Site icon Kannada News-suddikshana

ಸಿಲಿಕಾನ್ ಸಿಟಿ ಮಹಾಮಳೆಗೆ ಮಹಿಳೆ ಬಲಿ: 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

 

ಬೆಂಗಳೂರು (BANGALORU): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿನೀಡಿ ಬೆಂಗಳೂರಿನ ಕೆ.ಆರ್.ವೃತ್ತದ ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ 23 ವರ್ಷದ ಭಾನುರೇಖಾ ಅವರ ಕುಟುಂಬದವರನ್ನು ಭೇಟಿಮಾಡಿ ಸಾಂತ್ವನ ಹೇಳಿದರು.

ಇದೇ ವೇಳೆ ದುರ್ಘಟನೆಯಲ್ಲಿ ಸಾವನ್ನಪ್ಪಿದ ಯುವತಿಯ ಕುಟುಂಬಕ್ಕೆ ರೂ. 5 ಲಕ್ಷ ಪರಿಹಾರ ಹಾಗೂ ಅಸ್ವಸ್ಥಗೊಂಡಿರುವ ಎಲ್ಲರ ಚಿಕಿತ್ಸಾ ವೆಚ್ಚವನ್ನುಸರ್ಕಾರವೇ ಭರಿಸುವುದಾಗಿ ತಿಳಿಸಿದರು.

ಅಂಡರ್ ಪಾಸ್ ಗಳಿಂದ ನೀರು ಹೊರಹೋಗುವ ಚರಂಡಿಗಳು ಹೂಳು ತುಂಬಿರುವುದರಿಂದ ಏಕಾಏಕಿ ಮಳೆ ಸುರಿದಾಗ ನೀರು ಸಂಗ್ರಹಗೊಂಡು ಇಂಥ ಅವಘಡಕ್ಕೆ ಕಾರಣವಾಗುತ್ತಿದೆ. ನಗರದಲ್ಲಿ ಮಳೆ ನೀರು ಸಂಗ್ರಹಗೊಳ್ಳುವ ಎಲ್ಲಾ ಅಂಡರ್ ಪಾಸ್ ಗಳನ್ನು ಗುರುತಿಸಿ ಸರಿಪಡಿಸಲಾಗುವುದು ಹಾಗೂ ಕಾಲುವೆ ಒತ್ತುವರಿಯನ್ನು ತೆರವು ಮಾಡಿ ನೀರಿನ ಸರಾಗ ಹರಿವಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಸಿಎಂ  ತಿಳಿಸಿದರು.

Exit mobile version