• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Thursday, May 22, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆ: ಸಿದ್ದರಾಮಯ್ಯ ಬಜೆಟ್ ಗೆ ಶಾಮನೂರು ಶಿವಶಂಕರಪ್ಪ ಬಹುಪರಾಕ್!

Editor by Editor
March 7, 2025
in ದಾವಣಗೆರೆ
0
ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆ: ಸಿದ್ದರಾಮಯ್ಯ ಬಜೆಟ್ ಗೆ ಶಾಮನೂರು ಶಿವಶಂಕರಪ್ಪ ಬಹುಪರಾಕ್!

SUDDIKSHANA KANNADA NEWS/ DAVANAGERE/ DATE:07-03-2025

ದಾವಣಗೆರೆ: ಕಾಂಗ್ರೆಸ್ ಪಕ್ಷ 2013ರಿಂದ 2018ರವರೆಗಿನ ಅವಧಿ ಮತ್ತು 2023ರಿಂದ ಆರಂಭವಾದ ಸರ್ಕಾರದ ಅವಧಿಯಲ್ಲಿ ನಾವು ಪ್ರಣಾಳಿಕೆಯಲ್ಲಿ ನೀಡಿದಂತೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ದಾಖಲೆಯ 16ನೇ ಬಜೆಟ್ ಸಮೃದ್ಧಿಯ ಪ್ರತೀಕವಾಗಿದೆ ಎಂದು ಅಭಿಪ್ರಾಯಪಟ್ಟಿರುವ ಅವರು ಬಿಜೆಪಿಯವರಿಗೆ ನಾಚಿಕೆಯಾಗಬೇಕು. ನಾವು ಕೊಟ್ಟ ಮಾತುಗಳನ್ನು ಉಳಿಸಿಕೊಂಡಿದ್ದೇವೆ. ಅವರ ಕಾಲದ ಬಜೆಟ್ ರೀತಿ ನಮ್ಮದು ಇರುವುದಿಲ್ಲ. ಕೇಂದ್ರ ಬಜೆಟ್‍ನಲ್ಲಿ ಕರ್ನಾಟಕಕ್ಕೆ ಏನೂ ಕೊಡುಗೆ ನೀಡಿಲ್ಲ. ಕರ್ನಾಟಕ ಉಳಿಸಿ ಎಂದು ಹೇಳುವುದಕ್ಕೆ ಅವರಿಗೆ ನೈತಿಕತೆಯಿಲ್ಲ. ನಾವು ನಮ್ಮ ಜನರನ್ನು ಕಾಪಾಡುತ್ತೇವೆ, ಕಾಪಾಡಿದ್ದೇವೆ” ಎಂದಿದ್ದಾರೆ.

ದಾವಣಗೆರೆ ಜಿಲ್ಲಾ ಆಸ್ಪತ್ರೆ ಸೇರಿದಂತೆ ಇತರೆ ಜಿಲ್ಲೆಗಳ ಒಟ್ಟು 08 ತಾಲ್ಲೂಕು ಆಸ್ಪತ್ರೆಗಳನ್ನು 650 ಕೋಟಿ ರೂ ವೆಚ್ಚದಲ್ಲಿ ನವೀಕರಣ ಮಾಡಲಾಗಿದೆ ಇದು ಉತ್ತಮವಾಗಿದೆ. ಬಂಜಾರ ಸಮುದಾಯದ ಪ್ರಮುಖ ಧಾರ್ಮಿಕ ಸ್ಥಳವಾದ ದಾವಣಗೆರೆ ಜಿಲ್ಲೆಯ ಸಂತ ಸೇವಾಲಾಲ್ ಪುಣ್ಯಕ್ಷೇತ್ರವಾದ ಸೂರಗೊಂಡನ ಕೊಪ್ಪದಲ್ಲಿ ಒಂದು ವಸತಿ ಶಾಲೆಯನ್ನು ಕೈಸ್ ವತಿಯಿಂದ ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ದಾವಣಗೆರೆಯ ಕೊಂಡಜ್ಜಿಯ ಪರಿಸರದಲ್ಲಿ ಸ್ಥಾಪಿಸಲಾಗಿರುವ ವೃತ್ತಿರಂಗಭೂಮಿ ರಂಗಾಯಣದಲ್ಲಿ ಮೂಲಭೂತ ಸೌಕರ್ಯ, ವೃತ್ತಿ ‘ರಂಗಾಯಣ ಸಮುಚ್ಛಯ ಹಾಗೂ ಥಿಯೇಟರ್ ಮ್ಯೂಸಿಯಂ ನಿರ್ಮಾಣಕ್ಕೆ ಸಿದ್ದರಾಮಯ್ಯನವರು ಬಜೆಟ್ನಲ್ಲಿ 3.00 ಕೋಟಿ ರೂ ತೆಗೆದಿರಿಸಿರುವುದು ಸ್ವಾಗತಾರ್ಹವೆಂದರು.

ಜಗಳೂರು ಕೆರೆ ತುಂಬಿಸುವ ಯೋಜನೆ, ಹೊನ್ನಾಳಿಯ ಬೆನಕನಹಳ್ಳಿ ಗೋವಿನಕೋವಿ ಮತ್ತು ಹನುಮಸಾಗರ ಕೆರೆ ತುಂಬಿಸುವ ಯೋಜನೆಗೆ ಅನುದಾನ ತೆಗೆದಿರಿಸಿರುವುದು ಹಾಗೂ ರಾಜ್ಯ ಸರ್ಕಾರವು ರೈಲ್ವೆ ಸಹಯೋಗದೊಂದಿಗೆ ತುಮಕೂರು-ದಾವಣಗೆರೆ ಸೇರಿದಂತೆ 9 ವಿವಿಧ ರೈಲ್ವೇ ಯೋಜನೆಗಳಿಗೆ ಮಂಜೂರಾತಿ ನೀಡಿರುವುದು ನೋಡಿದರೆ ರಾಜ್ಯ ಮತ್ತು ಜಿಲ್ಲೆಯನ್ನು ಸಮೃದ್ಧಿಗೆ ತೆಗೆದುಕೊಂಡು ಹೋಗುತ್ತಿರುವುದು ಕಾಣಬಹುದು ಎಂದು ಅವರುಗಳು ತಿಳಿಸಿದ್ದಾರೆ.

ಪ್ರಸಕ್ತ ವರ್ಷದಿಂದ ದಾವಣಗೆರೆ ಕೇಂದ್ರ ವಲಯದಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳನ್ನು ಸ್ಥಾಪನೆ ದಾವಣಗೆರೆ ಜಿಲ್ಲೆ ವಿದ್ಯುನ್ಮಾನ ಕ್ಯಾಮರಾ ಅಳವಡಿಕೆಗೆ ಮಂಜೂರಾತಿ ದೊರೆತಿದೆ ಎಂದು ತಿಳಿಸಿದ್ದಾರೆ.

ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ 06 ನೇ ತರಗತಿಯಿಂದ 12ನೇ ತರಗತಿಯವರೆಗಿನ ವಸತಿ ಶಾಲೆಗಳ ನಿರ್ಮಾಣ, ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರಿಗೆ ಹಾಗೂ ಬಿಸಿಯೂಟ ಕಾರ್ಯಕರ್ತರಿಗೆ ವೇತನ ಹೆಚ್ಚಳ, ನಿವೃತ್ತ ಪತ್ರಕರ್ತರಿಗೆ ಗೌರವ ಸಂಭಾವನೆ ಹೆಚ್ಚಳ, ಪತ್ರಕರ್ತರಿಗೆ ಆರೋಗ್ಯ ಸಂಜೀವಿನಿ ಯೋಜನೆ ಸೇರಿದಂತೆ ಹೀಗೆ ಎಲ್ಲಾ ವಲಯಕ್ಕೂ ಈ ಬಜೆಟ್ ಪೂರಕವಾಗಿ ಸ್ಪಂದಿಸಿದೆ ಎಂದಿದ್ದಾರೆ.

Next Post
ಈ ರಾಶಿಯ ಉನ್ನತ ಹುದ್ದೆಯಲ್ಲಿ ಇದ್ದವರು ಕಲಹಗಳನ್ನು ನಿಯಂತ್ರಿಸುವುದೇ ದೊಡ್ಡ ಸಮಸ್ಯೆಯಾಗಿದೆ

ಈ ರಾಶಿಯವರಿಗೆ ಧನ ಲಾಭವಿದೆ, ಆಂಜನೇಯ ಸ್ವಾಮಿ ಅನುಗ್ರಹ ಯಾವ ರಾಶಿಯವರ ಮೇಲಿದೆ?

Leave a Reply Cancel reply

Your email address will not be published. Required fields are marked *

Recent Posts

  • ಈ ರಾಶಿಯವರ ಆಸ್ತಿ ವಿಭಜನೆಗೆ ಒಡಹುಟ್ಟಿದವರಿಂದ ಸಂಪೂರ್ಣ ಬೆಂಬಲ, ಈ ಮೂರು ರಾಶಿಗೆ ಒಡಹುಟ್ಟಿದವರಿಂದ ಪ್ರೇಮಿಗಳ ಮದುವೆಗೆ ಸಂಪೂರ್ಣ ಬೆಂಬಲ
  • ಸಿದ್ದರಾಮಯ್ಯರನ್ನು ರಾಹುಲ್ ಗಾಂಧಿ ಕಡೆಗಣಿಸಿದ್ರಾ? ಸಂಭ್ರಮಾಚರಣೆಯಲ್ಲಿ 2 ವರ್ಷದ “ಕೈ” ಆಡಳಿತಕ್ಕೆ ಪ್ರಶಂಸೆ ವ್ಯಕ್ತಪಡಿಸಲಿಲ್ಲ ಯಾಕೆ?
  • ಹೂವಿನ ಗೂಡಂಗಡಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಕಟ್ಟುನಿಟ್ಟಿನ ಸೂಚನೆ
  • ಮೂವರು ಮನೆಗಳ್ಳರ ಸೆರೆ: 7,30,000 ರೂ. ಮೌಲ್ಯದ ಚಿನ್ನಾಭರಣ ವಶ
  • “ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ”

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In