SUDDIKSHANA KANNADA NEWS/ DAVANAGERE/ DATE:08-02-2024
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೆಬ್ರವರಿ 9 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಫೆ.9 ರಂದು ಮ.1.25 ಕ್ಕೆ ಹರಿಹರ ತಾಲ್ಲೂಕಿನಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠದ ಆವರಣದಲ್ಲಿರುವ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠ(ರಿ) ರಾಜನಹಳ್ಳಿ ವತಿಯಿಂದ
ಆಯೋಜಿಸಿರುವ ಮಹರ್ಷಿ ವಾಲ್ಮೀಕಿ ಜನ ಜಾಗೃತಿ ಜಾತ್ರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುವರು.
ಲೋಕೋಪಯೋಗಿ ಸಚಿವರ ಜಿಲ್ಲಾ ಪ್ರವಾಸ
ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳೆ ಅವರು ಫೆಬ್ರವರಿ 9 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಫೆ.9 ರಂದು ಮಧ್ಯಾಹ್ನ 2 ಗಂಟೆಗೆ ಹರಿಹರ ತಾಲ್ಲೂಕಿನ ರಾಜನಹಳ್ಳಿ ಗ್ರಾಮಕ್ಕೆ ಆಗಮಿಸಿ, ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠ(ರಿ) ಇವರ ವತಿಯಿಂದ ಆಯೋಜಿಸಿರುವ ಶ್ರೀಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುವರು.