SUDDIKSHANA KANNADA NEWS/ DAVANAGERE/ DATE:22-08-2023
ದಾವಣಗೆರೆ: ಸೆಪ್ಟಂಬರ್ 18 ರಂದು ಆಚರಿಸಲಿರುವ ಗಣೇಶ ಚತುರ್ಥಿಯನ್ನು ಮಹಾನಗರ ಪಾಲಿಕೆಯಲ್ಲಿ ಪರಿಸರ ಸ್ನೇಹಿಯಾಗಿ ಆಚರಿಸಲು, ಗಣೇಶ ಮೂರ್ತಿ ತಯಾರಕರು ಪ್ಲಾಸ್ಟರ್ ಆಫ್ ಪ್ಯಾರೀಸ್‍ನಿಂದ ಮೂರ್ತಿ
ತಯಾರಿಸಿ ಮಾರಾಟ ಮಾಡದಂತೆ ಹಾಗೂ ಸಾರ್ವಜನಿಕರು ಖರೀದಿಸದಂತೆ ತಿಳಿಸಲಾಗಿದೆ.
ಗಣೇಶ ಮೂರ್ತಿಗಳನ್ನು ಅರಿಶಿಣ ಅಥವಾ ಜೇಡಿ ಮಣ್ಣಿನಿಂದ ತಯಾರಿಸಿ, ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಮಾರಾಟ ಮಾಡಬೇಕು. ಪ್ಲಾಸ್ಟರ್ ಆಫ್ ಪ್ಯಾರೀಸ್ ನಿಂದ ಗಣೇಶ ಮೂರ್ತಿ ತಯಾರಿಸಿ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಂಡು, ಮೂರ್ತಿಗಳನ್ನು ವಶಪಡಿಸಿಕೊಳ್ಳಲಾಗುವುದು ಹಾಗೂ ರೂ. 10,000 ದಂಡ ವಿಧಿಸಲಾಗುವುದು ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.