ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮುಡಾ ಹಗರಣ ಕೇಸ್ : ಸಿಎಂ ಸಿದ್ದರಾಮಯ್ಯ ವಿರುದ್ಧ `ED’ಯಿಂದ `FIR’ ದಾಖಲು

On: October 1, 2024 11:02 AM
Follow Us:
---Advertisement---

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ( Karnataka Chief Minister Siddaramaiah ) ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದೆ.

ಮುಖ್ಯಮಂತ್ರಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲು ಫೆಡರಲ್ ಏಜೆನ್ಸಿ ಜಾರಿ ಪ್ರಕರಣ ಮಾಹಿತಿ ವರದಿ (Enforcement Case Information Report- ECIR) ಸಲ್ಲಿಸಿದೆ ಎಂದು ವರದಿ ತಿಳಿಸಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (Mysuru Urban Development Authority- MUDA ) ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನ್ಯಾಯಾಲಯದ ಆದೇಶದ ಮೇರೆಗೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್.27ರಂದು ಎಫ್ ಐಆರ್ ದಾಖಲಿಸಿದ್ದರು.

ಮೈಸೂರಿನ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್ನಲ್ಲಿ ಸಿದ್ದರಾಮಯ್ಯ ಅವರನ್ನು ಎ1 ಆರೋಪಿ, ಅವರ ಪತ್ನಿ ಬಿ.ಎಂ.ಪಾರ್ವತಿ ಅವರನ್ನು ಎ2, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಎ3 ಮತ್ತು ದೇವರಾಜು ಅವರನ್ನು ಎ4 ಆರೋಪಿಯನ್ನಾಗಿ ಹೆಸರಿಸಲಾಗಿದೆ. ಮುಡಾ ಭೂ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸ್ ತನಿಖೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಸೆಪ್ಟೆಂಬರ್ 25 ರಂದು ಆದೇಶಿಸಿತ್ತು. ಈ ಪ್ರಕರಣದಲ್ಲಿ, ಮುಡಾ ಸ್ವಾಧೀನಪಡಿಸಿಕೊಂಡ ಭೂಮಿಗೆ ಹೋಲಿಸಿದರೆ ಮೈಸೂರಿನ ಮಾರುಕಟ್ಟೆ ಪ್ರದೇಶದಲ್ಲಿ ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರ ನಿವೇಶನಗಳನ್ನು ನೀಡಲಾಗಿದೆ ಎಂದು ಆರೋಪಿಸಲಾಗಿದೆ.

Join WhatsApp

Join Now

Join Telegram

Join Now

Leave a Comment