Site icon Kannada News-suddikshana

‘ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ’- ಸಿಎಂ ಸಿದ್ದರಾಮಯ್ಯ

ಬೆಂಗಳೂರು:ನಾಗಮಂಗಲ ಗಲಭೆಯ ಕಿಡಿಗೇಡಿಗಳು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ.

ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆ ಎಂದು ಸಿಎಂ ಹೇಳಿದ್ದಾರೆ.

Exit mobile version