ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ನಿಮ್ಮ ತಪ್ಪಿನಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದರೆ ನಾವು ಸಹಿಸಲ್ಲ: ಸಿದ್ದರಾಮಯ್ಯ ಖಡಕ್ ವಾರ್ನಿಂಗ್

On: May 23, 2023 3:04 PM
Follow Us:
---Advertisement---

[spacing size=””]SUDDIKSHANA KANNADA NEWS| DAVANAGERE| DATE:23-05-2023

ಬೆಂಗಳೂರು: ನಾಡಿನ ಜನತೆ ದುರಾಡಳಿತ ಮತ್ತು ಭ್ರಷ್ಟಾಚಾರದ ವಿರುದ್ಧ ನಮ್ಮನ್ನು ಗೆಲ್ಲಿಸಿ ಅಧಿಕಾರಕ್ಕೆ ತಂದಿದ್ದಾರೆ. ಕಾಲ ಮಿತಿಯಲ್ಲಿ ಕೆಲಸ ಮಾಡಿ ಜನರ ನಿರೀಕ್ಷೆ ಈಡೇರಿಸಬೇಕಿರುವುದು ನಮ್ಮೆಲ್ಲರ ಕರ್ತವ್ಯ. ನನ್ನ ರಾಜಕೀಯ ಜೀವನದಲ್ಲಿ ತಪ್ಪಿಲ್ಲದೆ ಯಾವುದೇ ಅಧಿಕಾರಿಯ ವಿರುದ್ಧ ಕ್ರಮ ಜರುಗಿಸಿಲ್ಲ. ನಿಮ್ಮ ತಪ್ಪಿನಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದರೆ ನಾವು ಸಹಿಸಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ( Siddaramaiah) ಅವರು ಅಧಿಕಾರಿಗಳಿಗೆ ಖಡಕ್‌ ವಾರ್ನಿಂಗ್ ನೀಡಿದರು.

ಇಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಪ್ರಭುಗಳು. ಅವರು ನಮ್ಮನ್ನು ಆರಿಸಿ ಕಳುಹಿಸಿದ್ದಾರೆ. ಅವರ ಪ್ರತಿನಿಧಿಗಳಾಗಿ ಇಲ್ಲಿಗೆ ಬಂದಿದ್ದೇವೆ. ಅವರ ಆಶೋತ್ತರಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಗಳ ಕರ್ತವ್ಯ. ಜನರ ನಿರೀಕ್ಷೆಗೆ ಅನುಗುಣವಾಗಿ ಎಲ್ಲರೂ ಕೆಲಸ ಮಾಡಬೇಕಾಗಿತ್ತದೆ ಎಂದರು.

ಜನರ ಆಶೋತ್ತರಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಅವರಿಗೆ ಸ್ಪಂದಿಸಸಬೇಕೆನ್ನುವ ಬಯಕೆ ಸರ್ಕಾರದ್ದು.
ಉತ್ತಮ ಸರ್ಕಾರದ ನಿರೀಕ್ಷೆ, ಕಿರಿಕಿರಿ ಮಾಡದ ಸರ್ಕಾರ , ಕ್ರಿಯಾಶೀಲ ಸರ್ಕಾರದ ಅಗತ್ಯವಿದೆ ಎಂದು ಜನ ಬಯಸಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಕೆಲಸಗಳು ನಿಂತುಹೋಗಿದೆ, ಭ್ರಷ್ಟಾಚಾರವಿದೆ ಎಂಬ ಭಾವನೆ ಜನರಲ್ಲಿತ್ತು. ಈ ಭಾವನೆಯನ್ನು ಹೋಗಲಾಡಿಸಲು ಅಧಿಕಾರಿಗಳು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಸೂಚಿಸಿದರು.

ಗುಣಮಟ್ಟದ ಕಾಮಗಾರಿಗಳು ಆಗಬೇಕು, ಕಾಲಮಿತಿಯಲ್ಲೇ ಕೆಲಸಗಳಾಗಬೇಕು. ಕಣ್ಣುಮುಚ್ಚಿ ಕೊಂಡು ಸಹಿ ಹಾಕದೇ ಜನರ ಹಣವನ್ನು ಸರಿಯಾದ ರೀತಿಯಲ್ಲಿ ವೆಚ್ಚ ಮಾಡಬೇಕು. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು. ಇವುಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮೇಲ್ವಿಚಾರಣೆ ಮಾಡಬೇಕು. ಕ್ಷೇತ್ರಗಳಿಗೆ ಕಾಲಕಾಲಕ್ಕೆ ಭೇಟಿ ನೀಡುವುದಲ್ಲದೇ ಕಚೇರಿಗಳಿಗೆ ಅನಿರೀಕ್ಷಿತ ಭೇಟಿಯನ್ನೂ ನೀಡಬೇಕು. ಹಿರಿಯ ಅಧಿಕಾರಿಗಳು ನಿಯಮಗಳನ್ನು ಪಾಲಿಸಬೇಕು. ಯೋಜನೆಗಳ ಕ್ಷಿಪ್ರ ಅನುಷ್ಠಾನವಾದರೆ ಜನರಿಗೆ ಪ್ರಯೋಜನವಾಗುತ್ತದೆ. ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕೆನ್ನುವುದು ಸರ್ಕಾರದ ಉದ್ದೇಶ. ಜನರ ಕಷ್ಟಗಳಿಗೆ ಸ್ಪಂದಿಸುವವರೇ ಮನುಷ್ಯರು ಎಂದು ಅರ್ಥ ಮಾಡಿಕೊಂಡು ತಾವೆಲ್ಲರೂ ಜನರ ನಿರೀಕ್ಷೆಗಳಿಗೆ ಸಕಾಲದಲ್ಲಿ ಸೂಕ್ತರೀತಿ ಸ್ಪಂದಿಸಬೇಕೆಂದು ಬಯಸುತ್ತೇವೆ ಎಂದು ಹೇಳಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment