Site icon Kannada News-suddikshana

Davanagere: ಪಕ್ಷ ವಿರೋಧಿ ಚಟುವಟಿಕೆ ನಡೆಸಿದರೆ ಶಿಸ್ತು ಕ್ರಮಕ್ಕೆ ಶಿಫಾರಸು: ಹೆಚ್. ಬಿ. ಮಂಜಪ್ಪ ಎಚ್ಚರಿಕೆ ಕೊಟ್ಟಿದ್ದು ಯಾರಿಗೆ…? ಯಾಕೆ…? 

CONG PRESIDENT H.B. MANJAPPA WARNING

CONG PRESIDENT H.B. MANJAPPA WARNING

SUDDIKSHANA KANNADA NEWS/ DAVANAGERE/ DATE:07-10-2023

ದಾವಣಗೆರೆ (Davanagere): ದಾವಣಗೆರೆ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ತನಗೆ ಟಿಕೆಟ್ ಸಿಗುತ್ತದೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಇದು ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು. ಕೂಡಲೇ ನಿಲ್ಲಿಸದಿದ್ದರೆ ಪಕ್ಷ ವಿರೋಧಿ
ಚಟುವಟಿಕೆ ಎಂದು ಪರಿಗಣಿಸಿ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಬಿ. ಮಂಜಪ್ಪ ಎಚ್ಚರಿಕೆ ನೀಡಿದ್ದಾರೆ.

Read Also This Story:

Davanagere SSM Big Relief: ವನ್ಯಜೀವಿ ಪತ್ತೆ ಪ್ರಕರಣದ ಎಫ್ ಐ ಆರ್ ರದ್ದುಗೊಳಿಸಿದ ಕೋರ್ಟ್: ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಸೇರಿ ಏಳು ಮಂದಿ ನಿರಾಳ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ವಿಚಾರವಾಗಿ ಕೆಲವು ವ್ಯಕ್ತಿಗಳು ಹೊರಗಡೆಯಿಂದ ಬಂದು ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳು. ಕೇಂದ್ರ ಹಾಗೂ ರಾಜ್ಯ ನಾಯಕರ ಆಶೀರ್ವಾದ ಇದೆ ಎಂಬುದಾಗಿ
ಹೇಳಿಕೊಳ್ಳುತ್ತಾ ಓಡಾಡುತ್ತಿದ್ದಾರೆ. ಇದು ಸರಿಯಲ್ಲ. ಕೂಡಲೇ ನಿಲ್ಲಿಸಬೇಕು ಎಂದು ಸೂಚನೆ ನೀಡಿದರು.

ಅಲ್ಲಲ್ಲಿ ಸಭೆ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಈ ಮೂಲಕ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಹುಟ್ಟಿಸುವ ಕೆಲಸ ಮಾಡಲಾಗುತ್ತಿದೆ. ಇದು ಸರಿಯಲ್ಲ. ಪಕ್ಷದ ತತ್ವ, ಸಿದ್ಧಾಂತ, ಹೈಕಮಾಂಡ್ ಆದೇಶ ಪಾಲನೆ ಎಲ್ಲರೂ ಮಾಡಬೇಕು.
ಅದನ್ನು ಬಿಟ್ಟು ನನಗೆ ಟಿಕೆಟ್ ಸಿಗುತ್ತೆ, ನಾನೇ ಆಕಾಂಕ್ಷಿ ಎಂದೆಲ್ಲಾ ಹೇಳುವುದರಿಂದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಗೊಂದಲಕ್ಕೀಡಾಗುತ್ತಾರೆ ಎಂದು ಹೇಳಿದರು.

ಪಕ್ಷದ ಅಭ್ಯರ್ಥಿ ಆಯ್ಕೆ ಮಾಡುವಾಗ ಜಿಲ್ಲಾ ಮುಖಂಡರು, ಕಾರ್ಯಕರ್ತರು, ಬ್ಲಾಕ್ ಅಧ್ಯಕ್ಷರು, ಸಚಿವರು, ಶಾಸಕರು ಸೇರಿದಂತೆ ಎಲ್ಲರ ಅಭಿಪ್ರಾಯ ಪಡೆದು ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುತ್ತದೆ. ಇದನ್ನು
ತಿಳಿಯದ ಕೆಲ ವ್ಯಕ್ತಿಗಳು ನನಗೆ ಟಿಕೆಟ್ ಸಿಗುತ್ತದೆ ಎಂಬ ಮಾತನಾಡುತ್ತಿರುವುದು ಪಕ್ಷ ವಿರೋಧಿ ಚಟುವಟಿಕೆಯಾಗುತ್ತದೆ. ಇದು ಹೀಗೆ ಮುಂದುವರಿದರೆ ಶಿಸ್ತು ಕ್ರಮಕ್ಕೆ ರಾಜ್ಯ ನಾಯಕರು ಹಾಗೂ ಕೇಂದ್ರ ನಾಯಕರಿಗೆ ಶಿಫಾರಸು ಮಾಡಲಾಗುವುದು
ಎಂದು ಮಂಜಪ್ಪ ಹೇಳಿದರು.

ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಅಯೂಬ್ ಪೈಲ್ವಾನ್, ಕೆ. ಜಿ. ಶಿವಕುಮಾರ್, ಪಾಲಿಕೆ ಸದಸ್ಯ ಕೆ. ಚಮನ್ ಸಾಬ್, ಮುದ್ದೇಗೌಡ್ರು ಗಿರೀಶ್ ಮತ್ತಿತರರು ಹಾಜರಿದ್ದರು.

Exit mobile version