ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕಾನೂನುಬಾಹಿರ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ನಿರ್ದಾಕ್ಷಿಣ್ಯ ಕಾನೂನು ಕ್ರಮ: ಸಿಎಂ ಸಿದ್ದರಾಮಯ್ಯ

On: January 31, 2025 2:10 PM
Follow Us:
---Advertisement---

ಬೆಂಗಳೂರು: ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ, ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿನಂತಿಸಿದರು.

ಅವರು ಇಂದು ಮೈಸೂರು ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸಧ್ಯದಲ್ಲಿಯೇ ಸುಗ್ರೀವಾಜ್ಞೆ:

ಮೈಕ್ರೋ ಫೈನಾನ್ಸ್ ನಿಂದ ಜನರಿಗಾಗುತ್ತಿರುವ ತೊಂದರೆ ಹಾಗೂ ಬಿಜೆಪಿಯವರು ರಾಜ್ಯದಲ್ಲಿ ಗೂಂಡಾ ರಾಜ್ಯವಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಜನರು ಸಾಲ ಲಭ್ಯವಾಗುವ ಕಡೆ ಸಾಲ ಪಡೆಯುತ್ತಿದ್ದಾರೆ. ಖಾಸಗಿ ಹಣಕಾಸು ಸಂಸ್ಥೆ, ಲೇವಾದೇವಿಗಾರರು ನೀಡುವ ಸಾಲದ ಮೇಲೆ ಹೆಚ್ಚಿನ ಬಡ್ಡಿ ದರವನ್ನು ಹಾಕುವುದಲ್ಲದೇ, ಗೂಂಡಾಗಳ ಮೂಲಕ ಜನರನ್ನು ಹೆದರಿಸಿ, ಅಮಾನವೀಯ ರೀತಿಯಲ್ಲಿ ಸಾಲ ವಸೂಲಾತಿಯಲ್ಲಿ ತೊಡಗಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ವಾರ್ಷಿಕವಾಗಿ ಶೇ. 28 ರಿಂದ 30 ರಷ್ಟು ಬಡ್ಡಿ ವಸೂಲಿ ಮಾಡುತ್ತಿವೆ. ಇದರಿಂದ ಸಾಲ ಪಡೆದ ಜನರು ಬೇಸತ್ತು, ಆತ್ಮಹತ್ಯೆಗೆ ಶರಣಾಗುತ್ತಿರುವುದನ್ನು ಗಮನಿಸಲಾಗಿದೆ. ಮೈಕ್ರೋ ಫೈನಾನ್ಸ್ ವ್ಯವಸ್ಥೆಗಳು ಕೇಂದ್ರಸರ್ಕಾರದ ಅಧೀನದಲ್ಲಿ ಬರುವ ರಿಸರ್ವ್ ಬ್ಯಾಂಕ್ ನ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುತ್ತವೆ. ಆದ್ದರಿಂದ ಮೈಕ್ರೋ ಫೈನಾನ್ಸ್ ನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಸಧ್ಯದಲ್ಲಿಯೇ ಸುಗ್ರೀವಾಜ್ಞೆಯನ್ನು ಹೊರಡಿಸಲಿದ್ದು, ಕಿರುಕುಳ ನೀಡುತ್ತಿರುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ:

ಕೇಂದ್ರದ ಬಜೆಟ್ ಅಧಿವೇಶನದಿಂದ ರಾಜ್ಯದ ನಿರೀಕ್ಷೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರದವರು ರಾಜ್ಯಕ್ಕೆ ತಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಿದ ಅನುದಾನವನ್ನು ನೀಡಿಲ್ಲ. 2023-24 ರ ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಇಳಿಸಿದ್ದಾರೆ.ಡಿದ್ದಾರೆ.ಈ 5300 ಕೋಟಿ ರೂ. ಘೋಷಣೆ ಮಾಡಿದ್ದರು. ಆದರೆ ಇದುವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ. ನಬಾರ್ಡ್ ನ ಅನುದಾನದಲ್ಲಿ ಶೇ.58 ರಷ್ಟು ಕಡಿತ ಮಾಡಿದ್ದು, ಕಳೆದ ವರ್ಷ ನಬಾರ್ಡ್ ನ ಅಡಿ ನೀಡಲಾಗಿದ್ದ 5800 ಕೋಟಿ ರೂ. ,ಈ ವರ್ಷ 2345 ಕೋಟಿ ರೂ. ಇಳಿಸಿದ್ದಾರೆ. ಕರ್ನಾಟಕ 4ಲಕ್ಷ ಕೋಟಿಯಷ್ಟು ಕೇಂದ್ರಕ್ಕೆ ತೆರಿಗೆ ನೀಡಿದರೆ, ರಾಜ್ಯಕ್ಕೆ ಕೇವಲ 60 ಸಾವಿರ ಕೋಟಿ ಮರಳಿ ಬರುತ್ತಿದ್ದುದ್ದು, ತೆರಿಗೆ ಹಂಚಿಕೆಯ ಪಾಲಿನಲ್ಲಿಯೂ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment