ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಹಳ್ಳಿಕಾರ ಸಮುದಾಯ ಪ್ರವರ್ಗ 1 ಕ್ಕೆ ಸೇರಿಸಲು ವರದಿ ತರಿಸಿಕೊಂಡು ತೀರ್ಮಾನ: ಸಿಎಂ ಸಿದ್ದರಾಮಯ್ಯ ಭರವಸೆ

On: October 27, 2024 2:13 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:27-10-2024

ಬೆಂಗಳೂರು: ನನಗೆ ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಖಂಡಿತಾ ಸಹಾಯ ಮಾಡ್ತೀನಿ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ. ಪ್ರವರ್ಗ 1 ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಬಗ್ಗೆ ವರದಿ ತರಿಸಿಕೊಂಡು ನಂತರ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ರಾಜ್ಯ ಹಳ್ಳಿಕಾರರ ಸಂಘದ ವತಿಯಿಂದ ಪೂರ್ಣಿಮಾ ಪ್ಯಾಲೇಸ್ ನಲ್ಲಿ ಆಯೋಜಿಸಿದ್ದ ಹಳ್ಳಿಕಾರ ಸಮುದಾಯದ ಸಮಾವೇಶ ಉದ್ಘಾಟಿಸಿ ಹಳ್ಳಿಕಾರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿದರು.

ಜಾತಿ ತಾರತಮ್ಯದ ವ್ಯವಸ್ಥೆಯಲ್ಲಿ ಶಿಕ್ಷಣ ಇಲ್ಲದಿದ್ದರೆ ಸಮಾಜದ ಮುಖ್ಯವಾಹಿನಿಯಲ್ಲಿ ಸಮರ್ಥವಾಗಿರುವುದು ಕಷ್ಟ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3A ಯಿಂದ ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಇದೆ. ಸಮಾಜದಲ್ಲಿ ಯಾವ್ಯಾವ ಜಾತಿಯ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ತಿಳಿಯಲು ಜಾತಿ ಸಮೀಕ್ಷಾ ವರದಿಗಳು ಮುಖ್ಯ. 2011 ರಲ್ಲಿ ಜನಗಣತಿಯೇ ಕೊನೆ ಗಣತಿ. ಈಗ ನಮ್ಮ ಸರ್ಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ ಎಂದರು.

ಕೇಂದ್ರದ ಮೋದಿ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ 10% ಮೀಸಲಾತಿ ನೀಡಿದೆ. ಈ ವ್ಯಾಪ್ತಿಯೊಳಗೆ ಹಳ್ಳಿಕಾರ ಸಮುದಾಯ ಬರುತ್ತದೆಯಾ ಎನ್ನುವುದು ಪರಿಶೀಲಿಸಬೇಕಿದೆ. ಈ ಸಮುದಾಯವನ್ನು ಪ್ರವರ್ಗ 3ಎ ಗೆ ಸೇರಿಸಿರುವುದು ಸರಿಯಲ್ಲ. ಆದ್ದರಿಂದ ಶಾಶ್ವತ ಹಿಂದುಳಿದ ಆಯೋಗಕ್ಕೆ ನಿಮ್ಮ ಬೇಡಿಕೆ ಕಳುಹಿಸಿ ಅಧ್ಯಯನ ಮಾಡಿಸಿ ವರದಿ ಪಡೆಯಲಾಗುವುದು. ಆ ಬಳಿಕ ಸಮುದಾಯಕ್ಕೆ ನ್ಯಾಯಯುತವಾಗಿ ಏನು ಸಲ್ಲಬೇಕು ಎನ್ನುವುದನ್ನು
ಪರಿಶೀಲಿಸಲಾಗುವುದು ಎಂದು ಹೇಳಿದರು.

ಹಳ್ಳಿಕಾರರ ಸಂಘದ ಉಪಾಧ್ಯಕ್ಷ ಕೆ.ಎಂ.ನಾಗರಾಜು ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ, ಡಿಸಿಎಂ ಡಿಕೆ ಶಿವಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಸಚಿವರುಗಳಾದ ರಾಮಲಿಂಗ ರೆಡ್ಡಿ, ಡಿ.ಸುಧಾಕರ್, ಮಾಜಿ ಸಚಿವರಾದ ಶಾಸಕ ಎಸ್ ಟಿ ಸೋಮಶೇಖರ್, ಬೆಂ.ಕೃಷ್ಣಪ್ಪ, ಪ್ರಿಯಕೃಷ್ಣ, ಹಳ್ಳಿಕಾರ ಸಮುದಾಯದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment