Site icon Kannada News-suddikshana

ಕೊಲೆಯಾದ ರೌಡಿಶೀಟರ್ ದರ್ಶನಕ್ಕೆ ಕೇಸರಿಪಡೆ ನಾಯಕರ ಭೇಟಿ: ಬಿಜೆಪಿಗೆ ಖಡಕ್ ಉತ್ತರ ಕೊಟ್ಟ ಸಿಎಂ ಸಿದ್ದು..!

SUDDIKSHANA KANNADA NEWS/ DAVANAGERE/ DATE-02-05-2025

ಬೆಂಗಳೂರು: ಮಂಗಳೂರಿನಲ್ಲಿ ಕೊಲೆ ಆದವನು ರೌಡಿ ಶೀಟರ್ ಎನ್ನಲಾಗುತ್ತಿದೆ. ಈ ಬಗ್ಗೆ ಸಮಗ್ರ ತನಿಖೆಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಪರಾಧಿಗಳನ್ನು ಪತ್ತೆ ಹಚ್ಚಿ ಬಂಧಿಸಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆಯಾಗಿದ್ದು, ಪದೇ ಪದೇ ಕೋಮು ಗಲಭೆಗಳಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕೊಲೆಗೀಡಾದ ವ್ಯಕ್ತಿ ರೌಡಿಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದು, ಈ ಬಗ್ಗೆ ಎಡಿಜಿಪಿ (ಕಾನೂನು ಸುವ್ಯವಸ್ಥೆ) ವರೊಂದಿಗೆ ಮಾತನಾಡಿ ಅವರನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಲು ಸೂಚಿಸಿದೆ. ಮನುಷ್ಯನ ಪ್ರಾಣ ಬಹಳ ಮುಖ್ಯ. ಕೂಡಲೇ ಅಪರಾಧಿಗಳು ಯಾರೇ ಆಗಿದ್ದರೂ ಅವರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು.

Exit mobile version