ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

On: September 6, 2024 4:27 PM
Follow Us:
---Advertisement---

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದರು.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು. ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಉದ್ಘಾಟನೆಯ ಪೂಜೆ ಮತ್ತು ಹೋಮಗಳು ಚಾಮುಂಡಿಬೆಟ್ಟ ತಾಯಿ ಸನ್ನಿದಿಯ ಪ್ರಧಾನ ಅರ್ಚಕರಾದ ಡಾ.ಎನ್.ಶಶಿಶೇಖರ ದೀಕ್ಷಿತ್ ಅವರ ನೇತೃತ್ವದಲ್ಲಿ ನೆರವೇರಿತು. ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ನವಗ್ರಹ ಹೋಮ, ಗಣಪತಿ ಹೋಮ, ಮೃತ್ಯುಂಜಯ ಹೋಮ ಹಾಗೂ ಸಪ್ತಗಂಗಾ ಪೂಜೆಯನ್ನು ಶಾಸ್ತ್ರೋಕ್ತವಾಗಿ ನೆರವೇರಿಸಿದರು.

ಬಳಿಕ ಇವರ ಮಾರ್ಗದರ್ಶನದಲ್ಲೇ ಹೆಬ್ಬಹಳ್ಳಿಯ ವಿತರಣಾ ತೊಟ್ಟಿ 4 ರಲ್ಲಿ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸಿದರು.ಗೌರಿ ಹಬ್ಬದ ಪ್ರಯುಕ್ತ ತಾಯಿ ಸನ್ನಿದಿಯಲ್ಲಿ ಪೂಜಾ ಕಾರ್ಯಗಳ ಒತ್ತಡ ಇದ್ದರೂ ಯೋಜನೆಯ ಉದ್ಘಾಟನೆಯ ಪೂಜಾ ಕಾರ್ಯಗಳನ್ನು ನೆರವೇರಿಸಲು ಒಪ್ಪಿ ಬಂದ ದೀಕ್ಷಿತರಿಗೆ ಮುಖ್ಯಮಂತ್ರಿಗಳು ಕೃತಜ್ಞತೆ ಅರ್ಪಿಸಿದರು.

Join WhatsApp

Join Now

Join Telegram

Join Now

Leave a Comment