Site icon Kannada News-suddikshana

‘ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಏರಿಕೆ ಮಾಡುತ್ತೇವೆ’- ಸಿದ್ದರಾಮಯ್ಯ ಘೋಷಣೆ

ರಾಮನಗರ: ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಏರಿಕೆ ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ ಶಂಕು ಸ್ಥಾಪನೆ ನೆರವೇರಿಸಿ ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, ನಂದಿನ ಹಾಲಿನ ದರ ಹೆಚ್ಚಳ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹಾಲಿನ ದರ ಏರಿಕೆ ಮಾಡೋಣ ಎಂದು ತಿಳಿಸಿದ್ದಾರೆ. ತಮ್ಮ ಘೋಷಣೆ ಮೂಲಕ ಸರ್ಕಾರ ಗ್ರಾಹಕರಿಗೆ ಶಾಕ್ ನೀಡಿದೆ.

ನೀವೆಲ್ಲ ರೈತರ ಮಕ್ಕಳಿದ್ದಾರೆ, 3 ರೂಪಾಯಿ ಹೆಚ್ಚಳ ಮಾಡಿದರೆ ಅಥವಾ ಏನೇ ಹೆಚ್ಚು ಮಾಡಿದ್ರೂ ಲಬ್ಬೊ ಲಬ್ಬೋ ಅಂತಾ ಹೇಳುತ್ತಾರೆ. ನಾವು ರೈತರ ಮಕ್ಕಳು, ರೈತರು ಮಕ್ಕಳು ಎಂದು ಹೇಳುತ್ತಾರೆ. ಆದರೆ ರೈತರ ಮಕ್ಕಳಿಗೆ ನೀವೇನಾದ್ರೂ ಕೊಟ್ಟಿದ್ದೀರಾ? ಏನೂ ಮಾಡದೇ ನಾವು ರೈತರ ಮಕ್ಕಳು ಅಂತಾ ಹೇಳುತ್ತಾರೆ ಎಂದು ಜೆಡಿಎಸ್ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Exit mobile version