SUDDIKSHANA KANNADA NEWS/ DAVANAGERE/ DATE:21-03-2025
ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣದ ಕುರಿತಾಗಿ ಗೃಹ ಸಚಿವರು ಸದನದ ಒಳಗೊಂದು ಮತ್ತು ಸದನದ ಹೊರಗೊಂದು ಹೇಳಿಕೆ ನೀಡುತ್ತಿದ್ದಾರೆ. ಪ್ರಕರಣವನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರು ಅಥವಾ ಸಿಬಿಐ(Central Bureau of Investigation) ಮೂಲಕ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ (B. Y. Vijayendra) ಒತ್ತಾಯಿಸಿದ್ದಾರೆ.
READ ALSO THIS STORY: 48 ರಾಜಕಾರಣಿಗಳು ಹನಿಟ್ರ್ಯಾಪ್ ಗೆ ಬಲಿ! ಸಿಡಿ ನಿರ್ಮಾಪಕರು, ನಿರ್ದೇಶಕರು ಯಾರು..?
ಹನಿಟ್ರ್ಯಾಪ್ ಗೊಂದಲದ ನಡುವೆಯೂ ಸರ್ಕಾರ ಮುಸಲ್ಮಾನರಿಗೆ ಮೀಸಲಾತಿ ಒದಗಿಸುವ ಮಸೂದೆಗೆ ಅನುಮೋದನೆ ಪಡೆದುಕೊಂಡಿದೆ, ಇದರ ವಿರುದ್ಧ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟಿಸಲಿದೆ ಎಂದು ಎಚ್ಚರಿಸಿದರು.
ಕಾಂಗ್ರೆಸ್ ಸರ್ಕಾರದ ಅಧಿಕಾರದಲ್ಲಿದ್ದು, ಆಡಳಿತ ಪಕ್ಷದ ಸಚಿವರ ಮೇಲೆಯೇ ಹನಿಟ್ರ್ಯಾಪ್ ಯತ್ನ ನಡೆದಿರುವುದು ಕಳಂಕ. ಈ ಕುರಿತಂತೆ ಸಮಗ್ರ ತನಿಖೆಯಾಗಬೇಕು. ಇದರ ಹಿಂದೆ ಯಾರೇ ಇದ್ದರೂ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: ಸಚಿವರ ಮೇಲೆ 2 ಬಾರಿ ಹನಿಟ್ರ್ಯಾಪ್ ಪ್ರಯತ್ನ: ಸತೀಶ್ ಜಾರಕಿಹೊಳಿ ಸ್ಫೋಟಕ ಮಾಹಿತಿ!