ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಾಜ್ಯವನ್ನು ದಿವಾಳಿ ಮಾಡುತ್ತಿದೆಯಂತೆ ಕಾಂಗ್ರೆಸ್!

On: February 4, 2025 8:28 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:04-02-2025

ಬೆಂಗಳೂರು: ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸವನ್ನು ಬರಿದು ಮಾಡಿದ ಕಾಂಗ್ರೆಸ್ ಸರ್ಕಾರ, ಪ್ರತಿ ಕನ್ನಡಿಗನ ಮೇಲೆ ಬರೋಬ್ಬರಿ 1 ಲಕ್ಷ ರೂಪಾಯಿ ಸಾಲದ ಹೊರೆ ಹೊರಿಸಿದೆ. ಸಾಲ ಮಾಡಿ ಸರ್ಕಾರ ನಡೆಸುವ ದೇಶದ ಏಕೈಕ ಮುಖ್ಯಮಂತ್ರಿ ಎಂಬ ಕುಖ್ಯಾತಿಗೆ ಸಿದ್ದರಾಮಯ್ಯ ಅವರು ಪಾತ್ರರಾಗಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ವಿತ್ತೀಯ ಶಿಸ್ತಿನ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವ ಸ್ವಯಂಘೋಷಿತ ಅರ್ಥಿಕ ತಜ್ಞ ಸಿದ್ದರಾಮಯ್ಯ ಅವರ ಆಡಳಿತ ವೈಖರಿಯ ಪರಿಣಾಮವಾಗಿ ರಾಜ್ಯದ ಜನ ತಲೆಯ ಮೇಲೆ ಸಾಲ ಹೊತ್ತುಕೊಂಡು ತಿರುಗಾಡುವಂತಾಗಿದೆ
ಎಂದು ಹೇಳಿದೆ.

ಆಪರೇಷನ್‌ ಹಸ್ತಕ್ಕೆ ಒಳಗಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡವರು ಈಗ ಕಾಂಗ್ರೆಸ್ಸಿನ ಒಳಜಗಳದಲ್ಲಿ ಹೈರಾಣಾಗುತ್ತಿದ್ದಾರೆ. ಸಚಿವ ಸ್ಥಾನ, ನಿಗಮ ಮಂಡಳಿಗಳಲ್ಲಿ ಸ್ಥಾನಮಾನ ಪಡೆಯಲು ಹೋರಾಡಬೇಕಿದ್ದ ವಲಸಿಗ ಕಾಂಗ್ರೆಸ್ಸಿಗರಿಗೆ, ಈಗ ಸಹಕಾರಿ
ಬ್ಯಾಂಕ್‌ಗಳಲ್ಲಿನ ಹುದ್ದೆಗಾಗಿ ಯುದ್ಧ ಮಾಡಬೇಕಾದ ಪರಿಸ್ಥಿತಿಯಿದೆ ಎಂದು ತಿಳಿಸಿದೆ.

ವಲಸಿಗರನ್ನು ಹೀನಾಮಾನವಾಗಿ ನಡೆಸಿಕೊಳ್ಳುತ್ತಿರುವ ಕಾಂಗ್ರೆಸ್‌, ಯಾವುದೇ ಕಿಮ್ಮತ್ತು ಇಲ್ಲದೆ ಬೀದಿ ರಂಪಾಟ ಮಾಡುತ್ತಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳಿಂದ ಕಾಂಗ್ರೆಸ್ಸಿಗೆ ವಲಸೆ ಹೋದವರು ಅಕ್ಷರಶಃ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿದ್ದಾರೆ, ಸ್ಥಾನಮಾನಕ್ಕಾಗಿ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಎಕ್ಸ್ ಪೋಸ್ಟ್ ನಲ್ಲಿ ವಾಗ್ದಾಳಿ ನಡೆಸಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment