Home ದಾವಣಗೆರೆ ಕಾಂಗ್ರೆಸ್ ಗ್ಯಾರಂಟಿಗಳಿಂದ ಮಹಿಳೆಯರ ಬದುಕಿನಲ್ಲಿ ಹೊಸ ಬದಲಾವಣೆ: ಡಾ. ಪ್ರಭಾ ಮಲ್ಲಿಕಾರ್ಜುನ್
ದಾವಣಗೆರೆಬೆಂಗಳೂರು

ಕಾಂಗ್ರೆಸ್ ಗ್ಯಾರಂಟಿಗಳಿಂದ ಮಹಿಳೆಯರ ಬದುಕಿನಲ್ಲಿ ಹೊಸ ಬದಲಾವಣೆ: ಡಾ. ಪ್ರಭಾ ಮಲ್ಲಿಕಾರ್ಜುನ್

Share
ಡಾ. ಪ್ರಭಾ ಮಲ್ಲಿಕಾರ್ಜುನ್
Share

ದಾವಣಗೆರೆ: ಮಹಿಳೆಯರ ಸಬಲೀಕರಣಕ್ಕಾಗಿ ಕಾಂಗ್ರೆಸ್ ಪಕ್ಷ ವಿಶೇಷ ಆದ್ಯತೆ ನೀಡಿ ಗ್ಯಾರಂಟಿ ಯೋಜನೆಗಳನ್ನು ನೀಡಿದೆ. ಅದರಿಂದಾಗಿ ಸಾವಿರಾರು ಕುಟುಂಬಗಳು ಆರ್ಥಿಕವಾಗಿ ಸಬಲವಾಗಿವೆ.ಮಹಿಳೆಯರು ಸ್ವಾಭಿಮಾನದ ಜೀವನ ನಡೆಸಲು ಸಾಧ್ಯಾಗಿದೆ ಎಂದು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ದಾವಣಗೆರೆಯ ಶಿವನಗರ ನಗರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನಜೀವನದಲ್ಲಿ ಮಹತ್ವದ ಬದಲಾವಣೆ ತಂದಿವೆ. ಮಹಿಳೆಯರು ಆರ್ಥಿಕವಾಗಿವಾಗಿ ಬಲಗೊಳಿಸಲು ಕಾಂಗ್ರೆಸ್ ಪಕ್ಷ ಈ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ತಿಳಿಸಿದರು.

ನಂತರ ಎಂ.ಸಿ.ಸಿ ‘ಎ’ ಬ್ಲಾಕ್‌ನ ನಾಗಮ್ಮ ಕೇಶವಮೂರ್ತಿ ಸಭಾಂಗಣದಲ್ಲಿ ನಡೆದ ಶ್ರೀ ಯೋಗಿ ನಾರೇಯಣ ತಾತಯ್ಯನವರ ಆರಾಧನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಶ್ರೀ ಆದಿಯೋಗಿ ಬಲಿಜ ಸಮಾಜದೊಂದಿಗೆ ನಾವು ಯಾವಾಗಲು ಇದ್ದೇವೆ ಎಂದರು. ಬಳಿಕ ಜೆ.ಎಚ್ ಪಟೇಲ್ ಬಡಾವಣೆಯ ಹೇಮರೆಡ್ಡಿ ಮಲ್ಲಮ್ಮ ಸಮಾಜದ ಸಭೆಯಲ್ಲಿ ಮಾತನಾಡಿದ ಅವರು, ಮಹಿಳೆಯರ ಬದುಕಿನಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ದಿಸೆಯಲ್ಲಿ ಕಾಂಗ್ರೆಸ್ ಸರ್ಕಾರ ಕಾರ್ಯನಿರ್ವಹಿಸಿದೆ ಎಂದು ಹೇಳಿದರು.

ನಂತರ ಮಡಿವಾಳ ಸಮಾಜದ ಸಭೆಯಲ್ಲಿ ಭಾಗವಹಿಸಿ, ಸರ್ಕಾರದ ಯೋಜನೆಗಳು ಯಾವುದೇ ಜಾತಿ, ಧರ್ಮ ಭೇದವಿಲ್ಲದೆ ಎಲ್ಲರಿಗೂ ತಲುಪುತ್ತಿವೆ ಎಂಬುದನ್ನು ವಿವರಿಸಿದರು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಬೇಕೆಂದು ಮನವಿ ಮಾಡಿದರು. ಬಳಿಕ ತೊಗಟವೀರ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ನೇಕಾರ ಮಹಾಸಭಾ ವತಿಯಿಂದ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿ, ನೇಕಾರ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ವಿವಿಧ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿ ಸ್ಥಳದಲ್ಲಿಯೂ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಜೀವನದಲ್ಲಿ ಬದಲಾವಣೆಯ ಹಾದಿ ತೆರೆದಿವೆ ಎಂದರು.

ಈ ಸಂದರ್ಭದಲ್ಲಿ ಸಮಾಜದ ಮುಖಂಡರುಗಳು,ಅಭಿಮಾನಿಗಳು, ಮಹಿಳೆಯರು ಇದ್ದರು.

Share

Leave a comment

Leave a Reply

Your email address will not be published. Required fields are marked *