ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬ್ಯಾಂಕ್ ಅಧಿಕಾರಿಗಳು (BANK OFFICERS), ಗುಮಾಸ್ತರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ: 45 ದಿನ ಸಿಗಲಿದೆ ತರಬೇತಿ (JOB TRAINING)

On: June 3, 2023 12:17 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:03-06-2023

ದಾವಣಗೆರೆ(DAVANAGERE): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಜೂನ್ 8 ರಂದು ಬ್ಯಾಂಕ್ ಅಧಿಕಾರಿಗಳ (BANK OFFICERS) ಮತ್ತು ಗುಮಾಸ್ತರ (ATTENDER) ಹುದ್ದೆ(POST) ಗಳಿಗೆ ನೇಮಕ ಮಾಡಿಕೊಳ್ಳಲು ಸ್ಪರ್ಧಾತ್ಮಕ ಪರೀಕ್ಷೆಗಾಗಿ 45 ದಿನಗಳ ತರಬೇತಿ (TRAINING)ಯನ್ನು ಆಯೋಜಿಸಲಾಗಿದೆ.

ಆಸಕ್ತರು ಜೂನ್ 7 ರೊಳಗಾಗಿ ಬೆಳಗ್ಗೆ 10 ರಿಂದ 5 ಗಂಟೆಯವರೆಗೆ ಮೈಸೂರಿನಲ್ಲಿರುವ ಕೇಂದ್ರ ಕಚೇರಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿ ತರಬೇತಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2515944 / 9964760090 ಸಂಪರ್ಕಿಸಲು ಕೋರಲಾಗಿದೆ.

ಕುರಿ, ಮೇಕೆ ಸಾಕಾಣಿಕೆ ತರಬೇತಿ ಶಿಬಿರ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜೂನ್ 5 ಮತ್ತು 6 ರಂದು 25 ಜನ ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ತರಬೇತಿಗೆ ಹಾಜರಾಗಬೇಕು. ತರಬೇತಿಗೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ. ಸಂ. 08192-233787 ಗೆ ಸಂಪರ್ಕಿಸಲು ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment