ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

EXCLUSIVE STORY: ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಸಸ್ಪೆನ್ಸ್ : ದೆಹಲಿ ಮಟ್ಟದಲ್ಲಿ ಪ್ರಭಾ ಮಲ್ಲಿಕಾರ್ಜುನ್ – ವಿನಯ್ ಕುಮಾರ್ ಹೆಸರು ಚರ್ಚೆ… ಯಾರಾಗ್ತಾರೆ ಸ್ಪರ್ಧಾಳು…?

On: March 6, 2024 11:52 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:07-03-2024

ದಾವಣಗೆರೆ: ಬಿಜೆಪಿ ಭದ್ರಕೋಟೆ ಛಿದ್ರ ಮಾಡಲು ಈ ಬಾರಿ ಎಐಸಿಸಿ ತಂತ್ರಗಾರಿಕೆ ರೂಪಿಸಿದೆ. ಪ್ರತಿಷ್ಠೆಯಾಗಿ ಸ್ವೀಕರಿಸುವ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ದಾವಣಗೆರೆ ಜಿಲ್ಲೆಯಲ್ಲಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸುವ ನಿಟ್ಟಿನಲ್ಲಿ ಅಳೆದು ತೂಗಿ ಟಿಕೆಟ್ ನೀಡಲು ನಿರ್ಧರಿಸಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಹಾಗೂ ಭಾರತೀಯ ಯುವ ಕಾಂಗ್ರೆಸ್ ಔಟ್ರೀಚ್ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ನಡುವೆ ಟಿಕೆಟ್ ಪಡೆಯಲು ನೇರ ಹಣಾಹಣಿ ಏರ್ಪಟ್ಟಿದೆ.

ದಾವಣಗೆರೆ ಜಿಲ್ಲೆಯಾದಾಗಿನಿಂದಲೂ ಇದುವರೆಗೆ ಕಾಂಗ್ರೆಸ್ ಗೆ ಲೋಕಸಭೆ ಚುನಾವಣೆಯಲ್ಲಿ ಗೆಲುವು ದಕ್ಕಿಲ್ಲ. ಈ ಬಾರಿ ಡಾ. ಪ್ರಭಾ ಮಲ್ಲಿಕಾರ್ಜುನ್ ಇಲ್ಲವೇ ವಿನಯ್ ಕುಮಾರ್ ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್ ಸಿಗುವುದು ಖಚಿತ ಎಂದು
ದೆಹಲಿಯ ಕಾಂಗ್ರೆಸ್ ಮೂಲಗಳು ತಿಳಿಸಿವೆ. ಮಾತ್ರವಲ್ಲ, ವಿನಯ್ ಕುಮಾರ್ ಅವರೂ ಸಹ ಟಿಕೆಟ್ ಗಿಟ್ಟಿಸಲು ಭಾರೀ ಪ್ರಯತ್ನ ಮುಂದುವರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ವಿನಯ್ ಕುಮಾರ್ ಪರ ಒಲವು ಇದೆ. ಸಿದ್ದರಾಮಯ್ಯ ಅವರು ಕೊಪ್ಪಳ, ಮೈಸೂರು ಹಾಗೂ ದಾವಣಗೆರೆಯಲ್ಲಿ ಕುರುಬ ಸಮುದಾಯದವರಿಗೆ ಟಿಕೆಟ್ ನೀಡಬೇಕೆಂಬ ಮನವಿಯನ್ನು ಹೈಕಮಾಂಡ್ ಗೆ ಮಾಡಿದ್ದಾರೆ.

ಇನ್ನು ಎಸ್. ಎಸ್. ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಅವರ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದೆ. ಸಮಾಜ ಸೇವೆ, ಆರೋಗ್ಯ ಶಿಬಿರ, ಉಚಿತ ತಪಾಸಣಾ ಶಿಬಿರ, ಕ್ಯಾನ್ಸರ್ ಬಗ್ಗೆ ಜಾಗೃತಿ, ಬಡವರಿಗೆ ಸಹಾಯ ಮಾಡುವ ಮೂಲಕ ಗಮನ ಸೆಳೆದಿರುವ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿದೆ. ಅದೇ ರೀತಿಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಕೆಲಸ ಮಾಡಿರುವ ಹಾಗೂ ಪಾದಯಾತ್ರೆ ಮೂಲಕ ಜಿಲ್ಲೆಯ ಜನರ ಮನೆಮಾತಾಗಿರುವ ವಿನಯ್ ಕುಮಾರ್ ಅವರ ಹೆಸರು ಸಹ ಅಷ್ಟೇ ಪ್ರಬಲವಾಗಿ ಕೇಳಿ ಬರತೊಡಗಿದೆ.

ಚನ್ನಯ್ಯ ಒಡೆಯರ್ ಬಳಿಕ…!

ಚನ್ನಯ್ಯ ಒಡೆಯರ್ ಅವರು ಮೂರು ಬಾರಿ ದಾವಣಗೆರೆ ಜಿಲ್ಲೆಯಲ್ಲಿ ಸಂಸದರಾಗಿ ಆಯ್ಕೆಯಾಗಿದ್ದು ಬಿಟ್ಟರೆ, ಉಳಿದಂತೆ ಸಾದು ಲಿಂಗಾಯತ ಸಮಾಜದವರೇ ಸಂಸದರಾಗಿರುವುದು ವಿಶೇಷ. ಚಿತ್ರದುರ್ಗ – ದಾವಣಗೆರೆ ಲೋಕಸಭಾ ಕ್ಷೇತ್ರ ಇದ್ದಾಗಲೂ ಕಾಂಗ್ರೆಸ್ ನಿಂದ ಲಿಂಗಾಯತ ಸಮುದಾಯದವರನ್ನು ಹೊರತುಪಡಿಸಿದಂತೆ ಚನ್ನಯ್ಯ ಒಡೆಯರ್ ಮಾತ್ರ ಎಂಪಿ ಆಗಿದ್ದರು. ಒಟ್ಟಾರೆ ಲೋಕಸಭಾ ಕ್ಷೇತ್ರದ ಇತಿಹಾಸ ಗಮನಿಸಿದರೆ ಆರು ಬಾರಿ ಕಾಂಗ್ರೆಸ್ ಹಾಗೂ ಆರು ಬಾರಿ ಬಿಜೆಪಿ ಗೆದ್ದಿದೆ. ಆದ್ರೆ, ಈ ಬಾರಿ ಗೆಲ್ಲುತ್ತಾರೆ ಎಂಬುದೇ ಕದನ ಕುತೂಹಲ.

ಪಾದಯಾತ್ರೆ ಯಶಸ್ಸು:

ವಿನಯ್ ಕುಮಾರ್ ಅವರ ಪರ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಚನ್ನಗಿರಿ, ಜಗಳೂರು, ಹರಪನಹಳ್ಳಿ, ದಾವಣಗೆರೆ, ಹೊನ್ನಾಳಿ, ಹರಿಹರ ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿಯೂ ವಿನಯ್ ಕುಮಾರ್ ಅವರ ಪರ ಒಲವು ಇದೆ. ಯಾಕೆಂದರೆ ವಿನಯ್ ಕುಮಾರ್ ಇನ್ನೂ ಯುವಕರು. ಶಿಕ್ಷಣ ಕ್ಷೇತ್ರದಲ್ಲಿಯೂ ಕೆಲಸ ಮಾಡಿದ್ದಾರೆ. ಜಿಲ್ಲೆಯಾದ್ಯಂತ ಪಾದಯಾತ್ರೆ ನಡೆಸಿ ಜನರ ಮಾತಾಗಿದ್ದಾರೆ. ಎಲ್ಲಾ ಸಮುದಾಯದವರ ಪ್ರೀತಿ, ವಿಶ್ವಾಸ ಸಂಪಾದನೆ ಮಾಡಿದ್ದಾರೆ. ಹಾಗಾಗಿ, ಯುವಕರಿಗೆ ಟಿಕೆಟ್ ನೀಡಿದರೆ ಗೆಲುವು ಕಷ್ಟವಾಗದು. ಎಸ್. ಎಸ್. ಮಲ್ಲಿಕಾರ್ಜುನ್, ಶಾಮನೂರು ಶಿವಶಂಕರಪ್ಪರ ಆಶೀರ್ವಾದ ಸಿಕ್ಕರೆ, ಅಹಿಂದ ಮತ ಕಾಂಗ್ರೆಸ್ ಗೆ ಬಿದ್ದರೆ ವಿನಯ್ ಕುಮಾರ್ ಗೆಲುವು ಕಷ್ಟವಾಗದು ಎಂಬ ವಿಶ್ಲೇಷಣೆಗೂ ನಡೆಯುತ್ತಿವೆ. ಹಾಗಾಗಿ, ವಿನಯ್ ಕುಮಾರ್ ಹೆಸರು ಹೈಕಮಾಂಡ್ ಮಟ್ಟದಲ್ಲಿ ತುಂಬಾನೇ  ರ್ಚೆಯಾಗುತ್ತಿದೆ.

ಸಮಾಜ ಸೇವೆ:

ವಿನಯ್ ಕುಮಾರ್ ಪಾದಯಾತ್ರೆ, ಕಾರ್ಯಕ್ರಮಗಳು, ಅಂಗವಿಕಲರು, ಆಟೋ ಚಾಲಕರು, ಆಟೋ ಚಾಲಕರ ಮಕ್ಕಳಿಗೆ ಸಹಾಯ, ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ಪೀಠೋಪಕರಣ, ಶೂ, ಸಹಾಯ ಹಸ್ತ, ಸಂಘ ಸಂಸ್ಥೆಗಳ ಪ್ರಶಂಸೆಗೆ
ಪಾತ್ರರಾಗಿದ್ದಾರೆ. ಸಮಾಜ ಸೇವೆಯಲ್ಲಿಯೂ ಮುಂದಿದ್ದಾರೆ. ರಾಜಕೀಯದಲ್ಲಿ ಚತುರತೆಯ ಮಾತು ಆಡುತ್ತಾರೆ. ಮಾತ್ರವಲ್ಲ, ತಂತ್ರಗಾರಿಕೆ ರೂಪಿಸುವುದರಲ್ಲಿ ನಿಪುಣರು. ಸಂಘಟನೆಯ ಶಕ್ತಿ ಇರುವ ಕಾರಣಕ್ಕೆ ಬಿಜೆಪಿ ಮಣಿಸಲು ಕಾಂಗ್ರೆಸ್ ಹೈಕಮಾಂಡ್ ನಲ್ಲಿಯೂ ಈ ಬಗ್ಗೆ ದೀರ್ಘ ಹೊತ್ತು ಚರ್ಚೆಯಾಗಿದೆ.

ಪ್ರಭಾ ಮಲ್ಲಿಕಾರ್ಜುನ್ ರ ಮೇಲೆ ಒತ್ತಡ:

ಇನ್ನು ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಸಮಾಜ ಸೇವೆ, ಉಚಿತ ಆರೋಗ್ಯ ತಪಾಸಣೆ ಶಿಬಿರ, ಜನರೊಟ್ಟಿಗೆ ಬೆರೆಯುವ ರೀತಿ, ಬಡವರಿಗೆ ಸಹಾಯ, ಎಸ್. ಎಸ್. ಕೇರ್ ಟ್ರಸ್ಟ್ ನಡಿ ಸಾವಿರಾರು ಜನರಿಗೆ ಆರೋಗ್ಯ ದಾಸೋಹ ಸೇರಿದಂತೆ ಎಲ್ಲರನ್ನೂ ಗಮನ ಸೆಳೆಯುತ್ತಿರುವ ನಾಯಕಿ. ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲೆಡೆ ಸ್ಪರ್ಧೆ ಮಾಡಬೇಕೆಂಬ ಒತ್ತಡ ಇದೆ. ಪ್ರಭಾ ಮಲ್ಲಿಕಾರ್ಜುನ್ ಅವರ ಕಾರ್ಯವೈಖರಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ನಡೆಸಿದ್ದರು. ಮಾವ ಶಾಮನೂರು ಶಿವಶಂಕರಪ್ಪ ಹಾಗೂ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದರು.

ಮಾವ, ಪತಿ ಗೆಲ್ಲಿಸಿದ್ದ ಪ್ರಭಾ ಮೇಡಂ:

ವಿಧಾನಸಭೆ ಚುನಾವಣೆಯಲ್ಲಿ ಬಿರುಸಿನ ಪ್ರಚಾರ ನಡೆಸಿದ್ದ ಪ್ರಭಾ ಮಲ್ಲಿಕಾರ್ಜುನ್ ಅವರ ಕಾರ್ಯವೈಖರಿ ಸೂಜಿಗಲ್ಲಿನಂತೆ ಸೆಳೆದಿತ್ತು. ಎಷ್ಟರ ಮಟ್ಟಿಗೆ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಪ್ರಭಾ ಮಲ್ಲಿಕಾರ್ಜುನ್ ಅವರು ಸ್ಪರ್ಧೆ ಮಾಡುತ್ತಾರೆ ಎಂದೆಲ್ಲಾ ಕಾರ್ಯಕರ್ತರು ಮಾತನಾಡಲಾರಂಭಿಸಿದ್ದರು. ಅಷ್ಟು ಜನಪ್ರಿಯತೆ ಗಳಿಸಿದ್ದರು. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಿದರೆ ಸಾದು ಲಿಂಗಾಯತ ಸಮುದಾಯದ ಮತಗಳು, ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳ ಫಲ, ಅಲ್ಪಸಂಖ್ಯಾತರ ಮತಗಳು ಬಂದರೆ ಗೆಲುವು ಕಷ್ಟವಾಗದು. ಮಲ್ಲಿಕಾರ್ಜುನ್ ಹಾಗೂ ಶಾಮನೂರು ಶಿವಶಂಕರಪ್ಪರು ಬಿರುಸಿನ ಪ್ರಚಾರ ನಡೆಸಿದರೆ ಈ ಬಾರಿ ಬಿಜೆಪಿ ಮಣ್ಣು ಮುಕ್ಕಿಸಬಹುದು ಎಂಬ ಲೆಕ್ಕಾಚಾರ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿದೆ.

ಒಳ್ಳೆಯದಕ್ಕಾಗಿ ಆಶಿಸುತ್ತಿದ್ದಾರೆ. ಯಾವುದೇ ರಾಜಕೀಯ ಹಿನ್ನೆಲೆಯಿಂದ ಬಂದ ನಾನು ಕಠಿಣ ಪರಿಶ್ರಮ, ಜನರ ಪ್ರೀತಿ ಮತ್ತು ಉತ್ಸಾಹದಿಂದ ಇಲ್ಲಿಯವರೆಗೆ ಬಂದಿದ್ದೇನೆ. ನನ್ನ ದೇಶ ಮತ್ತು ಅದರ ಜನರ ಸೇವೆ ಮಾಡುವ
ಅವಕಾಶವನ್ನು ಪಡೆಯಲು ನಿಮ್ಮ ಬೆಂಬಲ ಬೇಕು. ಹೊಸ ಅಧ್ಯಾಯಕ್ಕೆ ದಾವಣಗೆರೆ ಸಿದ್ಧ! ಎಂದು ವಿನಯ್ ಕುಮಾರ್ ಅವರು ತಿಳಿಸಿದ್ದಾರೆ. 

ಒಟ್ಟಿನಲ್ಲಿ ಪ್ರಭಾ ಮಲ್ಲಿಕಾರ್ಜುನ್ ಹಾಗೂ ವಿನಯ್ ಕುಮಾರ್ ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್ ಘೋಷಣೆಯಾಗುವ ಸಾಧ್ಯತೆ ಹೆಚ್ಚಿದ್ದು, ಯಾರಿಗೆ ಟಿಕೆಟ್ ಸಿಗುತ್ತದೆ ಎಂಬುದು ಎಲ್ಲರ ಕುತೂಹಲ ಕೆರಳಿಸಿದೆ. ಇನ್ನೆರಡು ಇಲ್ಲವೇ ಇನ್ನೊಂದು ವಾರದಲ್ಲಿ ಟಿಕೆಟ್ ಘೋಷಿಸಲಾಗುತ್ತದೆ ಎಂದು ದೆಹಲಿಯ ಎಐಸಿಸಿ ಮಟ್ಟದಲ್ಲಿ ಸಂಪರ್ಕದಲ್ಲಿರುವ ಕಾಂಗ್ರೆಸ್ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment