ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕಳಸಪ್ಪನವರ ಗೌಡ್ರು ಚನ್ನಬಸಪ್ಪ ನಿಧನ: ಅಂತಿಮ ದರ್ಶನ ಪಡೆದ ಜಿ. ಬಿ. ವಿನಯ್ ಕುಮಾರ್

On: October 20, 2024 4:37 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:20-10-2024

ದಾವಣಗೆರೆ: ನಗರದ ಶಕ್ತಿದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ ನ ಧರ್ಮದರ್ಶಿ, ಕುರುಬ ಸಮಾಜದ ಹಿರಿಯ ಮುಖಂಡ ಕಳಸಪ್ಪನವರ ಗೌಡ್ರು ಚನ್ನಬಸಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಇನ್ಸೈಟ್ಸ್ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರೂ ಆದ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಮೃತರ ಅಂತಿಮ ದರ್ಶನ ಪಡೆದರು.

ಶಿವಾಜಿನಗರದ ದುರ್ಗಾಂಬಿಕಾ ದೇವಸ್ಥಾನದ ಬಳಿಯಿರುವ ನಿವಾಸಕ್ಕೆ ವಿನಯ್ ಕುಮಾರ್ ಮತ್ತವರ ತಂಡವು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿತು. ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಗಲಿದ ಸಮಾಜದ ಹಿರಿಯ ಮುಖಂಡ ಕಳಸಪ್ಪನವರ ಗೌಡ್ರು ಚನ್ನಬಸಪ್ಪರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ವಿನಯ್ ಕುಮಾರ್ ಅವರು ಪ್ರಾರ್ಥಿಸಿದರು.

ಈ ವೇಳೆ ಮಾತನಾಡಿದ ಜಿ. ಬಿ. ವಿನಯ್ ಕುಮಾರ್ ಅವರು, ಕಳಸಪ್ಪನವರ ಗೌಡ್ರು ಚನ್ನಬಸಪ್ಪರು ಕೇವಲ ಒಂದು ಜಾತಿಗೆ ಸೀಮಿತವಾದವರಲ್ಲ. ಎಲ್ಲರನ್ನೂ ಪ್ರೀತಿ, ವಿಶ್ವಾಸದಿಂದ ಕಾಣುತ್ತಿದ್ದರು. ಮಾತ್ರವಲ್ಲ, ದುರ್ಗಾಂಬಿಕಾ ದೇವಸ್ಥಾನದಲ್ಲಿ ನಡೆಯುವ ಜಾತ್ರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ ನಿರ್ವಹಿಸಿಕೊಂಡು ಬರುತ್ತಿದ್ದರು. ದೇವಸ್ಥಾನದಲ್ಲಿನ ಪೂಜೆ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳನ್ನು ಸುಸೂತ್ರವಾಗಿ ನಡೆದುಕೊಂಡು ಹೋಗುವಂತೆ ಮಾಡಿದವರು. ಮೃತರ ನಿಧನದಿಂದ ತುಂಬಲಾರದ ನಷ್ಟ ಆಗಿದೆ ಎಂದು ಹೇಳಿದರು.

ಮೃತರು ಅನೇಕ ಸೇವಾ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು. ವಿವಿಧ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಿದವರು. ಅವರ ನಿಧನದಿಂದ ಕುಟುಂಬದವರು ದಿಗ್ಬ್ರಾಂತರಾಗಿದ್ದು, ಅವರಿಗೆ ನೋವು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment