ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ವಕ್ಫ್ ವಿವಾದ, ಬಿಜೆಪಿ ಸರ್ಕಾರದ ಅವಧಿಯಲ್ಲೇ 200ಕ್ಕೂ ಹೆಚ್ಚು ನೊಟೀಸ್: ಸಿಎಂ ಸಿದ್ದರಾಮಯ್ಯ ಹೊಸ ಬಾಂಬ್..!

On: October 31, 2024 12:41 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:31-10-2024

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸುಮಾರು 200ಕ್ಕೂ ಹೆಚ್ಚು ನೋಟೀಸ್ ಗಳನ್ನು ನೀಡಿದ್ದಾರೆ. ಅವರದು ಇಬ್ಬಂದಿ ರಾಜಕೀಯ ನಡೆ. ಯಾವ ರೈತರನ್ನೂ ಒಕ್ಕಲೆಬ್ಬಿಸಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇವೆ. ಕೊಟ್ಟಿರುವ ನೋಟೀಸ್ ಗಳನ್ನು ಹಿಂಪಡೆಯಲು ಈಗಾಗಲೇ ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು ಬಿಜೆಪಿ ಪ್ರತಿಭಟನೆ ಮಾಡುವುದರ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ನವೆಂಬರ್ 4ರ ಬಿಜೆಪಿ ಪ್ರತಿಭಟನೆ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತವಾದದ್ದು, ಸಮಸ್ಯೆಗಳು ಇರದೆಡೆ ‌ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಈಗ ಮುಡಾ ಪ್ರಕರಣದಲ್ಲಿ ಮಾಡಿಲ್ಲವೇ? ಎಂದು ಪ್ರಶ್ನಿಸಿದರು.

ಶಿಗ್ಗಾಂವಿಯಲ್ಲಿ ಅಜ್ಜಂಪೀರ್ ಖಾದ್ರಿ ಅವರು ನಾಮಪತ್ರ ವಾಪಸ್ ಪಡೆದಿದ್ದು, ಉಪಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುತ್ತಾರೆ. ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರೂ ಕ್ಷೇತ್ರಗಳಲ್ಲಿಯೂ ಗೆಲುವು ನಮ್ಮದೇ ಎಂದು ಹೇಳಿದರು.

‘ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ’ ಎಂದು ಮುಖ್ಯಮಂತ್ರಿಗಳು ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು.

ಇದೇ ಸಂದರ್ಭದಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪಾವಳಿ ಶುಭಾಶಯಗಳನ್ನು ತಿಳಿಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment