ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ನಟ ದರ್ಶನ್, ಜಗ್ಗೇಶ್ ಹುಲಿ ಉಗುರು ಪ್ರಕರಣ: ಮಾಹಿತಿ ಪಡೆಯುತ್ತೇನೆ ಎಂದ ಸಿಎಂ ಸಿದ್ದರಾಮಯ್ಯ

On: October 25, 2023 10:29 AM
Follow Us:
---Advertisement---

SUDDIKSHANA KANNADA NEWS\ DATE:25-10-2023

 ಬೆಂಗಳೂರು: ಹುಲಿ ಉಗುರು ಧರಿಸಿದ ಬಗ್ಗೆ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಹಾಗೂ ಜಗ್ಗೇಶ್ ಅವರ ಪ್ರಕರಣ ದಾಖಲಾಗಿರುವ ಬಗ್ಗೆ ಮಾಹಿತಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಪೊಲೀಸ್ ಇಲಾಖೆಯಿಂದ ಮಾಹಿತಿ ಪಡೆದು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ತೋಟಗಾರಿಕೆ ಪಿತಾಮಹ ಡಾ.ಎಂ.ಹೆಚ್.ಮರೀಗೌಡ ಅವರ ಕಾಲದಲ್ಲಿ ಕರ್ನಾಟಕದಲ್ಲಿ ತೋಟಗಾರಿಕಾ ಕ್ಷೇತ್ರ ಅಭಿವೃದ್ಧಿಯ ರೂವಾರಿಯಾಗಿದ್ದರು. ಸರ್ಕಾರಿ ಅಧಿಕಾರಿಯಾಗಿ ನಿಷ್ಠೆ ಹಾಗೂ ಬದ್ಧತೆಯಿಂದ ತೋಟಗಾರಿಕೆ ಕ್ಷೇತ್ರದ ಬೆಳವಣಿಗೆಗೆ ಶ್ರಮಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ತೋಟಗಾರಿಕೆ ಪಿತಾಮಹ ಡಾ.ಎಂ. ಹೆಚ್. ಮರೀಗೌಡ ಪ್ರತಿಮೆ ಅನಾವರಣಗೊಳಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರಿನ ಕೇಂದ್ರಸ್ಥಳದಲ್ಲಿರುವ ಕರ್ಜನ್ ಪಾರ್ಕ್ ನಲ್ಲಿ ಡಾ.ಎಂ.ಹೆಚ್.ಮರೀಗೌಡರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ. ಡಾ.ಎಂ.ಹೆಚ್.ಮರೀಗೌಡರ ಸಾಧನೆಗಳು ಎಲ್ಲರಿಗೂ ಸ್ಪೂರ್ತಿ ತರಲಿದೆ ಎಂದು ತಿಳಿಸಿದರು

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment