SUDDIKSHANA KANNADA NEWS/ DAVANAGERE/ DATE:18-08-2024
ದಾವಣಗೆರೆ: ಮೂಡಾ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದು ಹಾಗೂ ರಾಜ್ಯಪಾಲರ ಪ್ರಜಾಪ್ರಭುತ್ವ ಸಂವಿಧಾನ ವಿರೋಧಿ ನಡೆ ಖಂಡಿಸಿ ಆಗಸ್ಟ್ 19ರಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್‍ನಿಂದ ಪ್ರತಿಭಟನೆ ಆಯೋಜಿಸಿದೆ.
ರಾಜ್ಯಪಾಲರ ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ ನಡೆ ವಿರೋಧಿಸಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಬಿ.ಮಂಜಪ್ಪನವರ ಅಧ್ಯಕ್ಷತೆಯಲ್ಲಿ ರಾಜ್ಯಪಾಲರ ವಿರುದ್ಧ
ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ.
ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ನಗರದ ಅಂಬೇಡ್ಕರ್ ಸರ್ಕಲ್‍ನಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನೆ ಮೆರವಣಿಗೆ ಆರಂಭಗೊಂಡು ಜಯದೇವ ವೃತ್ತ ನಂತರ ಮಹಾತ್ಮಗಾಂಧಿ
ವೃತ್ತಕ್ಕೆ ತೆರಳಿ ಮಾನವ ಸರಪಳಿ ನಿರ್ಮಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.
ಈ ಪ್ರತಿಭಟನೆಯಲ್ಲಿ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಶಾಸಕರಾದ ಕೆ. ಎಸ್.ಬಸವಂತಪ್ಪ,ಡಿ.ಜಿ ಶಾಂತನಗೌಡರು,ಬಿ.ದೇವೇಂದ್ರಪ್ಪ, ಬಸವರಾಜು ವಿ ಶಿವಗಂಗಾ ಪಾಲ್ಗೊಳ್ಳುವರು. ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ದಾವಣಗೆರೆ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಎಪಿಎಂಸಿ ಮಾಜಿ ಸದಸ್ಯರು, ಜಿಲ್ಲೆಯ ಗ್ರಾಮ ಪಂಚಾಯತ್ ಹಾಲಿ ಮತ್ತು ಮಾಜಿ ಸದಸ್ಯರು, ದಾವಣಗೆರೆ ಮಹಾನಗರ ಪಾಲಿಕೆಯ ಹಾಲಿ ಮತ್ತು ಮಾಜಿ ಸದಸ್ಯರು, ಡಿಸಿಸಿ ಬ್ಯಾಂಕ್ ಸದಸ್ಯರುಗಳು, ಕಾಂಗ್ರೆಸ್ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತರ, ಅಂಗವಿಕಲರ, ಕಿಸಾನ್ ಕಾಂಗ್ರೆಸ್, ಕಾರ್ಮಿಕರ, ವೈದ್ಯರ, ವಕೀಲರ ವಿಭಾಗಗಳು, ಎನ್.ಎಸ್.ಯು.ಐ., ಯುವ ಘಟಕ, ಮಹಿಳಾ ಘಟಕ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ದಾವಣಗೆರೆ ಜಿಲ್ಲೆಯ ಅಹಿಂದ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ, ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಬಿ.ಹೆಚ್.ವೀರಭದ್ರಪ್ಪ, ಎಸ್.ಟಿ ಘಟಕದ ಮಂಜಣ್ಣ ಕುಂದವಾಡ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಅಯೂಬ್ ಪೈಲ್ವಾನ್, ಕೆ.ಜಿ.ಶಿವಕುಮಾರ್, ಜಿ.ಸಿ.ನಿಂಗಪ್ಪ ಹದಡಿ, ಬಿ.ಕೆ.ಪರಶುರಾಮ್ ಮಾಗಾನಹಳ್ಳಿ ಕೋರಿದ್ದಾರೆ.