Site icon Kannada News-suddikshana

ಚನ್ನಗಿರಿಯಲ್ಲಿ ತಾಲಿಬಾನ್ ರೀತಿ ಹಲ್ಲೆ ವಿಚಾರ: ಕಾನೂನು ಉಲ್ಲಂಘಿಸಿದರೆ ಬಲಿ ಹಾಕ್ತೇವೆಂದ್ರು ಸಿಎಂ ಸಿದ್ದರಾಮಯ್ಯ!

SUDDIKSHANA KANNADA NEWS/ DAVANAGERE/ DATE:16-04-2025

ದಾವಣಗೆರೆ: ಚನ್ನಗಿರಿ ತಾಲೂಕಿನ ತಾವರಕೆರೆ ಗ್ರಾಮದ ಜಾಮೀಯಾ ಮಸೀದಿ ಬಳಿ ಅನೈತಿಕ ಸಂಬಂಧ ಆರೋಪದ ಮೇಲೆ ಇಬ್ಬರು ಮಹಿಳೆಯರಿಗೆ ತಾಲಿಬಾನ್ ರೀತಿಯಲ್ಲಿ ಹೊಡೆದಿರುವ ವಿಚಾರ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಕಲಬುರ್ಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಿಳೆ ಮೇಲೆ ಹಲ್ಲೆ ನಡೆದಿರುವ ಕುರಿತಂತೆ ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗುಡುಗಿದರು.

ಅನೈತಿಕ ಸಂಬಂಧ ಆರೋಪಿಸಿ ನಡುರಸ್ತೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಯಾರೇ ತಪ್ಪು ಮಾಡಿದರೂ ಕೂಡ, ಕಾನೂನು ಉಲ್ಲಂಘಿಸಿದರೆ ಯಾರು ಎಷ್ಟೇ ಪ್ರಬಲವಾಗಿದ್ದರೂ, ಬಲಿ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.

Exit mobile version