ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆ ಉತ್ತರ, ದಕ್ಷಿಣದಲ್ಲಿ ಶೇ.75ರಷ್ಟು ಮತದಾನದ ಗುರಿ: ರೇಣುಕಾ

On: April 11, 2023 1:01 PM
Follow Us:
---Advertisement---

SUDDIKSHANA KANNADA NEWS| DAVANAGERE | DATE:11-04-2023

ದಾವಣಗೆರೆ: ದಾವಣಗೆರೆ (DAVANAGERE) ಉತ್ತರ ವಿಧಾನಸಭಾ ಕ್ಷೇತ್ರ ಹಾಗೂ ದಕ್ಷಿಣ (SOUTH) ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಹೆಚ್ಚಳಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ. ಕಳೆದ ಬಾರಿ ಶೇಕಡಾ 65ರಷ್ಟು ಮತದಾನ ಆಗಿತ್ತು. ಈ ಬಾರಿ ಶೇಕಡಾ 75ರಷ್ಟು ಮತದಾನದ ಗುರಿ ಹೊಂದಲಾಗಿದೆ ಎಂದು ದಾವಣಗೆರೆ ದಕ್ಷಿಣ ಚುನಾವಣಾಧಿಕಾರಿ ರೇಣುಕಾ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ (DAVANAGERE) ಉತ್ತರದಲ್ಲಿ 242 ಮತಗಟ್ಟೆಗಳಿದ್ದು, ದಕ್ಷಿಣದಲ್ಲಿ 212 ಮತಗಟ್ಟೆಗಳನ್ನು ಮಾಡಲಾಗಿದೆ. ಇಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸಲಾಗುವುದು. ಉತ್ತರದಲ್ಲಿ ಒಟ್ಟು 2,32,014 ಹಾಗೂ ದಕ್ಷಿಣದಲ್ಲಿ 2,04,442 ಮತದಾರರಿದ್ದಾರೆ. ಉತ್ತರದಲ್ಲಿ 46 ಹಾಗೂ ದಕ್ಷಿಣದಲ್ಲಿ 40 ಸೈನಿಕ ವೋಟರ್ಸ್ ಇದ್ದಾರೆ ಎಂದು ಮಾಹಿತಿ ನೀಡಿದರು.

ಬಿಎಲ್ ಒ(BLO), ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು ಮತ್ತು ಸಾರ್ವಜನಿಕರ ಸಹಕಾರದೊಂದಿಗೆ ಮತದಾನ ಹೆಚ್ಚಳ ಮಾಡಲು ಮನೆ ಮನೆ ಭೇಟಿ ನೀಡಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಗುವುದು. 12 ಸಾವಿರ ಮತದಾರರು 80 ವರ್ಷ ಮೇಲ್ಪಟ್ಟವರು ಇದ್ದು, ಇವರಿಗೆ ಮತದಾನಕ್ಕೆ ಮನೆಯಿಂದಲೇ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ 107-ದಾವಣಗೆರೆ (DAVANAGERE) ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಚುನಾವಣಾಧಿಕಾರಿಗಳ ರೂಂ ನಂ.3 ರಲ್ಲಿ ಏಪ್ರಿಲ್ 13 ರಿಂದ 20 ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ ಎಂದರು.

ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಅಭ್ಯರ್ಥಿಗಳು ನಾಮಪತ್ರಗಳ ನಮೂನೆ ಪಡೆದು ಏಪ್ರಿಲ್ 20 ರೊಳಗಾಗಿ ಸಲ್ಲಿಸಬೇಕು. ನಂತರ ಸ್ವೀಕರಿಸಲಾದ ನಾಮಪತ್ರಗಳನ್ನು ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪರಿಶೀಲನೆ ನಡೆಸಲಾಗುತ್ತದೆ. ಅಭ್ಯರ್ಥಿಗಳು ಏಪ್ರಿಲ್ 24 ರಂದು ಮಧ್ಯಾಹ್ನ 3 ಗಂಟೆಯೊಳಗಾಗಿ ನಾಮಪತ್ರಗಳನ್ನು ಹಿಂಪಡೆಯಬಹುದಾಗಿದೆ ಎಂದು ರೇಣುಕಾ ವಿವರಿಸಿದರು.

ಗೋಷ್ಠಿಯಲ್ಲಿ ದಾವಣಗೆರೆ ಉತ್ತರದ ಚುನಾವಣಾಧಿಕಾರಿ ಕೆ. ಆರ್. ಶ್ರೀನಿವಾಸ್ ಹಾಜರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment