ಆಶಾ ಕಾರ್ಯಕರ್ತೆಯರ ಸಂಘಟನೆಯ ಮುಖಂಡರ ಜೊತೆಗಿನ ಸಿಎಂ ಸಂಧಾನ ಯಶಸ್ವಿ!
ಬೆಂಗಳೂರು: ಆಶಾ ಕಾರ್ಯಕರ್ತೆಯರು ಬೆಂಗಳೂರಿನಲ್ಲಿ ನಡೆಸುತ್ತಿದ್ದಉ, ಸಿಎಂ ಸಿದ್ದರಾಮಯ್ಯರ ಜೊತೆಗಿನ ಸಂಧಾನ ಯಶಸ್ವಿಯಾಗಿದೆ.
ಮುಷ್ಕರ ವಾಪಸ್ ಪಡೆಯಲು ಆಶಾ ಕಾರ್ಯಕರ್ತೆಯರು ನಿರ್ಧಾರ ಮಾಡಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಕೆಲ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಸಚಿವರ ಭರವಸೆಗೆ ಕಿಮ್ಮತ್ತು ನೀಡಿರಲಿಲ್ಲ. ಈಗ ಸಿದ್ದರಾಮಯ್ಯರ ಜೊತೆಗಿನ ಸಂಧಾನ ಯಶಸ್ವಿಯಾಗಿದ್ದು ಕರ್ತವ್ಯಕ್ಕೆ ಮರಳಲು ಒಪ್ಪಿದ್ದಾರೆ.
ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ, ಸರ್ಕಾರಿ ಸೌಲಭ್ಯ, ನೀಡಬೇಕಾಗಿರುವ ವೇತನ, ಹೆಚ್ಚಿರುವ ಕೆಲಸದ ಒತ್ತಡ ಕಡಿಮೆ ಮಾಡಬೇಕೆಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಧರಣಿ ನಡೆಸಲಾಗುತಿತ್ತು.