾಧ ಕೃತ್ಯಗಳು ದುರದೃಷ್ಟಕರ. ಆದರೆ ಒಂದು ಸರ್ಕಾರವಾಗಿ ಇಂಥ ಕಾನೂನು ವಿರೋಧಿ ಕೃತ್ಯಗಳು ನಡೆಯದಂತೆ ತಡೆಯಲು ನಾವು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇವೆ. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ. ಇದಕ್ಕಾಗಿ ಕಾನೂನಿನ ಕೈಗಳಿಗೆ ಇನ್ನಷ್ಟು ಬಲ ನೀಡಲಾಗುವುದು ಎಂದು ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ.

Siddaramaiah News, Siddaramaiah Session, Siddaramaiah Suddi, Siddaramaiah Talk,

Siddaramaiah Statement 

Exit mobile version